ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಆರನೇ ದಿನ ಫೆಬ್ರವರಿ 27, 2023 ರ ಸೋಮವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಮಹಾಮೃತ್ಯುಂಜಯ ಹೋಮ ನೆರವೇರಿತು.
ಮುಂದಿನ 6 ತಿಂಗಳಲ್ಲಿ ಮಾಧ್ಯಮಗಳ ಮೇಲೆ ನಿಯಂತ್ರಣ ತರುತ್ತೇವೆ ಎನ್ನುವ ಮೂಲಕ ತಮಿಳುನಾಡು ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ವಿವಾದಿತ ಹೇಳಿಕೆ ನೀಡಿದ್ದಾರೆ. ಕೊಯಮತ್ತೂರಿನಿಂದ ಚೆನ್ನೈವರೆಗೆ ನಡೆದ ರೋಡ್ ಶೋನಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ. “ಮಾಧ್ಯಮವು ನಮ್ಮ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದೆ ಎಂಬ ಚಿಂತೆಗಳನ್ನು ಮರೆತುಬಿಡಿ. ಮುಂದಿನ ಆರು ತಿಂಗಳಲ್ಲಿ ನಾವು ಮಾಧ್ಯಮದ ಮೇಲೆ ನಿಯಂತ್ರಣ ಮತ್ತು ಅವುಗಳನ್ನು ನಮ್ಮ ಅಡಿಯಲ್ಲಿ