Home Posts tagged #Arrest

ಕಾರ್ಕಳ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ : ಶಾಲಾ ಮುಖ್ಯೋಪಾಧ್ಯಾಯನ ಬಂಧನ 

ಸುಮಾರು 13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬೋಳ ಗ್ರಾಮದ ಪಿಲಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಎ.6ರಂದು ಬಂಧಿಸಿದ್ದಾರೆ. ಬೋಳ ವಂಜಾರಕಟ್ಟೆ ನಿವಾಸಿ, ಇಚ್ಚೋಡಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ಯ(58) ಬಂಧಿತ ಆರೋಪಿ. ಈತ ಶಾಲೆಯ 13 ಮಕ್ಕಳಿಗೆ 2023ರ

ಕುಂದಾಪುರ: ಅಡಿಕೆ ಕಳವು ಪ್ರಕರಣದ ಮೂವರ ಬಂಧನ

ಹಲವು ಕಡೆಗಳಲ್ಲಿ ನಡೆದ ಅಡಿಕೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಂದಾಪುರ ಗುಲ್ವಾಡಿ ಗ್ರಾಮದ ಅಮೀರ್ ಝೈನುದ್ದೀನ್ ಭಟ್ಕಳ ಬಿಳಲಖಂಡ ಗ್ರಾಮದ ಮುನಾವರ್,ಭಟ್ಕಳ ಉಸ್ಮಾನ್ ನಗರದ ನಿಸಾರ್ ಆಸೀಫ್ ಅನ್ನಾರ್ ಬಂಧಿತ ಆರೋಪಿಗಳು. ಇವರು ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿ ಎಂಬಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ

ಕೊಣಾಜೆ: ಗಾಂಜಾ ಬೇಟೆ – ನಾಲ್ವರ ಬಂಧನ

ಕೊಣಾಜೆ: ಅಕ್ರಮವಾಗಿ ಗಾಂಜಾ ಸಾಗಾಟ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ಕು ಮಂದಿಯನ್ನು ಮಂಗಳೂರು ಗ್ರಾಮಾಂತರ, ಕಂಕನಾಡಿ ಹಾಗೂ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಎಸಿಪಿ ನೇತೃತ್ವದ ಮಾದಕವಿರೋಧಿ ಪೊಲೀಸ್ ತಂಡ ಕರ‍್ಯಾಚರಣೆ ನಡೆಸಿ ಎನ್ ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದೆ.ದೇರಳಕಟ್ಟೆಯ ಬೆಳ್ಮ ಕನಕೂರಿನ ಅಶ್ರಫ್ ಯಾನೆ ಪೊಂಗ (30), ತಿಲಕನಗರದ ಮೊಹಮ್ಮದ್ ಅಲ್ಫಾಝ್ ( 26) ಇಬ್ಬರನ್ನು 115 ಗ್ರಾಂ

ಉಳ್ಳಾಲ: ಗಾಂಜಾ ಮಾರಾಟ ಯತ್ನ, ಓರ್ವನ ಬಂಧನ

ಉಳ್ಳಾಲ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಎಸಿಪಿ ನೇತೃತ್ವದ ಮಾದಕ ದ್ರವ್ಯ ವಿರೋಧಿ ತಂಡ ಬೆಳ್ಮ ಗ್ರಾ.ಪಂ ವ್ಯಾಪ್ತಿಯ ಖಾಲಿ ಜಾಗದಿಂದ ಬಂಧಿಸಲಾಗಿದೆ.ಕೋಟೆಕಾರು ಬೀರಿ ನಿವಾಸಿ ಮಹಮ್ಮದ್ ಇರ್ಫಾನ್ (22) ಬಂಧಿತ.ಬಂಧಿತನಿಂದ ರೂ. 9,660 ಬೆಲೆಯ 322 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಾರ್ಯಾಚರಣೆಯಲ್ಲಿ ಎಸಿಪಿ ಧನ್ಯಾ ನಾಯಕ್, ಕೊಣಾಜೆ ಠಾಣಾ ಉಪನಿರೀಕ್ಷಕ ನಾಗರಾಜ್ ಹಾಗೂ

ಉಳ್ಳಾಲ: ಗಾಂಜಾ ಮತ್ತಿನಲ್ಲಿ ದಾಂಧಲೆ: ಸಾರ್ವಜನಿಕರಿಂದ ತರಾಟೆ, ಪೊಲೀಸರಿಂದ ಬಂಧನ

ಉಳ್ಳಾಲ: ಗಾಂಜಾ ವ್ಯಸನಿಯೋರ್ವ ನಶೆಯಲ್ಲಿ ಸಾರ್ವಜನಿಕರತ್ತ ಜಲ್ಲಿ ಕಲ್ಲೆಸೆದು ದಾಂಧಲೆ ನಡೆಸಿದ್ದು, ತಡೆಯಲು ಹೋದ ವ್ಯಕ್ತಿಗೆ ಸೋಡಾ ಬಾಟಲಿಯಿಂದ ಹಲ್ಲೆಗೈದಿದ್ದಾನೆ. ಧಾಂದಲೆಕೋರನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ.ಮಂಚಿಲ ನಿವಾಸಿ ಮಹಮ್ಮದ್ ಮುಶ್ತಾಕ್ ಯಾನೆ ಮಿಸ್ತ ಎಂಬಾತ ಶುಕ್ರವಾರ ಮದ್ಯಾಹ್ನದ ವೇಳೆ ನಶೆಯ ಮತ್ತಿನಲ್ಲಿ ತೊಕ್ಕೊಟ್ಟು ಒಳಪೇಟೆಯ ರಿಕ್ಷಾ ಪಾರ್ಕಿನ ಬಳಿಯ ರೈಲ್ವೇ

ಕಡಬದ ಪೆರಾಬೆಯಲ್ಲಿ ಅನುಮಾನಸ್ಪದ ವ್ಯಕ್ತಿಯ ಬಂಧನ

ಕಡಬ ತಾಲೂಕಿನ ಪೆರಾಬೆ ಗ್ರಾಮದ ಮಾರ್ ಇವಾನಿಯೋಸ್ ಮಹಿಳಾ ಬಿಎಡ್ ಕಾಲೇಜಿನ ಕಟ್ಟಡದ ಹಿಂಬದಿಯಲಲ್ಲಿ ಮುಖಕ್ಕೆ ಬಟ್ಟೆಯನ್ನು ಕಟ್ಟಿ ವ್ಯಕ್ತಿಯ ಗುರುತು ಸಿಗದಂತೆ ಅಡಗಿ ಕುಳಿತುಕೊಂಡೊಬ್ಬನನ್ನು, ರಾತ್ರಿ ಗಸ್ತು ತಿರುಗುತ್ತಿದ್ದ ಕಡಬ ಠಾಣೆಯ ಸಹಾಯಕ ಉಪನರೀಕ್ಷಕರಾದ ಸುರೇಶ್ ಸಿಟಿಯವರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಶರತ್ (34) ಮರವೂರು, ಮಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಕಡಬ ಠಾಣೆಯ ಸಿಬ್ಬಂದಿಗಳು ಈ ಮಾರ್ಗವಾಗಿ ಗಸ್ತು ತಿರುಗುತ್ತಿದ್ದ