Home Posts tagged #arun kumar puttila

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಬ್ರಿಜೇಶ್ ಚೌಟ ಭೇಟಿ

ಪುತ್ತೂರು: ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ

ಉಳ್ಳಾಲ: ನೈತಿಕ ಪೊಲೀಸ್ ಗಿರಿ ಪ್ರಕರಣ – ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅರುಣ್ ಪುತ್ತಿಲ

ಉಳ್ಳಾಲ: ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವಿದ್ಯಾರ್ಥಿನಿಯರ ಪೋಷಕರನ್ನು ಠಾಣೆಗೆ ಕರೆಸಿ ವಾಸ್ತವ ವಿಚಾರವನ್ನು ತಿಳಿದುಕೊಳ್ಳಬೇಕಿದೆ. ಹಿಂದೂ ಕಾರ್ಯಕರ್ತರಿಗೆ ಘಟನೆ ಬಗ್ಗೆ ಕಿರುಕುಳ ನೀಡುವುದು, ಠಾಣೆಗೆ ಕರೆಸುವುದು ಮಾಡಬಾರದು ಎಂದು ಹಿಂದೂ ಮುಖಂಡ ಅರುಣ್ ಪುತ್ತಿಲ ಹೇಳಿದ್ದಾರೆ. ಸೋಮೇಶ್ವರ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರ ಬಂಧನ ವಿಚಾರವಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣಾಧಿಕಾರಿಗಳ ಜೊತೆಗೆ

ಪುತ್ತೂರು : ಗಾಯಾಳುವಿನ ಕಿವಿಯ ತಮಟೆಗೆ ಹಾನಿ, ಡಿವೈಎಸ್ಪಿ ಅಮಾನತಿಗೆ ಪುತ್ತಿಲ ಆಗ್ರಹ

ಪುತ್ತೂರಿನಲ್ಲಿ ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದಕೀಯ ವರದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಾಯಾಳು ಅವಿನಾಶನ ಕಿವಿಯದ್ದು ಎಂದು ಹೇಳಲಾದ ಸ್ಕ್ಯಾನಿಂಗ್ ಪೋಟೋಗಳು ವೈರಲ್ ಆಗುತ್ತಿದ್ದಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ದ.ಕ ಜಿಲ್ಲಾ ಎಸ್ಪಿಯವರನ್ನು ಭೇಟಿಯಾಗಿದ್ದಾರೆ. ತೀವ್ರ ಗಾಯಗೊಂಡ ಅವಿನಾಶ್ ರ ಕಿವಿ ನೋವು ಕಡಿಮೆಯಾಗದ ಕಾರಣ ಕಿವಿಯ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಈ ವೇಳೆ ಕಿವಿ ತಮಟೆ

ಯತ್ನಾಳ್ ಪುತ್ತೂರು ಅಸ್ಪತ್ರೆ ಭೇಟಿ ಸಂದರ್ಭ – ಅಜಿತ್ ರೈ ಹೊಸಮನೆಯನ್ನು ಹೊರದೂಡಿದ ಹಿಂದೂ ಕಾರ್ಯಕರ್ತರು

ಪುತ್ತೂರು: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪುತ್ತೂರು ಅಸ್ಪತ್ರೆಗೆ ಆಗಮಿಸಿದ ಸಂದರ್ಭ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ಹೊರದೂಡಿದ ಘಟನೆ ನಡೆದಿದೆ. ಪೋಲೀಸ್ ದೌರ್ಜನ್ಯದಿಂದ ಗಾಯಗೊಂಡವರನ್ನು ಭೇಟಿಯಾಗಲು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ಅಸ್ಪತ್ರೆಯ ಒಳಹೋಗುತ್ತಿದ್ದಂತೆ, ಒಳಪ್ರವೇಶಿಸಲು ಯತ್ನಿಸಿದ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ಹೊರ ತಳ್ಳಿದ್ದಾರೆ. ಈ ಹಿಂದೆ

ಪುತ್ತೂರಿನ ನವನಿರ್ಮಾಣಕ್ಕೆ ಅರುಣ್ ಕುಮಾರ್‌ನ್ನು ಗೆಲ್ಲಿಸಬೇಕು : ಪುತ್ತೂರಿನಲ್ಲಿ ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಹೇಳಿಕೆ

ಪುತ್ತೂರು; ಹಿಂದುತ್ವದ ಆಧಾರದಲ್ಲಿ ಪುತ್ತೂರಿನ `ನವನಿರ್ಮಾಣ’ ಆಗಬೇಕಾದರೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ ದೇಶಕ್ಕೆ ಮಾದರಿಯಾದ ತಾಲೂಕು ನಿರ್ಮಾಣ ಮಾಡಬಲ್ಲ ಏಕೈಕ ನಾಯಕ ಬೇಕಾಗಿದೆ. ಮೋದಿ ಮಾದರಿ-ಯೋಗಿ ಮಾದರಿ ಗುಜರಾತ್ ಯುಪಿ ಮಾದರಿ ಆಡಳಿತ ಬಯಸುವ ನಾವು ನಮ್ಮೂರಿನಲ್ಲಿ ಈ ಮಾದರಿ ನೋಡಲು ಅರುಣ್ ಕುಮಾರ್ ಪುತ್ತಿಲರನ್ನು ವಿಧಾನಸಭೆಗೆ ಕಳುಹಿಸಬೇಕಾಗಿದೆ ಎಂದು ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಹೇಳಿದರು. ಪುತ್ತುರಿನ ಮುಕ್ರಂಪಾಡಿಯ ಸುಭದ್ರಾ

ಅರುಣ್ ಕುಮಾರ್ ಪುತ್ತಿಲರಿಂದ ಪ್ರಣಾಳಿಕೆ ಬಿಡುಗಡೆ

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಪುತ್ತೂರು ದರ್ಬೆ ಸುಭದ್ರ ಕಲ್ಯಾಣ ಮಂಟಪದ ಬಳಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಸುನಿಲ್ ಬೋರ್ಕರ್, ಭಾಸ್ಕರ್ ಆಚಾರ್ಯ ಇಂದಾರು, ಡಾ.ಗಣೇಶ್ ಪ್ರಸಾದ್ ಮುದ್ರಾಜೆ, ಪ್ರಸನ್ನ ಕುಮಾರ್ ಮಾರ್ತಾ, ಸ್ನೇಹ ಸಿಲ್ಕ್ ನ

ನನ್ನ ಮೇಲೆ ಆರೋಪಗಳನ್ನು ಮಾಡುತ್ತಿರುವುದು ವಿಷಾದನೀಯ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ನಾನು ಬಿಜೆಪಿ, ಸಂಘ ಪರಿವಾರ ಮತ್ತು ಅದರ ಸಿದ್ಧಾಂತಕ್ಕಾಗಿ ವರ್ಷಾನುಗಟ್ಟಲೆ ಕೆಲಸ ಮಾಡಿದ್ದೇನೆ. ಅದೇ ಸಂಘದ ಶಾಖೆಯಲ್ಲಿ ಕೆಲಸ ಮಾಡಿದವರು ಇವತ್ತು ನನ್ನ ವಿರುದ್ಧ ತೀರಾ ಕೇವಲವಾದ ಆರೋಪಗಳನ್ನು ಮಾಡುತ್ತಿದ್ದಾರೆ. ಸಂಘದ ಸಂಸ್ಕಾರದಲ್ಲಿ ಬೆಳೆದವರ ಬಾಯಿಂದ ಇಂಥ ಮಾತುಗಳೇ ಎಂದು ನನಗೆ ಆಶ್ಚರ್ಯವಾಗುತ್ತಿದೆ. ಈ ಎಲ್ಲ ಆರೋಪಗಳಿಗೆ ನಾನೇನು ಉತ್ತರ ಹೇಳುವುದಿಲ್ಲ. ಆರೋಪ ಮಾಡುವವರು ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಬರಲಿ. ಅಲ್ಲಿ ಆಣೆ

ಅರುಣ್ ಪುತ್ತಿಲ ಬಗ್ಗೆ ಅಪಾರ ಗೌರವವಿದೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ರಾಜ್ಯದಲ್ಲಿ ಚುನಾವಣಾ ಕಾವು ಏರಿಕೆಯಾಗಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ನಾಮಪತ್ರ ಸಲ್ಲಿಕೆಗಾಗಿ ಪುತ್ತೂರಿಗೆ ಬೇಟಿ ನೀಡಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ರಾಜ್ಯದ 224 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಬಾರಿ ಬಿಜೆಪಿಯ