ಪುತ್ತೂರು: ನಮ್ಮದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ ಉಂಟಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ದೇಶದಲ್ಲಿ ನಾವು ಪರಸ್ಪರ ಒಗ್ಗಟ್ಟಿನಿಂದ
ಪುತ್ತೂರು: ಈಶ್ವರಮಂಗಲ ಮೇನಾ ಮಖಾಂ ದರ್ಗಾ ಶರೀಫ್‌ಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದರ್ಗಾದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆದಿತ್ತು. ಈ ಸಂದರ್ಭದಲ್ಲಿ ಮಸೀದಿಯ ಧರ್ಮಗುರುಗಳಾದ ಜಮಾಲುದ್ದೀನ್ ತಂಙಳ್ ದುಗ್ಗಲಡ್ಕ, ನೆಟ್ಟಣಿಗೆ ಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೂಸಾನ್, ನೆಟ್ಟನಿಗೆ ಮುಡ್ನೂರು ಗ್ರಾಪಂ ಸದಸ್ಯರಾದ ಶ್ರೀರಾಂ ಪಕ್ಕಳ, ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು
ಪುತ್ತೂರಿಗೆ ಮೆಡಿಕಲ್ ಕಾಲೇಜು ಬರಬೇಕು ಎಂಬ ಆಗ್ರಹ ನನಗೆ ಶಾಸಕನಾಗುವ ಮೊದಲೇ ಇತ್ತು. ಅಭಿವೃದ್ದಿಯಾಗುತ್ತಿರುವ ಪುತ್ತೂರಿಗೆ ಈ ಯೋಜನೆಯನ್ನು ಜಾರಿಗೆ ತರಲು ಈಗಾಗಲೇ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು ಕ್ಯಾಬಿನೆಟ್‍ನಲ್ಲಿ ಅನುಮೋದನೆ ಮಾಡಿಸಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿಸಿಯೇ ಸಿದ್ದ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಮೆಡಿಕಲ್ ಕಾಲೇಜಿಗೆ ನಿಗಧಿಪಡಿಸಲಾದ ಜಾಗವನ್ನು ವೀಕ್ಷಣೆ ಮಾಡಿದರು. ಸುಮಾರು 40 ಎಕ್ರೆ ಸರಕಾರಿ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಫಸಲು ಭೀಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸನ್ನು ಕೈಬಿಟ್ಟಿರುವುದು ಅತ್ಯಂತ ನಿರಾಶದಾಯಕವಾಗಿತ್ತು. ಇದೀಗ ಅದನ್ನು ಸೇರ್ಪಡೆ ಮಾಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.ಈ ಬಗ್ಗೆ ರೈತರು ನನ್ನ ಗಮನಕ್ಕೆ ತಂದಾಗ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷಿ ಮಂತ್ರಿ ಮಲ್ಲಿಕಾರ್ಜುನ ಇವರನ್ನು ಭೇಟಿಯಾಗಿ ನಿನ್ನೆ ನಡೆದ ಕ್ಯಾಬಿನೆಟ್ ನಲ್ಲಿ ಅಡಿಕೆ ಹಾಗೂ ಕಾಳುಮೆಣಸನ್ನು ಫಸಲು ಭೀಮಾ ಯೋಜನೆಗೆ
ಪುತ್ತೂರು: ಯುವಕರು ಸಮಾಜ ಕಟ್ಟಬೇಕು ಹೊರತು ಬಿಕ್ಕಟ್ಟು ಸೃಷ್ಠಿಸಬಾರದು. ಅದೇ ರೀತಿ ಸಮಸ್ಯೆಯನ್ನು ಬಗೆಹರಿಸಬೇಕು ಹೊರತು ಸಮಸ್ಯೆಯನ್ನು ಸೃಷ್ಠಿಸುವ ಕೆಲಸ ಮಾಡಬಾರದು ಎಂದು ನೂತನ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಅವರು ಪುತ್ತೂರಿನ ಮುಸ್ಲಿಂ ಸಮುದಾಯ ಒಕ್ಕೂಟದ ವತಿಯಿಂದ ಪುರಭವನದಲ್ಲಿ ನೂತನ ಸ್ಪೀಕರ್ ಯು.ಟಿ. ಖಾದರ್ ಮತ್ತು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ಯುವ ಸಮುದಾಯ ಉತ್ತಮ ನಡೆಯೊಂದಿಗೆ ಮುಂದುವರಿದಲ್ಲಿ
ವಿಟ್ಲ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ವಿಟ್ಲದ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ವಿಟ್ಲ ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ವಿಟ್ಲ ಕೇಂದ್ರ ಜುಮ್ಮಾ ಮಸೀದಿ, ವಿಟ್ಲ ಶೋಕಮಾತೆ ಇಗರ್ಜಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಹೇಮನಾಥ ಶೆಟ್ಟಿ ಕಾವು, ಎಂ ಎಸ್ ಮಹಮ್ಮದ್, ರಾಜಾರಾಮ್ ಕೆ.ಬಿ, ರಮಾನಾಥ ವಿಟ್ಲ, ಶ್ರೀನಿವಾಸ ಶೆಟ್ಟಿ ಕೊಲ್ಯ, ವಿಕೆಎಂ ಅಶ್ರಪ್,
ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದರು. ಅಲ್ಲಿಯೂ ಅಶೋಕ್ ಕುಮಾರ್ ರೈ ಅವರ ದೊಡ್ಡ ಸಂಖ್ಯೆಯ ಅಭಿಮಾನಿಗಳು
ಕೋಡಿಂಬಾಡಿಯ ಮತದಾನ ಕೇಂದ್ರದಲ್ಲಿ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಮತ ಚಲಾವಣೆ.
ಪುತ್ತೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 4 ದಿನ ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರವಾಗಿ ಇಂದು ಈಶ್ವರ ಮಂಗಲದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಲಾಯಿತು.ಈ ವೇಳೆ ಮುರಳೀಧರ ರೈ ಮಠಂತಬೆಟ್ಟು, ಅಬ್ದುಲ್ ರಹಮಾನ್ ಹಾಜಿ, ಎಂ ಬಿ ವಿಶ್ವನಾಥ ರೈ, ಮಹಮ್ಮದ್ ಬಡಗನ್ನೂರು, ಶ್ರೀ ಪ್ರಸಾದ್ ಪಾಣಾಜೆ, ಕಾವು ಹೇಮನಾಥ ಶೆಟ್ಟಿ, ಕೃಷ್ಣ
ಪುತ್ತೂರಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರಿಂದ ನನ್ನ ಬೂತ್, ನಾನು ಅಭ್ಯರ್ಥಿ.. ಒಂದು ವಿಭಿನ್ನ ಪ್ರಯೋಗ ನಡೆಯಲಿದ್ದು, ಪುತ್ತೂರಿನ ವಿಧಾನಸಭಾ ಕ್ಷೇತ್ರzಗಳಿಗೆ ಕಾಂಗ್ರೆಸ್ ನಾಯಕರಿಂದ ಮತ್ತು ಕಾರ್ಯಕರ್ತರಿಂದ ಎಲ್ಲಾ 220 ಬೂತ್ ಗಳಲ್ಲಿಯೂ ಮನೆ ಮನೆಗಳ ಸಂಪರ್ಕಿಸುವ ಮೂಲಕ ಮತಯಾಚನೆ ನಡೆಯಲಿದೆ.