ಬೈಂದೂರು-ವಿಶ್ವವಿಖ್ಯಾತ ಮರವಂತೆಯ ಪ್ರಕೃತಿ ಸೊಬಗಿನ ತಾಣದಲ್ಲಿ ನೆಲೆ ನಿಂತಿರುವ ಪುರಾಣ ಪ್ರಸಿದ್ದ ಕ್ಷೇತ್ರ ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮವಾಸ್ಯೆ ಜಾತ್ರೆ ಸಂಭ್ರಮದಿಂದ ಜರುಗಿತು. ಮಳೆ ನಡುವೆ ಬೆಳಗಿನಿಂದಲೇ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತರ ಮಹಾಪೂರವೇ ಹರಿದು ಬಂದಿತು. ಕೆಲವರು ಸಮುದ್ರ ಮತ್ತು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ
ಬಂಟ್ವಾಳ: ನರಹರಿ ಸದಾಶಿವ ದೇವಾಲಯದಲ್ಲಿ ಇಂದು ಆಟಿ ಅಮವಾಸ್ಯೆ, ತೀರ್ಥ ಸ್ನಾನ ನಡೆಯಿತು. ಪ್ರತಿ ವರ್ಷವೂ ಆಟಿ ತಿಂಗಳಲ್ಲಿ ಬರುವ ಅಮವಾಸ್ಯೆ ದಿನದಂದು ಇಲ್ಲಿನ ತೀರ್ಥ ಸ್ನಾನ ನಡೆಯುತ್ತದೆ. ತೀರ್ಥ ಬಾವಿಯಲ್ಲಿ ತೀರ್ಥ ಸ್ನಾನ ಮಾಡಿದರೆ ಸಕಲ ಇಷ್ಟಾರ್ಥಗಳು ನೆರವೇರುವುದು ಎಂಬ ಪ್ರತೀತಿ ಇದೆ. ಇಂದು ಮುಂಜಾನೆಯಿಂದಲೇ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
ಹೋಟೆಲ್ ಡಿಂಕಿ ಡೈನ್‍ನ ಸಹಕಾರದಲ್ಲಿ ತುಳುವ ಬೊಳ್ಳಿ ಪ್ರತಿಷ್ಠಾನದ ವತಿಯಿಂದ ಆಟಿದ ಅಮಾವಾಸ್ಯೆಯ ಪ್ರಯುಕ್ತ ಉಚಿತ ಹಾಲೆ ಮರದ ಕೆತ್ತೆಯ ಕಷಾಯ ಮತ್ತು ಮೆಂತೆ ಗಂಜಿಯ ವಿತರಣಾ ಕಾರ್ಯಕ್ರಮ ಜುಲೈ 17ರಂದು ಹಮ್ಮಿಕೊಳ್ಳಲಾಗಿದೆ. ನಗರದ ಕದ್ರಿಯಲ್ಲಿರುವ ಡಿಂಕಿ ಡೈನ್ ಹೋಟೆಲ್‍ನ ಆವರಣದಲ್ಲಿ ಬೆಳಗ್ಗೆ 6 ಗಂಟೆಗೆ ವಿತರಿಸಲಿದ್ದಾರೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ತುಳು ವಾಗ್ಮಿ ದಯಾನಂದ ಕತ್ತಲ್‍ಸಾರ್ ತಿಳಿಸಿದ್ದಾರೆ