ವಿವೇಕ ಜಾಗ್ರತ ಬಳಗಗಳು ಮಧ್ಯ ವಲಯ -4 ಡಿವೈನ್ ಪಾರ್ಕ್ ಟ್ರಸ್ಟ್ ರಿಜಿಸ್ಟರ್ ಸಾಲಿಗ್ರಾಮ ಇವರ ಅಂಗಸಂಸ್ಥೆ, ಯೋಗ ಪರ್ಯಟನ ವಿಶೇಷ ಸತ್ಸಂಗ ಕಾರ್ಯಕ್ರಮ ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರ ನಾಗೂರು ಸಂಭ್ರಮದಲ್ಲಿ ನಡೆಯಿತು. ಬೈಂದೂರು ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀಯುತ ಗುರುರಾಜ್ ಗಂಟಿಹೊಳೆ ಯವರಿಗೆ ಡಿವೈನ್ ಪಾರ್ಕ್ ನ ಸಂಸಾರಿ ಸಂತ ಪರಮಪೂಜ್ಯ ಡಾಕ್ಟರ್ ಜೀ
ಬೈಂದೂರು ವ್ಯಾಪ್ತಿಯ ಉಪ್ಪುಂದ ಸಮೀಪ ಸಾಂಪ್ರದಾಯಿಕ ಪಟ್ಟಿ ಬಲೆ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ನಾಪತ್ತೆಯಾಗಿರುವ ಮೀನುಗಾರನ ಪತ್ತೆಗೆ ಕಾರ್ಯಚರಣೆ ನಡೆಯುತ್ತಿದೆ. ನೀರು ಪಾಲಾಗಿದ್ದ ಇಬ್ಬರಲ್ಲಿ ಒಬ್ಬನ ಮೃತದೇಹ ಈಗಾಗಲೇ ಪತ್ತೆಯಾಗಿದೆ. ಇನ್ನೋರ್ವನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಸತೀಶ್ ಕಾರ್ವಿ ಮೀನುಗಾರನ ಪತ್ತೆಯ ಬಗ್ಗೆ ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಮಲ್ಪೆ ಅವರ ಮಾರ್ಗದರ್ಶನದಲ್ಲಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಪಿ.ಐ
ಕರಾವಳಿ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಬೈಂದೂರು ಭಾಗದಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಶಾಸಕ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೌಪರ್ಣಿಕಾ ನದಿ ನೀರಿನ ಮಟ್ಟ ಹೆಚ್ಚಾಗಿದ್ದು, ನದಿಯ ಅಕ್ಕ ಪಕ್ಕ ಪ್ರದೇಶಗಳಾದ ನಾವುಂದ, ಸಾಲ್ಬುಡ, ಬಡಾಕೆರೆ, ನಾಡ, ಕಡ್ಕೆ, ಮರವಂತೆ, ಪಡುಕೋಣೆ, ಪ್ರದೇಶಗಳಿಗೆ ಭೇಟಿ ನೀಡಿ ನೆರೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಸ್ಥಳೀಯ ಹಾಗೂ ಪಂಚಾಯತ್
ಬೈಂದೂರು ತಾಲ್ಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಯುವಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಜಲಪಾತದಲ್ಲಿ ಕೊಚ್ಚಿಹೋದ ಯುವಕ. ಬಂಡೆಯ ತುದಿಯಲ್ಲಿ ನಿಂತು ಹತ್ತಿರದಿಂದ ಜಲಪಾತ ವೀಕ್ಷಣೆ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ
ಬೈಂದೂರು ಭಾಗಕ್ಕೆ ಸರ್ಕಾರಿ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲದ ಕಾರಣ ಮನೆಗೆ ಸೇರಲಾಗುತ್ತಿಲ್ಲ. ಬಸ್ ಇಳಿದು ಕಾಡು ಪ್ರದೇಶದಲ್ಲಿ 2ರಿಂದ 3 ಕಿ.ಮೀ. ನಡೆದುಕೊಂಡು ಕಾಲುಸಂಕ ಹೊಳೆಗಳನ್ನೆಲ್ಲ ದಾಟಿ ಹೋಗುವಾಗ ರಾತ್ರಿ 8 ಗಂಟೆಯಾಗುತ್ತದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು. ವಿದ್ಯಾರ್ಥಿನಿ ಪ್ರತಿನಿಧಿಯಾಗಿ ಕವಿತಾ ಆಚಾರ್ಯ ಮಾತನಾಡಿ
ಬೈಂದೂರಿನ ವಂಡ್ಸೆ ಗ್ರಾಮ ಪಂಚಾಯತ್ ಹಳೆ ಎಸ್‍ಎಲ್‍ಆರ್‍ಎಂ ಘಟಕದಲ್ಲಿರುವ ಕಸ ವಿಲೇವಾರಿ ಮಾಡದೆ ಇರುವುದರಿಂದ ಗಬ್ಬು ನಾರುತ್ತಿದೆ. ಪರಿಸರದಲ್ಲಿರುವ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದು, ಕಸವನ್ನು ವಿಲೇವಾರಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಂಡ್ಸೆ ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಶಾಲೆ ಬಳಿ ಇದ್ದ ಹಳೆ ಎಸ್‍ಎಲ್‍ಆರೆಂ ಘಟಕವನ್ನು ಜನತಾ ಕಾಲೋನಿ ಬಳಿ ನಿರ್ಮಿಸಿದ ಹೊಸ ಎಸ್‍ಎಲ್‍ಆರೆಂ
ಬೈಂದೂರು ಕ್ಷೇತ್ರದ ಪಡುವರಿ ಗ್ರಾಮದ ಸೋಮೇಶ್ವರ ಬೀಚ್‍ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಬೀಚ್‍ಗೆ ಮೂಲ ಸೌಕರ್ಯ ಒದಗಿಸುವಂತೆ ಜನತೆ ಆಗ್ರಹಿಸುತ್ತಿದ್ದಾರೆ. ಸರಿಸುಮಾರು 2ಕಿಮೀ ಅಂತರದಲ್ಲಿ ಅಗಾಧ ಸೌಂದರ್ಯವಿದೆ. ಬೀಚ್ ಸೌಂದರ್ಯ ಆಕರ್ಷಕ. ತೀರದಿಂದ 300ಮೀಟರ್ ಅಂತರದವರೆಗೆ ಆಳವಿಲ್ಲ. ತೀರದ ಉದ್ದಕ್ಕೂ ಪ್ರಾಕೃತಿಕ ಕಲ್ಲುಬಂಡೆಗಳು ಹರಡಿಕೊಂಡಿದೆ. ಮಂದಗತಿಯಲ್ಲಿ ಬಂದು ಬಂಡೆಗೆ ಅಪ್ಪಳಿಸಿ ಹಿಂದಿರುಗುವ
ಬೈಂದೂರು ವಿಧಾನಸಭಾ ಕ್ಷೇತ್ರದ ತಲ್ಲೂರಿನಿಂದ ಬೈಂದೂರಿನ ತನಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಳೆಗಾಲದ ಸಂದರ್ಭ ಸಮಸ್ಯೆ ಉದ್ಭವವಾಗುವ ಪ್ರದೇಶಗಳಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಹೆಮ್ಮಾಡಿ, ಮುಳ್ಳಿಕಟ್ಟೆ, ತ್ರಾಸಿ, ಮರವಂತೆ, ನಾಗೂರು, ಉಪ್ಪುಂದ, ಬೈಂದೂರು ಭಾಗಗಳಲ್ಲಿ, ಜನಸಾಮಾನ್ಯರ ಸಮಸ್ಯೆ ಬಗ್ಗೆ ವಿಚಾರಿಸಿ, ಸ್ಥಳೀಯರ ಒಂದಿಷ್ಟು ಮನವಿಗಳನ್ನು
ಬೈಂದೂರಿನ ನಾಡ ಗ್ರಾ.ಪಂ. ವ್ಯಾಪ್ತಿಯ ತೆಂಕಬೈಲು ಗೋಳಿಹಕ್ಲು ಕಾಲೋನಿಯಲ್ಲಿ ಶಿಥಿಲಾವ್ಯಸ್ಥೆಯಲ್ಲಿರುವ ಗುಡಿಸಲಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಚಂದು ಪೂಜಾರ್ತಿ ಅವರಿಗೆ ಸಮಾನ ಮನಸ್ಕರ ಯುವಕರ ತಂಡ ಆಸರೆಯಾಗಿದೆ. ಸುಸಜ್ಜಿತವಾಗಿ ಮನೆಯನ್ನು ನಿರ್ಮಿಸಿಕೊಟ್ಟಿದ್ದು, ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಲಯನ್ಸ್ ಕ್ಲಬ್ ನಾವುಂದ, ಅಜ್ಜಿ ಮನೆ ಕನಸು ನನಸು ಮಾಡೋಣ ವಾಟ್ಸಾಪ್ ಗ್ರೂಪ್, ನಾಡ ಗ್ರಾ.ಪಂ ಹಾಗೂ ಪತ್ರಕರ್ತರ ಮಿತ್ರ ಸಹಕಾರದಿಂದ ಮಂಜುನಾಥ ನಿಲಯ
ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇದರ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಕೌಶಲ್ಯಗಳ ಕಲಿಕೆಗೆ ಪೂರಕ ವ್ಯವಸ್ಥೆ ಮಾಡಬೇಕು, ಸಂಪನ್ಮೂಲ ವ್ಯಕ್ತಿಗಳಿಂದ ಅಗತ್ಯವಿರುವ ತರಬೇತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲು ಕ್ರಮ ಕೈಗೊಳ್ಳಬೇಕು, ಸಮಾಜಕ್ಕೆ ಉತ್ತಮ ವ್ಯಕ್ತಿತ್ವದ ವ್ಯಕ್ತಿ ರೂಪಿಸುವ, ಪರಿಚಯಿಸುವ