Home Posts tagged bank robbery

ಉಳ್ಳಾಲ: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ – ಮತ್ತೊಬ್ಬ ಆರೋಪಿಗೆ ಶೂಟೌಟ್

ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಘಟ ನೆ ನಡೆದಿದೆ. ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ಮುಂಬಯಿ ಧಾರಾವಿಯ ಮುರುಗಂಡಿ ಎಂಬಾತನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ್ದಾರೆ. ಕೋಟೆಕಾರು ಅಜ್ಜಿನಡ್ಕ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ.