Home Posts tagged #bantwal

ಬಿ.ಸಿ.ರೋಡು: ರೋಟರಿ ಇಂಟರ್ ಡಿಸ್ಟ್ರಿಕ್ಟ್ ಮೀಟ್- ಪತ್ರಕರ್ತ ಗೋಪಾಲ ಅಂಚನ್ ಅವರಿಗೆ ಸನ್ಮಾನ

ಬಿ.ಸಿ.ರೋಡು: ರೋಟರಿ ಇಂಟರ್ ಡಿಸ್ಟ್ರಿಕ್ಟ್ ಮೀಟ್- ಅಂತರ್ ಜಿಲ್ಲಾ ರೋಟರಿ ಕ್ಲಬ್ ಗಳಾದ ಕಾರ್ಕಳ ಮತ್ತು ಬಿ.ಸಿ.ರೋಡು‌ ಸಿಟಿ‌ ಕ್ಲಬ್ ಗಳ ಕುಟುಂಬ ಸ್ನೇಹ ಸಮ್ಮಿಲನ ಬಿ.ಸಿ.ರೋಡು ರೋಟರಿ ಸಮುದಾಯ ಭವನದಲ್ಲಿ ನಡೆಯಿತು.ಬಿ.ಸಿ.ರೋಡು ಸಿಟಿ ರೋಟರಿ ಕ್ಲಬ್ ಅಧ್ಯಕ್ಷ ಗಣೇಶ ಶೆಟ್ಟಿ ಗೋಳ್ತಮಜಲು ಅಧ್ಯಕ್ಷತೆ ವಹಿಸಿದ್ದರು.ಪಿಡಿಜಿ ಪ್ರಕಾಶ್ ಕಾರಂತ್ ಮಾತನಾಡಿ ಗೋಪಾಲ ಅಂಚನ್

ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನದ ಶಿಲಾನ್ಯಾಸ

ಬಂಟ್ವಾಳ: ನಾವೂರು ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದ ಹೊರಾಂಗಣದ ನೈಋತ್ಯ ದಿಕ್ಕಿನಲ್ಲಿ ನೂತನವಾಗಿ ನಿರ್ಮಿಸಲ್ಪಡುವ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಕ್ಷೇತ್ರದಲ್ಲಿ ನಡೆಯಿತು. ಬೆಳಗ್ಗಿನ 10.15 ರ ಧನುರ್ಲಗ್ನ ಸುಮುಹೂರ್ತದಲ್ಲಿ ತಂತ್ರಿಗಳಾದ ಶ್ರೀ ಪಾದ ಪಾಂಗಣ್ಣಾಯ ಅವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ ಶಿಲಾನ್ಯಾಸ ನೆರೆವೇರಿಸಿದರು. ಈ ಸಂದರ್ಭ ದೇವಸ್ಥಾನದ ಅರ್ಚಕರಾದ ವೆಂಕಟದಾಸ್ ಭಟ್,

ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಚಂದ್ರಶೇಖರ್

ಬಂಟ್ವಾಳ: ದೇಶದಲ್ಲಿ ವಸ್ತುಗಳ ಬೆಲೆ ಏರಿಕೆ ಹೆಚ್ಚಾಗಿದ್ದು ಇದನ್ನು ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ವಿಫಲವಾಗಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಚಂದ್ರಶೇಖರ ಪೂಜಾರಿ ಆರೋಪಿಸಿದರು. ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪೆಟ್ರೋಲ್ ಡೀಸೆಲ್ ಕಚ್ಛಾ ಸಾಮಾಗ್ರಿಗಳ ದರ ವಿದೇಶದಲ್ಲಿ ಸಂಪೂರ್ಣ ಇಳಿಕೆಯಾಗಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರ ಹೆಚ್ಚುವರಿ ತೆರಿಗೆಯನ್ನು ವಿಧಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲು

ವಿಶ್ವ ಪರಿಸರ ದಿನಾಚರಣೆ ಬಂಟ್ವಾಳದಲ್ಲಿ ಜೆಸಿಐ ವತಿಯಿಂದ ವನಮಹೋತ್ಸವ

ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ಜೆಸಿಐ ಬಂಟ್ವಾಳದ ವತಿಯಿಂದ ಮಾರ್ನಬೈಲಿನಲ್ಲಿರುವ ಆರೋಗ್ಯ ಉಪಕೇಂದ್ರದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು.  ತಾಲೂಕು ಪಂಚಾಯತಿ ಸದಸ್ಯ ಸಂಜೀವ ಪೂಜಾರಿ ಬೊಳ್ಳಾಯಿ ಹಾಗೂ ಉದ್ಯಮಿ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್. ಮೂಲ್ಯ ಮಾತನಾಡಿ ಜೆಸಿ ಸಂಸ್ಥೆಯ ಮೂಲಕ ವಿಶ್ವದಾದ್ಯಂತ ವನ ಮಹೋತ್ಸವ ಕಾರ್ಯಕ್ರಮವನ್ನು ನಡೆಸಿ

ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ

ಬಂಟ್ವಾಳ: ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಿಸಲಾಗಿದ್ದು, ಇಲಾಖೆ ವ್ಯಾಪ್ತಿಗೆ ಬರದೆ ಸಂಕಷ್ಟದಲ್ಲಿರುವ ಕ್ಷೇತ್ರಗಳ ಸಿಬ್ಬಂದಿಗೂ ಕಿಟ್ ಕೊಡುವುದಕ್ಕೆ ಚಿಂತನೆ ನಡೆಸಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಹೇಳಿದರು.  ಮುಜರಾಯಿ ಇಲಾಖೆಯ ಎ ಗ್ರೇಡ್ ಕ್ಷೇತ್ರವಾದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಿಂದ ತಾಲೂಕಿನ 26 ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ