Home Posts tagged #bantwala (Page 14)

ಬಂಟ್ವಾಳ : ಯಕ್ಷಗಾನದ ಮೂಲಕ ಮತದಾನ ಜಾಗೃತಿ

ಚುನಾವಣಾ ಆಯೋಗ, ದ.ಕ. ಜಿಲ್ಲಾ ಸ್ವೀಪ್ ಸಮಿತಿ ಇದರ ಆಶ್ರಯದಲ್ಲಿ ತಾಲೂಕು ಆಡಳಿತ ಬಂಟ್ವಾಳ, ತಾಲೂಕು ಕಚೇರಿ ಬಂಟ್ವಾಳ, ಪುರಸಭೆ ಬಂಟ್ವಾಳ, ಕಾರ್ಮೆಲ್ ಕಾಲೇಜು ಮೊಡಂಕಾಪು ಇದರ ಸಹಯೋಗದಲ್ಲಿ ಯಕ್ಷಗಾನದ ಮೂಲಕ ಮತದಾನ ಜಾಗೃತಿ ಮತದಾನ ಜಾಗೃತಿ ಜಾಥಕ್ಕೆ ಬಿ.ಸಿ.ರೋಡಿ ಕೈಕಂಬದ ಪೊಳಲಿ ದ್ವಾರದ ಬಳಿ ಚಾಲನೆ ನೀಡಲಾಯಿತು. ಜಾಗೃತಿ ಜಾಥವನ್ನು ದ.ಕ. ಜಿ.ಪಂ. ಮುಖ್ಯ

ವಕೀಲರ ಸಂಘ (ರಿ ) ಬಂಟ್ವಾಳ : ವಿಶ್ವ ಭೂ ದಿನಾಚರಣೆ

ವಕೀಲರ ಸಂಘ (ರಿ ) ಬಂಟ್ವಾಳ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 28/4/2023 ರಂದು ಮದ್ಯಾಹ್ನ 12.00 ಗಂಟೆಗೆ ವಕೀಲರ ಸಂಘ (ರಿ ) ಬಂಟ್ವಾಳದಲ್ಲಿ ವಿಶ್ವ ಭೂ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಷರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳದ ಕಾರ್ಯದರ್ಶಿ ಶ್ರೀ ಚಂದ್ರಶೇಖರ ತಳವಾರ ಇವರು ಸಸಿಗೆ ನೀರು ಹಾಕುವುದರ ಮುಕಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಿದ್ಧಕಟ್ಟೆಯಲ್ಲಿ ಬಿಜೆಪಿಯ ಬೃಹತ್ ರೋಡ್ ಶೋ

ಬಂಟ್ವಾಳ: ಸಿದ್ದಕಟ್ಟೆ ಚರ್ಚ್ ಬಳಿಯಿಂದ ಪೇಟೆಯವರೆಗೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಬೃಹತ್ ರೋಡ್ ಶೋ ನಡೆಸಿ ಮತಯಾಚನೆಗೈದರು. ಸಹಸ್ರಾರು ಕಾರ್ಯಕರ್ತರೊಂದಿಗೆ ಸಿದ್ದಕಟ್ಟೆಯ ಹೆದ್ದಾರಿಯಲ್ಲಿನ ಪ್ರತಿ ಮಳಿಗೆಗಳು, ರಿಕ್ಷಾಚಾಲಕರು, ಸಾರ್ವಜನಿಕರನ್ನು ಭೇಟಿಯಾಗಿ ಮತಯಾಚಿಸಿದರು. ಬಳಿಕ ಸಿದ್ದಕಟ್ಟೆ ಜಂಕ್ಷನ್ ನಲ್ಲಿ ಸಾರ್ವಜನಿಕ ನಡೆದ ಸಭೆಯನ್ನು ದ್ದೇಶಿಸಿ ಕೇರಳ ರಾಜ್ಯ ಬಿಜೆಪಿ ಖಜಾಂಚಿ ಕೃಷ್ಣದಾಸ್ ಅವರು ಮಾತನಾಡಿ,

ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಇಂದು ನಾಮಪತ್ರ ಸಲ್ಲಿಸಿದರು.ಬಿ.ಸಿ.ರೋಡಿನ ವಿಧಾನಸೌಧದ ಚುನಾವಣಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿದ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 9:30ಕ್ಕೆ ಬಂಟ್ವಾಳ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಅಲ್ಲಿಂದ ಭಾರೀ ಸಂಖ್ಯೆಯ ಕಾರ್ಯಕರ್ತರ ಕರತಾಡನದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದು ಬಂಟ್ವಾಳ ಕೆಳಗಿನ

ಬಂಟ್ವಾಳದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ

ಮಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಂಗಳವಾರ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕೊಲ್ಲೂರು ಮುಕಾಂಬಿಕೆ ದೇವಸ್ಥಾನ, ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ, ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತದ ಬಿಷಪ್, ಬಂದರು ಕೇಂದ್ರ ಜುಮ್ಮಾ ಮಸೀದಿ ದರ್ಗಾಕ್ಕೆ ಭೇಟಿ ನೀಡಿ ಅವರು ಪ್ರಾರ್ಥನೆ ಸಲ್ಲಿಸಿದರು.

ನನ್ನನ್ನು ಅಪಪ್ರಚಾರದಿಂದ ಸೋಲಿಸಿದ್ದಾರೆ : ಮಾಜಿ ಸಚಿವ ಬಿ. ರಮಾನಾಥ ರೈ

ಬಂಟ್ವಾಳ: ಎ.20 ರಂದು ಗುರುವಾರ ಮಧ್ಯಾಹ್ನ 12.35ಕ್ಕೆ ನಾಮಪತ್ರ ಸಲ್ಲಿಸುವುದಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಪಕ್ಷದ ಚುನಾವಣಾ ಕಚೇರಿಯಲ್ಲಿ ಸೋಮವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಬಂಟ್ವಾಳದ ಶ್ರೀ ವೆಂಕಟರಮಣ ದೇವಾಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಮೆರವಣಿಗೆ ಮೂಲಕ ಬಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹಾಗೂ

ಕಾಮಿಡಿ ಪ್ರೀಮಿಯರ್‌‌ ಲೀಗ್ ಸೀಸನ್-4 ಪ್ರದರ್ಶನಕ್ಕೆ ಬಿ.ಸಿ.ರೋಡಿನಲ್ಲಿ ಚಾಲನೆ

ಬಂಟ್ವಾಳ: ವಿ4 ನ್ಯೂಸ್ ಹಾಗೂ ತುಳುಕೂಟ ಬಂಟ್ವಾಳ ಇದರ ಆಶ್ರಯದಲ್ಲಿ ಕಾಮಿಡಿ ಪ್ರೀಮಿಯರ್‌ ಲೀಗ್ ಸೀಸನ್- 4 ಫರ್ ಫಾರ್ಮೆನ್ಸ್ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು. ಯಕ್ಷ ಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಕರಾವಳಿ ಭಾಗದಲ್ಲಿ ನಗುವಿಗೂ ಸ್ಟ್ಯಾಂಡರ್ಡ್ ಇದೆ. ಆದ್ದರಿಂದ ಹೊರ ಜಿಲ್ಲೆಯ ಹಾಸ್ಯ ಕಲಾವಿದರು ಕರಾವಳಿಯಲ್ಲಿ ಹಾಸ್ಯ ಪ್ರದರ್ಶನ ನೀಡಲು ಹಿಂದು ಮುಂದು ನೋಡುತ್ತಾರೆ

ಶಾಸಕ ರಾಜೇಶ್ ನಾಯ್ಕ್ ಅವರಿಂದ ನಾಮಪತ್ರ ಸಲ್ಲಿಕೆ : 35 ಕಿ.ಮಿ. ನಡೆದು ಬಂದ ದಂಪತಿ

ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಲು ಪೆÇಳಲಿ ಕ್ಷೇತ್ರದಿಂದ ಪಾದಾಯಾತ್ರೆಯ ಮೂಲಕ ಆಗಮಿಸುವ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿ.ಮಿ.ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು. ಬಡಗಕಜೆಕಾರು ಗ್ರಾ.ಪಂ.ಮಾಜಿ ಸದಸ್ಯ ಗಂಗಾಧರ ಪೂಜಾರಿ ತನ್ನ ಪತ್ನಿ ಚಂದ್ರಾವತಿ ಅವರ ಜೊತೆಗೂಡಿ ಕಜೆಕಾರಿನ ಮಹಾದೇಶ್ವರ ದೇವಸ್ಥಾನದಿಂದ

ಬಂಟ್ವಾಳ : ಸ್ಕೂಟರ್ ಗೆ ಬಸ್ಸು ಡಿಕ್ಕಿ, ಸವಾರ ಸಾವು

ಬಂಟ್ವಾಳ : ಕೆ.ಎಸ್.ಆರ್.ಟಿ.ಸಿ.ಬಸ್ ಸ್ಕೂಟರ್ ಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ ಮೃತಪಟ್ಟ ವ್ಯಕ್ತಿ.ಅವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಡಿಕ್ಕಿಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಸವಾರ

ಏಕಾಂಗಿಯಾಗಿ ಬಾವಿ ತೋಡಿದ ಬಂಟ್ವಾಳದ ಸೃಜನ್ ಗೆ ಸೆಲ್ಯೂಟ್ ಟು ಸೈಲೆಂಟ್ ವರ್ಕರ್ ಪ್ರಶಸ್ತಿ

ಬಂಟ್ವಾಳ: ಏಕಾಂಗಿಯಾಗಿ ಬಾವಿ ತೋಡಿ ಅಸಾಮಾನ್ಯ ಸಾಧನೆ ತೋರಿದ ಬಾಲಕ ನರಿಕೊಂಬು ಗ್ರಾಮದ ನಾಯಿಲ ಕಾಪಿಕಾಡುವಿನ ಸೃಜನ್ ಪೂಜಾರಿಗೆ ಜೆಸಿಐ ಬಂಟ್ವಾಳ ಸೆಲ್ಯೂಟ್ ಟೂ ಸೈಲೆಂಟ್ ವರ್ಕರ್ ಪ್ರಶಸ್ತಿ ನೀಡಿ ಗೌರವಿಸಿದೆ. ಬಾಲಕನ ಸಾಧನೆಯ ಬಗ್ಗೆ ಮಾಧ್ಯಮಗಳ ವರದಿಯನ್ನು ಆಧಾರಿಸಿ ಬುಧವಾರ ಅವರ ಮನೆಗೆ ತೆರಳಿದ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಹಾಗೂ ಸದಸ್ಯರು ಸೃಜನ್ ಸಾಧನೆಯನ್ನು ಶ್ಲಾಘಿಸಿ ಪ್ರಶಸ್ತಿ ನೀಡಿ ಗೌರವಿಸಿದರು. ಎಲೆ ಮರೆಯ ಕಾಯಿಯಂತೆ ಸಾಧನೆ ಮಾಡುವ