Home Posts tagged #bantwala (Page 16)

Bantwala : ಲೋಕಾಯುಕ್ತ ಎಸ್ಪಿಯಿಂದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ

ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಕಡತಗಳು ಕಾಣೆಯಾಗುತ್ತಿರುವುದು ಏಕೆ ಎಂದು ಲೋಕಾಯುಕ್ತ ಎಸ್ಪಿ ಸೈಮನ್ ಗರಂ ಆದ ಘಟನೆ ಮಂಗಳವಾರ ಬಂಟ್ವಾಳ ತಾಲೂಕಿನಲ್ಲಿ ಕರೆದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಡೆಯಿತು. ಎಸ್ಪಿ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಕ್ರಮದಲ್ಲಿ ಸುಮಾರು ಹದಿನೈದರಷ್ಟು ಮಂದಿ ತಮ್ಮ ದೂರು, ದುಮ್ಮಾನ

ಕಾರ್ಮಿಕ ವಿರೋಧಿ ಬಿ.ಜೆ.ಪಿ ಸರಕಾರವನ್ನು ಸೋಲಿಸಿ – ಕಾಮ್ರೇಡ್ ಪಿ.ಪಿ.ಅಪ್ಪಣ್ಣ

ಬಂಟ್ವಾಳ : ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ (ಎ.ಐ.ಸಿ.ಸಿ.ಟಿ.ಯು) ದ.ಕ ಜಿಲ್ಲಾ ಸಮಾವೇಶ ಬಿ.ಸಿ.ರೋಡಿ ನಲ್ಲಿ ನಡೆಯಿತು.ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಎ.ಐ.ಸಿ‌.ಸಿ.ಟಿ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಪಿ.ಪಿ.ಅಪ್ಪಣ್ಣ ಮಾತನಾಡಿ ಎ.ಐ‌.ಸಿ.ಸಿ.ಟಿ.ಯು ಸಂಘಟನೆ ಒಂದು ಕೇಂದ್ರ ಕಾರ್ಮಿಕ ಸಂಘಟನೆಯಾಗಿದ್ದು ಕಾರ್ಮಿಕರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದು , ಹಲವಾರು ಚಳುವಳಿಗಳನ್ನು ನಡೆಸುವುದರ ಮೂಲಕ

ಬಂಟ್ವಾಳ: ಹೆಜ್ಜೇನು ನೊಣಗಳು ದಾಳಿ : ಒರ್ವನಿಗೆ ಗಂಭೀರ ಗಾಯ

ಬಂಟ್ವಾಳ: ಬಸ್ಸು ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಮೂವರು ವ್ಯಕ್ತಿಗಳಿಗೆ ಹೆಜ್ಜೇನು ನೊಣಗಳು ದಾಳಿ ನಡೆಸಿ ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ನಡೆದಿದೆ. ಘಟನೆಯಲ್ಲಿ ಒರ್ವ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರ ಅಲ್ಪಸ್ವಲ್ಪ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಆದಿತ್ಯವಾರ ಮಧ್ಯಾಹ್ನ  ಕಲ್ಪನೆ ಎಂಬಲ್ಲಿ ನಡೆದಿದೆ. ಕಲ್ಪನೆ ನಿವಾಸಿ ಪೂವಪ್ಪ ( 61) ಗಂಭೀರವಾಗಿ ಗಾಯವಾಗಿದ್ದು,ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು,

ಬ್ರಹ್ಮರಕೋಟ್ಲು ಟೋಲ್‍ಗೇಟ್ ಅವ್ಯವಸ್ಥೆ ವಿರುದ್ಧ ಆಕ್ರೋಶ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬ್ರಹ್ಮರಕೋಟ್ಲು ಟೋಲ್ ಗೇಟ್ ಅವ್ಯವಸ್ಥೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಿದ್ದೇವೆ ಎಂದು ಎಸ್.ಡಿ.ಪಿ.ಐ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ , ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಇಲ್ಯಾಸ್ ತುಂಬೆ ತಿಳಿಸಿದ್ದಾರೆ. ಬಿ.ಸಿ.ರೋಡ್ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ

ಅನಂತಾಡಿ ಗ್ರಾ.ಪಂ. ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ.

ಬಂಟ್ವಾಳ: ಅನಂತಾಡಿ ಗ್ರಾ.ಪಂ.ಬಿಜೆಪಿಯ ಬಲಿಷ್ಠ ಶಕ್ತಿಕೇಂದ್ರವಾಗಿದ್ದು, ಅದಕ್ಕೆ ಪೂರಕವಾಗಿ ಹೆಚ್ಚಿನ ಅನುದಾನಗಳ ಮೂಲಕ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಂಡಿದೆ. ಜತೆಗೆ ಕೋಟ್ಯಂತರ ರೂಪಾಯಿ ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ ಬಂದಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು. ಅವರು ಅನಂತಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 1.50 ಕೋ.ರೂ.ಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ- ಶಿಲಾನ್ಯಾಸ ನೆರವೇರಿಸಿ ಬಳಿಕ ಮಂದಿರದಲ್ಲಿ

ಮಾ.10ರಂದು ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಆರಂಭ

ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಐದು ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸಿದ್ಧರಾಮಯ್ಯ ಸರಕಾರ ಮೂಲಕ ಕ್ಷೇತ್ರದಾದ್ಯಂತ ಕೈಗೊಳ್ಳಲಾದ 5 ಸಾವಿರ

ಕೇಂದ್ರ ಸರ್ಕಾರದ ನಿಕ್ಷಯ ಮಿತ್ರ ಯೋಜನೆ

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಕ್ಷಯ ರೋಗಿಗಳಿಗೆ ಆಹಾರ ಧವಸ ಧಾನ್ಯ ವಿತರಣ ಕಾರ್ಯಕ್ರಮ ಸೋಮವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕ್ಷಯ ರೋಗ ನಿವಾರಣೆಗೆ ಔಷಧಿಯಷ್ಟೇ ಪೌಷ್ಟಿಕಾಹಾರ ಸೇವೆನೆಯೂ ಮುಖ್ಯ. ಆದ್ದರಿಂದ ಸೇವಾಂಜಲಿ ಪ್ರತಿಷ್ಠಾನವು ತಾಲೂಕಿನ ಕ್ಷಯ ರೋಗಿಗಳನ್ನು

ಪಾಟ್ನಾ ಬಾಂಬ್ ಪ್ರಕರಣ : ಬಂಟ್ವಾಳದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ದಾಳಿ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಾಟ್ನಾ ದ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮ‌ೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿ ತನಿಖೆ ನಡೆಸಿದೆ. ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ದಾಳಿ ನಡೆದಿದ್ದು, ಈ ಅರೋಪಿಗಳು ಪಾಟ್ನಾ ದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ

ಬಂಟ್ವಾಳ: ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹ

ಬಂಟ್ವಾಳ: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನುನ ಆಗ್ರಹಿಸಿ ಮಾ. 1 ರಿಂದ ನಡೆಯುವ ಅನಿರ್ಧಿಷ್ಠಾವಧಿ ಮುಷ್ಕರದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ಶಾಖೆಯು ಬೆಂಬಲ ವ್ಯಕ್ತಪಡಿಸಿರುವುದಾಗಿ ಸಂಘದ ಅಧ್ಯಕ್ಷ ಉಮನಾಥ ರೈ ಮೇರಾವು ತಿಳಿಸಿದರು. ಬಿ.ಸಿ.ರೋಡಿನ ಪ್ರೆಸ್‍ಕ್ಲಬ್‍ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿ, ಫೆ.21ರಂದು

ಮಾ.4 ರಂದು ಮೂಡೂರು ಪಡೂರು ಕಂಬಳ

ಬಂಟ್ವಾಳ: ತಾಲೂಕಿನ ನಾವೂರ ಗ್ರಾಮದ ಕೂಡಿಬೈಲು ಎಂಬಲ್ಲಿ 12 ನೇ ವರ್ಷದ ಮೂಡೂರು-ಪಡೂರು “ಬಂಟ್ವಾಳ ಕಂಬಳ” ವು ಮಾ.4 ರಂದು ವೈಭವಯುತವಾಗಿ ನಡೆಯಲಿದೆ ಎಂದು ಮಾಜಿ ಸಚಿವ, ಕಂಬಳ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದ್ದಾರೆ. ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಬಳದ ಯಶಸ್ವಿಗೆ ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ ಎಂದರು. ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ವತಿಯಿಂದ ಧರ್ಮಸ್ಥಳದ