Home Posts tagged #bantwala (Page 2)

ಡಿಸಿ ಮನ್ನಾ ಉಳಿಕೆ ಜಮೀನನ್ನು ದಲಿತರಿಗೆ ಮಂಜೂರು ಮಾಡಿ: ದಲಿತ ಸಂಘಟನೆಯಿಂದ ಶಾಸಕ ಅಶೋಕ್ ರೈ ಗೆ ಮನವಿ

ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮನವಿ ಮಾಡಿದರು.ಶಾಸಕರನ್ನು ಭೇಟಿಯಾದ ನಿಯೋಗ ಈ ವಿಚಾರದಲ್ಲಿ ನಾವು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಆದರೆ ಇದುವರೆಗೂ

ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಸ್ಥಗಿತ

ಮಸ್ಕತ್:ಮಂಗಳೂರು–ಮಸ್ಕತ್ ನೇರ ವಿಮಾನಯಾನ ಸೇವೆಯನ್ನು ಕಳೆದ ಮೂರು ತಿಂಗಳಿಂದ ವಿಮಾನಯಾನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಅನಿವಾಸಿ ಭಾರತೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಮಾರ್ಗದಲ್ಲಿ ಮೊದಲು ವಾರಕ್ಕೆ ನಾಲ್ಕು ವಿಮಾನಗಳು ನಿಯಮಿತವಾಗಿ ಸಂಚಾರ ಮಾಡುತ್ತಿದ್ದವು. ದಶಕಗಳಿಂದ ನಿರಂತರವಾಗಿ ನಡೆದಿದ್ದ ಈ ಸೇವೆ ಅಚಾನಕ್ ಸ್ಥಗಿತಗೊಂಡಿದ್ದು, ಮಸ್ಕತ್‌ನಲ್ಲಿ ನೆಲೆಸಿರುವ ಕರಾವಳಿ ಪ್ರದೇಶದ ಪ್ರಯಾಣಿಕರಿಗೆ ಸಂಕಷ್ಟ ಉಂಟುಮಾಡಿದೆ. ಗಲ್ಫ್‌ನ

ಮೈಕಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ

ಮಂಗಳೂರು ಧರ್ಮಪ್ರಾಂತ್ಯದ ಸಿಓಡಿಪಿ ಸಂಸ್ಥೆಯು ನಿರ್ವಹಿಸುವ ಮೈಕೆಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯ ಅಡಿಯಲ್ಲಿ ಆಯೋಜಿಸಲಾದ ಪ್ರೇರಣಾ ಕಾರ್ಯಕ್ರಮವು ಅಕ್ಟೋಬರ್ 5 ರ ಭಾನುವಾರದಂದು ಮಂಗಳೂರಿನ ರೊಸಾರಿಯೋ ಚರ್ಚ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪೌಲ್ ಸಲ್ಡಾನಾ ಅವರು , ಎಜುಕೇರ್ ಎಂಡೋಮೆಂಟ್ ಫಂಡ್‌ನ ದೃಷ್ಟಿಕೋನ, ಉದ್ದೇಶ ಮತ್ತು ಮಹತ್ವದ ಸಾಧನೆಗಳನ್ನು

ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

ಮಂಗಳೂರು: ಅಕ್ಟೋಬರ್ 5, 2025, ಮಂಗಳೂರಿನ ಬಿಷಪ್ಸ್ ಹೌಸ್‌ನಲ್ಲಿ ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯು (SSVP) ತನ್ನ ಶತಮಾನೋತ್ಸವ ಕಾರ್ಯಕ್ರಮಗಳ ಹಾಗೂ ಶತಮಾನೋತ್ಸವ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ವಂದನೀಯ ಫಾ। ಫಾವುಸ್ಟಿನ್ ಲೋಬೋ (ಫ್ರಾ ಮುಲ್ಲರ್ಸ್ ಮೆಡಿಕಲ್ ಕಾಲೇಜ್ ಮತ್ತುಸಂಸ್ಥೆಗಳ ನಿರ್ದೇಶಕರು); ಶ್ರೀ ಲುವಿ ಪಿಂಟೋ (ಮಾಂಡ್ ಸೊಭಾಣ್, ಅಧ್ಯಕ್ಷರು); CA ವಲೇರಿಯನ್ ಅಡಾ (KCO ಅಬುಧಾಬಿ

ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆ

ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆ ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಭರವಸೆಗಳ ಕುರಿತು ಸಭೆಯಲ್ಲಿ ಚರ್ಚೆಗಳು ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರು ಬಂಟ್ವಾಳ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆಯ ರಸ್ತೆಗಳ ಅಭಿವೃದ್ಧಿ ಕುರಿತು ಚರ್ಚಿಸಿದರು. ಬಾರಿ ಮಳೆಯಿಂದ ಪ್ರಮುಖ ರಸ್ತೆಗಳು ಹಾನಿಯಾಗೊಂಡು ವಾಹನ ಸಂಚಾರ ಕಷ್ಟ

ಬಂಟ್ವಾಳ : ಹಿರಿಯ ರಂಗಭೂಮಿ ಕಲಾವಿದ ಚಿ. ರಮೇಶ್ ಕಲ್ಲಡ್ಕ ನಿಧನ

ಕಲ್ಲಡ್ಕ ಕೊಳಕೀರು ನಿವಾಸಿ, ಹಿರಿಯ ರಂಗಭೂಮಿ ಕಲಾವಿದ, ತುಳು ರಂಗಭೂಮಿಯ ಕಲಾವಿದ, ಚಿತ್ರನಟ ಚಿ.ರಮೇಶ್ ಕಲ್ಲಡ್ಕ (68) ಅವರು ಜು.23ರ ಬುಧವಾರ ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಕಳೆದ ಹಲವು ದಶಕಗಳಿಂದ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಅವರು ಮಂಗಳೂರಿನ ಹೆಸರಾಂತ ನಾಟಕ ತಂಡ ಕಲಾಸಂಗಮದಲ್ಲಿ ಕಳೆದ 20 ವರ್ಷಗಳಿಂದ ಹತ್ತಾರು ನಾಟಕಗಳಲ್ಲಿ ಅಭಿನಯ ಮಾಡುತ್ತಿದ್ದರು.

ಸುಳ್ಯ: ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು,ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸುಳ್ಯ ತಾಲೂಕಿನ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ಲಯನ್ಸ್ ಕ್ಲಬ್ ಸಭಾಭವನ ಸುಳ್ಯದಲ್ಲಿ ನಡೆಸಲಾಯಿತು. ತರಬೇತಿ ಕಾರ್ಯಗಾರದ ಉದ್ಘಾಟನೆಯನ್ನು ಶ್ರೀ ರಾಜಣ್ಣ, ಕಾರ್ಯನಿರ್ವಾಹಕ ಅಧಿಕಾರಿಗಳು,ತಾಲೂಕು ಪಂಚಾಯತ್ ಸುಳ್ಯ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಯಾವುದೇ ಫಲಾಪೇಕ್ಷೆ ಇಲ್ಲದೇ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ

ಬಂಟ್ವಾಳ: ಹಳ್ಳದಲ್ಲಿ ಯುವಕನ ಮೃತದೇಹ ಪತ್ತೆ- ಕೊಲೆ ಶಂಕೆ?

ಬಂಟ್ವಾಳದ ಬೆಂಜನಪದವಿನಲ್ಲಿ ಕಲ್ಲು ತೆಗೆದು ನಿರ್ಮಾಣಗೊಂಡ ನೀರು ನಿಂತ ಹಳ್ಳವೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಬೆಂಜನಪದವು ನಿವಾಸಿ ಸಾಗರ್(28) ಮೃತಪಟ್ಟ ಯುವಕ. ಶನಿವಾರದಿಂದ ಸಾಗರ್ ನಾಪತ್ತೆಯಾಗಿದ್ದರು. ಮನೆಮಂದಿ ಹುಡುಕಾಟ ನಡೆಸಿದ್ದರು. ಆದರೆ ಆತ ಎಲ್ಲೂ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಗ್ಗೆ ಸಾಗರ್ ಮೃತದೇಹ ಹಳ್ಳವೊಂದರಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಕರಾವಳಿ ಸಹಿತ 3 ಜಿಲ್ಲೆಗಳಲ್ಲಿ ಭಾರೀ ಮಳೆ:ರೆಡ್‌ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಮುಂಗಾರು ಮಳೆ ಹಲವೆಡೆ ವ್ಯಾಪಿಸಿ ಉತ್ತಮ ಮಳೆಯಾಗುತ್ತಿದ್ದು, ಕೆಲವು ಉತ್ತಮ ಮಳೆಯಾಗಿ ಜನಜೀವನ ವ್ಯಸ್ತಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಉತ್ತಮ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ (ಜೂ.15) ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆ  ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಕರಾವಳಿ ಭಾಗದಲ್ಲಿ ಜೂ.15ರಂದು

ಕಾರಿಂಜ: ಕಾಲು ಜಾರಿ ಕೆರೆಗೆ ಬಿದ್ದುವಿದ್ಯಾರ್ಥಿ ಸಾವು

ಪುಂಜಾಲಕಟ್ಟೆ : ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.ವಗ್ಗ ಕಾರಿಂಜ ಕ್ರಾಸ್ ಬಳಿಯ ಕಂಗಿತ್ತಿಲು ನಿವಾಸಿ ಶ್ರೀಧರ ಮೂಲ್ಯ ಅವರ ಪುತ್ರ, ಬಂಟ್ವಾಳ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚೇತನ್ ( 19) ಮೃತಪಟ್ಟವರು.ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ