ನವರಾತ್ರಿ ಬಂತೆಂದರೆ ಸಾಕು ಎಲ್ಲಾ ದೇವಿ ದೇವಸ್ಥಾನಗಳಲ್ಲಿ ವಿಶೇಷ ದೇವಿ ಆರಾಧನೆಗಳು ನಡೆದರೆ, ಇನ್ನೊಂದೆಡೆ ವಿವಿಧ ವೇಷಧಾರಿಗಳು ಮನೆ ಮನೆಗೆ ಆಗಮಿಸುವ ಮೂಲಕ ಜನರ ಮನತಣಿಸುತ್ತಾರೆ. ಹುಲಿವೇಷ, ಪುರುಷವೇಷ, ಸ್ತ್ರೀವೇಷ ಹೀಗೆ ಹಲವು ತರಹದ ವೇಷಗಳನ್ನು ನವರಾತ್ರಿಯ ಒಂಬತ್ತು ದಿನಗಳಲ್ಲಿ ನೋಡಬಹುದು. ಇಂಥಹುದೇ ಒಂದು ವೇಷದ ಮೂಲಕ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ
ಬಂಟ್ವಾಳ: ಬಿ.ಸಿ. ರೋಡ್‍ನ ಹೃದಯ ಭಾಗದಲ್ಲಿರುವ ಹೊಟೇಲ್ ಕೃಷಿಮಾ ಇದರ ಪ್ರಥಮ ಮಹಡಿ ಯಲ್ಲಿ ಗ್ರಾಹಕರ ಅನುಕೂಲಕ್ಕೆ ತಕ್ಕಂತಹ ವಿನ್ಯಾಸಗೊಳಿಸಿರುವ ಸುಸಜ್ಜಿತ ಹಾಗೂ ಹವಾನಿಯಂತ್ರಿತ ಪ್ರೋಫೆಷನಲ್ ಯೂನಿಸೆಕ್ಸ್ ಸೆಲೂನ್ ಬ್ಲಾಂಡ್ ಶುಭಾರಂಭಗೊಂಡಿತು.ಬಂಟ್ವಾಳ ಶಾಸಕ ರಾಜೇಶ್ ನ್ಯಾಕ್ ಉಳಿಪ್ಪಾಡಿಗುತ್ತು ನೂತನ ಸೆಲೂನು ಉದ್ಘಾಟನೆಗೊಳಿಸಿದರು. ಸಂಸ್ಥೆಯ ಪ್ರವರ್ತಕ ಮಾತೃಶ್ರಿ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು.ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು
ಬಸ್ಸು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.ಅಪಘಾತದಲ್ಲಿ ಬೈಕ್ ಸವಾರ ಬೆಳ್ತಂಗಡಿ ನಿವಾಸಿ ಮಹಮ್ಮದ್ ಸುಹೈಲ್ (40) ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಟ್ವಾಳ ಕೆಳಗಿನ ಪೇಟೆಗೆ ಬಂದು ಬೆಳ್ತಂಗಡಿ ಗೆ ತೆರಳುವ ವೇಳೆ ಜಕ್ರಿಬೆಟ್ಟು ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ. ಬಂಟ್ವಾಳ ಪೇಟೆಯಿಂದ ಜಕ್ರಿಬೆಟ್ಟು ಜಂಕ್ಷನ್
ಶಿವಮೊಗ್ಗದಲ್ಲಿ ಉಗ್ರ ಚಟುವಟಿಕೆ ನಡೆಸುತ್ತಿರುವ ಶಂಕೆಯಲ್ಲಿ ಬಂಧಿತ ಆರೋಪಿ ಮಂಗಳೂರಿನ ಮಾಝ್ ಮುನೀರ್ ಅಹ್ಮದ್ ಶಿವಮೊಗ್ಗ ಪೊಲೀಸರು ಬಂಟ್ವಾಳದ ನಾವೂರು ಸಮೀಪ ಹಲವೆಡೆ ಮಹಜರು ನಡೆಸಿದರು. ನೇತ್ರಾವತಿ ನದಿ ಕಿನಾರೆಯಲ್ಲಿ ಹಾಗೂ ಸುತ್ತಮುತ್ತಲಿನ ನಿರ್ಜನ ಪ್ರದೇಶಗಳಲ್ಲಿ ಈತ ಸ್ಫೋಟಕಗಳನ್ನು ಬಚ್ಚಿಟ್ಟಿರುವ ಶಂಕೆಯಿಂದ ಈ ಪರಿಶೀಲನೆ ನಡೆಸಲಾಗಿದೆ ಎನ್ನಲಾಗಿದೆ. ಮಂಗಳೂರಿನಿಂದ ಈತನನ್ನು ಬಂಟ್ವಾಳಕ್ಕೆ ಕರೆತಂದ ಪೊಲೀಸರು ರಾತ್ರಿವರೆಗೂ ಪರಿಶೀಲನೆ ನಡೆಸಿದರು.ಶಂಕಿತ
ಬಂಟ್ವಾಳ: ಪುದು ಗ್ರಾ.ಪಂ.ಪರಿಶಿಷ್ಟ ಜಾತಿ ಹಾಗೂ ಪಂಗಡದ ಅನುದಾನವನ್ನು ದುರ್ಬಳಕೆ ಮಾಡಿದೆ ಎಂದು ಆರೋಪಿಸಿ ಮಂಗಳೂರು ಬಿಜೆಪಿ ಎಸ್‍ಸಿ, ಎಸ್‍ಟಿ ಮೋರ್ಚಾ ವತಿಯಿಂದ ಮಂಗಳೂರು ಮಂಡಲದ ಉಪಾಧ್ಯಕ್ಷ ವಿಠಲ್ ಸಾಲ್ಯಾನ್ ಅವರ ನೇತೃತ್ವದಲ್ಲಿ ಗ್ರಾ.ಪಂ.ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.ದ.ಕ.ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸತೀಶ್ ಕುಂಪಲ ಅವರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಪುದು ಗ್ರಾ.ಪಂ. ಪರಿಶಿಷ್ಟರಿಗೆ ಮೀಸಲಾತಿಯ ಅನುದಾನವನ್ನು ದುರ್ಬಳಕೆ
ಬಂಟ್ವಾಳ: ವಿಶ್ವಕರ್ಮ ಸಮಾಜ ಸೇವಾ ಸಂಘ ಇದರ ವತಿಯಿಂದ 29 ನೇ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕಲಶ ಪ್ರತಿಷ್ಠೆ, ಮಹಾಪೂಜೆ ನಡೆಯಿತು. ವಿಶ್ವಜ್ಯೋತಿ ಮಹಿಳಾ ಸಂಘದ ಸದಸ್ಯೆಯರಿಂದ ಭಜನೆ ನಡೆಯಿತು. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್ ಮೊದಲಾದವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ
ಬಂಟ್ವಾಳದ ಗೋಳ್ತಮಜಲು ಗ್ರಾಮದ ಸಚಿನ್ ಕೊಟ್ಟಾರಿ ಅವರು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಕಳೆದ 5 ವರ್ಷಗಳಿಂದ ವಾರಕ್ಕೆ ಮೂರು ಬಾರಿ ಡಯಾಲಿಸಿಸ್‍ಗೆ ಒಳಗಾಗುತ್ತಿದ್ದಾರೆ. ವೈದ್ಯರ ಸಲಹೆಯಂತೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೂತ್ರ ಪಿಂಡದ ಕಸಿ ಮಾಡಲು ನೋಂದಾಯಿಸಿದ್ದು, ಇದೀಗ ಮೂತ್ರ ಪಿಂಡದ ಕಸಿ ಶಸ್ತ್ರಚಿಕಿತ್ಸೆಗೆ ಸುಮಾರು 15 ಲಕ್ಷ ರೂಪಾಯಿ ವೆಚ್ಚ ತಗುಲಲಿದೆ. ಸಚಿನ್ ಕೊಟ್ಟಾರಿ ಕುಟುಂಬ ಕಡು ಬಡವರಾಗಿದ್ದು, ಇದೀಗ ದಾನಿಗಳ ಸಹಾಯದ
ಬಂಟ್ವಾಳ: ಕಾರ್ಮಿಕರ ಕೊರತೆಯಿಂದ ಭತ್ತದ ಸಾಗುವಳಿಯೂ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದ್ದು ಅಳಿದುಳಿದಿರುವ ಗದ್ದೆಗಳು ಬಹುತೇಕ ಬರಡಾಗಿದ್ದರೆ ಕೆಲವೊಂದು ಗದ್ದೆಗಳಲ್ಲಿ ಯಾಂತ್ರೀಕ ವಿಧಾನದಲ್ಲಿ ಕೃಷಿ ಕಾರ್ಯಗಳು ನಡೆಯುತ್ತಿವೆ. ಕೃಷಿ ಚಟುವಟಿಕೆಗಳು ಅವನತಿಗೆ ಸಾಗುತ್ತಿದ್ದಂತೆಯೇ ಅದರೊಂದಿಗೆ ಮಿಳಿತವಾಗಿರುವ ಅನೇಕ ಕೃಷಿ ಸಂಬಂಧಿ ಆಚರಣೆಗಳು, ಜಾನಪದೀಯವಾದ ಪಾಡ್ದನ, ಸಂಧಿ ಮೊದಲಾದ ಹಾಡು ಪ್ರಾಕಾರಗಳು ಕಣ್ಮರೆಯಾಗುತ್ತಿದೆ. ಬಲು ಅಪುರೂಪವೆಂಬಂತೆ ಬಂಟ್ವಾಳ
ಬಂಟ್ವಾಳ: ವಿಶ್ವಹಿಂದೂ ಪರಿಷತ್- ಮಾತೃಶಕ್ತಿ ದುರ್ಗಾವಾಹಿನಿ ಬಜರಂಗ ದಳ ಛತ್ರಪತಿ ಶಾಖೆ ಕುಮ್ಡೇಲು ಇದರ ಆಶ್ರಯದಲ್ಲಿ ಕಡೆಗೋಳಿ ಶ್ರೀ ಪೊಳಲಿ ರಾಜರಾಜೇಶ್ವರೀ ಮಹದ್ವಾರದ ಬಳಿ ನೂತನವಾಗಿ ನಿರ್ಮಾಣಗೊಂಡ ಪೂರ್ಣ ಕುಂಭ ಕಲಶ ಮಾದರಿಯ ಛತ್ರಪತಿ ಶಿವಾಜಿ ವೃತ್ತ ಉದ್ಘಾಟನಾ ಸಮಾರಂಭ ನೆರವೇರಿತು. ನೂತನ ಛತ್ರಪತಿ ಶಿವಾಜಿ ವೃತ್ತವನ್ನು ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಉದ್ಘಾಟಸಿ, ದೀಪ ಪ್ರಜ್ವಲಿಸಿದರು. ಈ ಸಂದರ್ಭ ಬಜರಂಗದಳ
ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿಯಲ್ಲಿ ಮಂಗಳವಾರ ತಡರಾತ್ರಿ ಮನೆಯೊಂದಕ್ಕೆ ಅತ್ಯಂತ ಭೀಕರ ರೀತಿಯಲ್ಲಿ ಸಿಡಿಲು ಬಡಿದು ಲಕ್ಷಾಂತರ ಮೌಲ್ಯದ ಮನೆಯ ಸೊತ್ತುಗಳ ಜತೆಗೆ ಕ್ಯಾಟರಿಂಗ್ ಉದ್ಯಮ ಪಾತ್ರೆ ಪಗಡೆಗಳು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.ಪುಣ್ಕೆದಡಿ ನಿವಾಸಿ ಲೋಕೇಶ್ ಪೂಜಾರಿ ಅವರ ಮನೆಗೆ ಸಿಡಿಲು ಬಡಿದಿದ್ದು, ಆದರೆ ಮನೆಮಂದಿ ಪಕ್ಕದ ಮನೆಯಲ್ಲಿ ಮಲಗಿದ್ದ ಹಿನ್ನೆಲೆಯಲ್ಲಿ ಬಾರಿ ಅನಾಹುತವೊಂದು ತಪ್ಪಿದಂತಾಗಿದೆ. ಇಲ್ಲದೇ ಇದ್ದರೆ ಜೀವಕ್ಕೂ




























