ಬಂಟ್ವಾಳ: ಅಕ್ರಮ ಚಟುವಟಿಕೆಗಳ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದಿಂದ ಆ.30ರಂದು ಮಾಣಿ ಸಮೀಪದ ನೇರಳಕಟ್ಟೆಯ ಜನಪ್ರಿಯಾ ಗಾರ್ಡನ್ ಹಾಲ್ ನಲ್ಲಿ ಉಲಮಾ ಉಮರಾ ಕಾನ್ಪರೆನ್ಸ್ ಆಯೋಜಿಸಲಾಗಿದೆ ಎಂದು ಕೆ.ಐ.ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ ಹೇಳಿದರು. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ
ಬಂಟ್ವಾಳ: ಮಂಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಕ್ಕಾಜೆಯಲ್ಲಿ ಸಂಜೆ ವೇಳೆ ತಳ್ಳುಗಾಡಿಯಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ರಾಮಕೃಷ್ಣ ಕಾಮತ್ ಎಂಬವರ ತಳ್ಳುಗಾಡಿಯನ್ನು ಪಂಚಾಯತಿ ಆಡಳಿತ ತೆರವುಗೊಳಿಸಿದ ಘಟನೆ ನಡೆದಿದ್ದು ಈ ಬಗ್ಗೆ ಪಂಚಾಯತಿಗೆ ದಂಡ ಪಾವತಿಸಿ ಗಾಡಿ ಬಿಡಿಸಿಕೊಂಡು ಬರಲು ಹೋಗಿ ವಾಪಸ್ಸು ಬರುತ್ತಿದ್ದ ವೇಳೆ ರಾಮಕೃಷ್ಣ ಕಾಮತ್ ಅವರು ಅಧಿಕ ರಕ್ತದೊತ್ತಡಕ್ಕೆ ಒಳಗಾಗಿ ಕುಸಿದು ಬಿದ್ದು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ
ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ತರಬೇತಿ ಪಡೆಯುತ್ತಿರುವ 8 ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸ್ಪರ್ಧಾ ಕೂಟದಲ್ಲಿ ಕಳ್ಳಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಹಂಸಿಕಾ ಹಾಗೂ ಗಿತೇಶ್ ದ್ವಿತೀಯ ಸ್ಥಾನ ಗೆದ್ದುಕೊಂಡಿದ್ದಾರೆ ಪೊಳಲಿ
ಬಾಡಿಗೆಗೆ ಟ್ಯಾಕ್ಸಿ ಗೊತ್ತುಪಡಿಸಿಕೊಂಡು ಅರ್ಧ ದಾರಿಯಲ್ಲಿ ಚಾಲಕರನ್ನು ಲೂಟಿ ಮಾಡುವ, ಹಲ್ಲೆ ಮಾಡುವ ದುಷ್ಕತ್ಯಗಳು ನಡೆಯುತ್ತಿದ್ದು, ಈ ಬಗ್ಗೆ ಚಾಲಕರು ಎಚ್ಚರಿಕೆ ವಹಿಸಬೇಕು ಎಂದು ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಸಲಹೆ ನೀಡಿದೆ.ದ.ಕ. ಜಿಲ್ಲೆಯ ಬಂಟ್ವಾಳ ಕೊಯಿಲ ನಿವಾಸಿ ಹಾಗೂ ಅಸೋಸಿಯೇಶನ್‍ನ ಸದಸ್ಯರಾದ ಅಬ್ದುಲ್ ರಹಿಮಾನ್ ಎಂಬ ಟ್ಯಾಕ್ಸಿ ಚಾಲಕರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಉಲ್ಲೇಖಿಸಿ ಸಂಘದ ಅಧ್ಯಕ್ಷ
ಬಂಟ್ವಾಳ: ಮೆಲ್ಕಾರ್‍ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ಗುರು ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ನಿ. ಇದರ ನೂತನ ಕಡೆಗೋಳಿ ಶಾಖೆಯು ಪುದು ಗ್ರಾಮದ ಕಡೆಗೋಳಿಯ ಶ್ರೀ ನಾರಾಯಣ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು.ಸಂಘದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ದೇಶಕ್ಕೆ ಆರ್ಥಿಕ ಶಕ್ತಿಯ ಬೆಳಕನ್ನು ದ.ಕ. ಜಿಲ್ಲೆ ನೀಡಿದೆ. ಗ್ರಾಮೀಣ ಭಾಗದ ಜನರಿಗೆ ರಾಷ್ಟ್ರೀೀಕೃತ ಬ್ಯಾಂಕುಗಳು ನೀಡಲು
ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ಕಾರ್ಯಕ್ರಮ ಆ.23 ರಂದು ಮಂಗಳವಾರದಂದು ಹಮ್ಮಿಕೊಳ್ಳಲಾಗಿದ್ದು ನಾವೂರ ಗ್ರಾಮದ ಮಣ್ಣಿಹಳ್ಳ ಜಂಕ್ಷನಲ್ಲಿ ಬೆಳಿಗ್ಗೆ 9.30ಕ್ಕೆ ಪಾದಾಯಾತ್ರೆ ಪ್ರಾರಂಭಗೊಳ್ಳಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಪಾದಯಾತ್ರೆಯು ಜಕ್ರಿಬೆಟ್ಟು ಮೂಲಕ ಸಾಗಿ
ಮಂಗಳೂರು:- ಸ್ವಾತಂತ್ರ್ಯದ ಅಮೃತೋತ್ಸವದ ಪ್ರಯುಕ್ತ ಮಂಗಳೂರು ಹೊರವಲಯದ ಅಡ್ಡೂರಿನಲ್ಲಿ ಸನ್ ಶೈನ್ ಫ್ರೆಂಡ್ಸ್ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಮುಖ್ಯ ಅತಿಥಿಗಳಾದ ಎಂ.ಜಿ ಹೆಗ್ಡೆ ( ಶಿಕ್ಷಣತಜ್ಞರು ) ಹಾಗೂ ಯು.ಪಿ ಇಬ್ರಾಹಿಂ ಇವರು ನೆರವೇರಿಸಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸನ್ ಶೈನ್ ಫ್ರೆಂಡ್ಸ್ ಅಡ್ಡೂರು ಇದರ ಅಧ್ಯಕ್ಷ ಎ ಕೆ ಹನೀಫ್ ಅವರು ವಹಿಸಿದ್ದರು. ಡಾ ಇ ಕೆ ಎ ಸಿದ್ದೀಕ್ ಅಡ್ಡೂರು, ಜನಾಬ್ ಅಹ್ಮದ್ ಬಾವ
ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮೃತ ಶೋಭಾಯಾತ್ರೆ ನಡೆಸಿ ಗಮನ ಸೆಳೆದರು. ಶ್ರೀರಾಮ ವಿದ್ಯಾಕೇಂದ್ರದ ಮೈದಾನದಲ್ಲಿ ಶಾಸಕ ರಾಜೇಶ್ ನಾೈಕ್ ಅವರು ಧ್ವಜಾರೋಹಣ ನೆರವೇರಿಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಅವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ವಿದ್ಯಾಕೇಂದ್ರದ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ
ದೇಶದ 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ” ಆಜಾದಿ ಕಾ ಅಮೃತ ಮಹೋತ್ಸವ” ವನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಮಂಗಳೂರು ಮಹಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮಂಗಳೂರು ಮಹಾನಗರ ಪಾಲಿಕಾ ಅಧೀನದ ತುಂಬೆ ಅಣೆಕಟ್ಟನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಸಾರ್ವಜನಿಕರು ಅಗಸ್ಟ್ 13 ರಿಂದ ಅಗಸ್ಟ್ 15 ರವರೆಗೆ ಬಂಟವಾಳ ಬಂಟರ ಭವನದ ಕೆಳಅಂತಸ್ತಿನಿಂದ ಸಂಜೆ 6.00 ರಿಂದ 9.00 ರವರೆಗೆ ವೀಕ್ಷಣೆ ಮಾಡಬಹುದು ಎಂದು
ಬಂಟ್ವಾಳ: ದ.ಕ.ಜಿ.ಪಂ., ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ಥಳೀಯರ ಸಹಕಾರದೊಂದಿಗೆ ಚೆಂಡಿನ ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಎಂಒ4 ಭದ್ರಾ ತಳಿಯನ್ನು ಬಿತ್ತನೆ ಮಾಡಲಾಗಿದೆ. ಯುವಕರು ಭತ್ತದ ಬೇಸಾಯದಲ್ಲಿ ತೊಡಗಲು




























