ಪರಿಸರ ಪ್ರೇಮಿಯೋರ್ವರು ಸಾರ್ವಜನಿಕವಾಗಿ ರಸ್ತೆ ಬದಿಯಲ್ಲಿ ನೆಟ್ಟಿರುವ ಗಿಡಗಳನ್ನು ದುಷ್ಕರ್ಮಿಗಳು ಕಿತ್ತೆಸೆದ ಘಟನೆ ಬಡಗಕಜೆಕಾರು ಗ್ರಾಮದ ದೆತ್ತಿಮಾರು ಎಂಬಲ್ಲಿ ಸಂಭವಿಸಿದ್ದು, ಈ ಬಗ್ಗೆ ಅರಣ್ಯ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಲಾಗಿದೆ. ಇನ್ನು ರಾತೋರಾತ್ರಿ ಸ್ಥಳೀಯ ಐವರು ವ್ಯಕ್ತಿಗಳು ಕಿತ್ತೆಸೆದು ಧ್ವಂಸಗೊಳಿಸಿರುವುದಾಗಿ ಮಾರ್ಕ್ ಸೇರಾ ಅವರು ದೂರು
ಬಂಟ್ವಾಳ: ಅಡಿಕೆ ಮರ ಏರುವ ಬೈಕ್ ಆವಿಷ್ಕರಿಸಿ ಜಗತ್ತಿನ ಗಮನ ಸೆಳೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪ್ರಗತಿಪರ ಕೃಷಿಕ, ಸಂಶೋಧಕ ಗಣಪತಿ ಭಟ್ ಮತ್ತೊಮ್ಮೆ ಸುದ್ದಿಯಾಗುತ್ತಿದ್ದಾರೆ. ಮುಂದಿನ ವಿಶ್ವ ಟಿ-20 ಕ್ರಿಕೆಟ್ ಟೂರ್ನಿ ಸಂದರ್ಭ ಭಾರತ ಗೆದ್ದು ಬರುವಂತೆ ಜಾಹೀರಾತಿನಲ್ಲಿ ಗಣಪತಿ ಭಟ್, ಭಾರತ ಕ್ರಿಕೆಟ್ ತಂಡದ ಸದಸ್ಯರಿಗೆ ಚಿಯರ್ಸ್ ಮಾಡಲಿದ್ದಾರೆ. ಸ್ಟಾರ್ ಸ್ಪೋಟ್ಸ್ ಚಾನಲ್ ಈ ಅವಕಾಶವನ್ನು ಗ್ರಾಮೀಣ ಭಾಗದ ಒರ್ವ ಕೃಷಿಕನಿಗೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಅನ್ನಪಾಡಿ ಬಾಲಗಣಪತಿ ದೇವಾಲಯದ ಬಳಿಯ ದಿ. ಮೋನಪ್ಪ ಪೂಜಾರಿಯವರ ತೋಟದಲ್ಲಿರುವ ಶಾಸನವನ್ನು ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಇದರ ಅಧ್ಯಕ್ಷರಾದ ಡಾ| ತುಕಾರಾಮ ಪೂಜಾರಿಯವರು ಹಾಗೂ ಬಂಟ್ವಾಳ ತಾಲೂಕು ಪಂಚಾಯತಿನ ಮಾಜಿ ಅಧ್ಯಕ್ಷರಾದ ಶ್ರೀ ಯಶವಂತ ದೇರಾಜೆ ಅವರು ಈ ಮೊದಲು ಪತ್ತೆ ಮಾಡಿರುತ್ತಾರೆ. ಪ್ರಾಚ್ಯಸಂಚಯ ಸಂಶೋಧನಾ ಕೇಂದ್ರ – ಉಡುಪಿ (ಎನ್.ಟಿ.ಸಿ- ಎ.ಒ.ಎಂ ನ ಅಂಗ
ಬಂಟ್ವಾಳ : ತಾಲೂಕಿನ ಮೇಗಿನ ಕುರಿಯಾಳದಲ್ಲಿ ಪ್ರಾಚ್ಯಸಂಚಯ ಸಂಶೋಧನ ಕೇಂದ್ರ-ಉಡುಪಿ,(ಎನ್.ಟಿ.ಸಿ.-ಎ.ಒ.ಎಂ-ನ ಅಂಗ ಸಂಸ್ಥೆ) ಇದರ ಅಧ್ಯಯನ ನಿರ್ದೇಶಕ ಪ್ರೊ.ಎಸ್.ಎ.ಕೃಷ್ಣಯ್ಯ ಅವರು ಇತ್ತೀಚೆಗೆ ಪತ್ತೆ ಮಾಡಿದ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದಾರೆ. ಗ್ರಾನೈಟ್ (ಕಣ)ಶಿಲೆಯಲ್ಲಿ ಕೊರೆಯಲ್ಪಟ್ಟ ಈ ಶಾಸನವು ಕನ್ನಡ ಲಿಪಿ ಮತ್ತು ಭಾಷೆಯಲ್ಲಿದ್ದು 25 ಸಾಲುಗಳನ್ನು ಹೊಂದಿದೆ. ಶಾಸನವು
ಬಂಟ್ವಾಳ: ಕೆಎಸ್ಆರ್ಟಿಸಿಯ ಐಸಿಯು ಬಸ್ ಸೇವೆ, ಕೋವಿಡ್ ವ್ಯಾಕ್ಸಿನ್ ನೀಡಿಕೆ ಹಾಗೂ ಕಾರ್ಮಿಕ ಇಲಾಖೆಯಿಂದ ನೀಡುವ ಆಹಾರದ ಕಿಟ್ನಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬಿ.ಸಿ. ರೋಡಿನ ಮಿನಿವಿಧಾನ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಸರಕಾರದ ಸೌಲಭ್ಯಗಳು ನೀಡಿಕೆಯಲ್ಲಿ ಕಾಂಗ್ರೆಸ್ ಹಾಗೂ
ಬಂಟ್ವಾಳ: ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಬ್ರಹ್ಮರಕೂಟ್ಲು ಹಾಗೂ ಕಳ್ಳಿಗೆ ಗ್ರಾಮಾಭಿವೃದ್ದಿ ಸಂಘದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಬುಧವಾರ ಶಾಲೆಯಲ್ಲಿ ನಡೆಯಿತು. ಮಾಜಿ ಸಚಿವ, ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿ ಸಾಂಕೇತಿಕವಾಗಿ ಪುಸ್ತಕ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು ಶಿಕ್ಷಣ ಪ್ರಗತಿಯ ಸಂಕೇತ ಆದರೆ ಹಿಂದೆಲ್ಲಾ ಎಲ್ಲರಿಗೂ ಶಿಕ್ಷಣ ಪಡೆಯುವ
ಬಂಟ್ವಾಳ: ಶಾಸಕ ರಾಜೇಶ್ ನಾಕ್ ನೇತೃತ್ವದಲ್ಲಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಅವರಿದ್ದ ನಿಯೋಗ ಬುಧವಾರ ಬೆಂಗಳೂರಿನ ಕಚೇರಿಯಲ್ಲಿ ರಾಜ್ಯ ಪ್ರಾಥಮಿಕ ಹಾಗೂ ಪೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರನ್ನು ಭೇಟಿ ಮಾಡಿತು. ಕೋವಿಡ್ ಕಾರಣದಿಂದಾಗಿ ಸ್ಥಗಿತಗೊಂಡಿರುವ ಶಾಲೆಗಳನ್ನು ಒಂದನೇ ತರಗತಿಯಿಂದಲೇ ಆರಂಭಿಸಬೇಕು ಎನ್ನುವ ನಿಯೋಗದ ಮನವಿಗೆ ಸ್ಪಂದಿಸಿದ ಸಚಿವರು 9 ಮತ್ತು 10ನೇ ತರಗತಿಗಳು ಆರಂಭಗೊಂಡ ಬಳಿಕ ಎರಡು ದಿನದಲ್ಲಿ
ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವವನ್ನು ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗ ಕೋವಿಡ್ ಮಾರ್ಗಸೂಚಿಯನ್ವಯ ಸರಳವಾಗಿ ಆಚರಿಸಲಾಯಿತು. ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ರಾಜೇಶ್ ನಾಕ್, ಡಿವೈಎಸ್ಪಿ ವೆಲೈಂಟೀನ್ ಡಿಸೋಜಾ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ ಉಪಸ್ಥಿತರಿದ್ದರು. ಬಂಟ್ವಾಳ ಪೋಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ, ಗೃಹರಕ್ಷಕದಳ
ವೇತನ ಪಾವತಿಯಾಗದ ಕಾರಣ ಕ್ಯಾಂಟೀನ್ ಬಂದ್ ಗೊಳಿಸಿ ಪ್ರತಿಭಟನೆ ನಡೆಸುತ್ತಿರುವ ಬಿ.ಸಿ.ರೋಡಿನ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ಸಂಕಷ್ಟಕ್ಕೆ ಸ್ಪಂದಿಸಿರುವ ಮಾಜಿ ಸಚಿವ ಬಿ. ರಮನಾಥ ರೈ ಆಹಾರದ ಕಿಟ್ ನೀಡುವ ಭರವಸೆ ನೀಡಿದ್ದಾರೆ. ಬುಧವಾರ ಕ್ಯಾಂಟೀನ್ ಗೆ ಭೇಟಿ ನೀಡಿದ ಅವರು ಇಂದಿರಾ ಕ್ಯಾಂಟೀನ್ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ ಎಸ್
ಬಂಟ್ವಾಳ: ತಾಲೂಕಿನ ಅರಳ ಗ್ರಾಮದ ಸೊರ್ನಾಡು ಎಂಬಲ್ಲಿ ಸಾರ್ವಜನಿಕ ಸ್ವಾಮ್ಯಕ್ಕೊಳಪಟ್ಟ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್ಗೆ ಕನ್ನ ಕೊರೆದು ಪೆಟ್ರೋಲಿಯಂ ಉತ್ಪನ್ನ ಕಳವು ನಡೆಸಿ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಸ್ಥಳೀಯ ಅರ್ಬಿ ನಿವಾಸಿ ಐವನ್ ಚಾರ್ಲ್ ಪಿಂಟೋ(43) ಹಾಗೂ ಆತನಿಗೆ ಸಹಕರಿಸಿದ ಆರೋಪದಡಿ ಪಚ್ಚನಾಡಿ ಬೋಂದೆಲ್ ನಿವಾಸಿ ಅಜಿತ್ ಮತ್ತು ಕಣ್ಣೂರು ನಿವಾಸಿ ಜೋಯೆಲ್