ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವವನ್ನು ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗ ಕೋವಿಡ್ ಮಾರ್ಗಸೂಚಿಯನ್ವಯ ಸರಳವಾಗಿ ಆಚರಿಸಲಾಯಿತು. ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ರಾಜೇಶ್ ನಾಕ್, ಡಿವೈಎಸ್ಪಿ ವೆಲೈಂಟೀನ್ ಡಿಸೋಜಾ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ
ವೇತನ ಪಾವತಿಯಾಗದ ಕಾರಣ ಕ್ಯಾಂಟೀನ್ ಬಂದ್ ಗೊಳಿಸಿ ಪ್ರತಿಭಟನೆ ನಡೆಸುತ್ತಿರುವ ಬಿ.ಸಿ.ರೋಡಿನ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ಸಂಕಷ್ಟಕ್ಕೆ ಸ್ಪಂದಿಸಿರುವ ಮಾಜಿ ಸಚಿವ ಬಿ. ರಮನಾಥ ರೈ ಆಹಾರದ ಕಿಟ್ ನೀಡುವ ಭರವಸೆ ನೀಡಿದ್ದಾರೆ. ಬುಧವಾರ ಕ್ಯಾಂಟೀನ್ ಗೆ ಭೇಟಿ ನೀಡಿದ ಅವರು ಇಂದಿರಾ ಕ್ಯಾಂಟೀನ್ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ ಎಸ್
ಬಂಟ್ವಾಳ: ತಾಲೂಕಿನ ಅರಳ ಗ್ರಾಮದ ಸೊರ್ನಾಡು ಎಂಬಲ್ಲಿ ಸಾರ್ವಜನಿಕ ಸ್ವಾಮ್ಯಕ್ಕೊಳಪಟ್ಟ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್‌ಗೆ ಕನ್ನ ಕೊರೆದು ಪೆಟ್ರೋಲಿಯಂ ಉತ್ಪನ್ನ ಕಳವು ನಡೆಸಿ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಸ್ಥಳೀಯ ಅರ್ಬಿ ನಿವಾಸಿ ಐವನ್ ಚಾರ್ಲ್ ಪಿಂಟೋ(43) ಹಾಗೂ ಆತನಿಗೆ ಸಹಕರಿಸಿದ ಆರೋಪದಡಿ ಪಚ್ಚನಾಡಿ ಬೋಂದೆಲ್ ನಿವಾಸಿ ಅಜಿತ್ ಮತ್ತು ಕಣ್ಣೂರು ನಿವಾಸಿ ಜೋಯೆಲ್
ಬಂಟ್ವಾಳ: ಬಂಟ್ವಾಳ ಪೇಟೆಯಲ್ಲಿರುವ ಎಸ್‌ವಿಎಸ್ ದೇವಳ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಎನ್.ಪ್ರತೀಕ್ ಮಲ್ಯ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೇಯಲ್ಲಿ 625 ಅಂಕ ಪಡೆದುಕೊಂಡು ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾನೆ. ಇಲ್ಲಿನ ತ್ಯಾಗರಸ್ತೆಯ ನಿವಾಸಿ ಎನ್. ವೆಂಕಟೇಶ್ ಮಲ್ಯ ಹಾಗೂ ಎನ್.ರಾಧಿಕ ಮಲ್ಯ ಅವರ ಪುತ್ರರಾಗಿರುವ ಪ್ರತೀಕ್ ಮುಂದೆ ಉದ್ಯಮಿಯಾಗುವ ಗುರಿ ಹೊಂದಿದ್ದಾರೆ. ತನ್ನ ಸಾಧನೆಗೆ ಶಿಕ್ಷಕರ ಪ್ರೋತ್ಸಾಹ, ಪೋಷಕರು, ಮನೆಯವರ ಬೆಂಬಲವೇ
ಬಂಟ್ವಾಳ: ಬೊರೆವೆಲ್ ಕೊರೆಸುವ ವಾಹನ ಬಂದು ರಸ್ತೆ ಹಾಳಾಗಿದೆ ಎಂದು ಆರೋಪಿಸಿ ವ್ಯಕ್ತಿಯೊರ್ವರಿಗೆ ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿದ್ದಲ್ಲದೆ ಕೊಲ್ಲುವುದಾಗಿ ಜೀವ ಬೆದರಿಕೆಯೊಡ್ಡಿದ ಘಟನೆ ಸಂಗಬೆಟ್ಟು ಗ್ರಾಮದ ಅಳಿಕೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಅಲ್ವಿನ್ ರಿಚರ್ಡ್ ಫಲೇರಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಸ್ಥಳೀಯ ನಿವಾಸಿ ಅನಿಲ್ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ.ರಿಚರ್ಡ್ ಫಲೇರಾ ತನ್ನ ತಂದೆಯಿಯೊಂದಿಗೆ ಅಳಿಕೆ ಎಂಬಲ್ಲಿ
ಕೋವಿಡ್ 3ನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಘೋಷಿಸಿದ ವೀಕೆಂಡ್ ಕರ್ಪ್ಯೂಗೆ ಬಂಟ್ವಾಳ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಟ್ಟುನಿಟ್ಟಿನ ಕರ್ಪ್ಯೂ ಪಾಲನೆಯಾಗದ ಹಿನ್ನಲೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು, ಸರಕಾರಿ ಅಂಗಡಿ, ಬಸ್, ಕಾರು, ರಿಕ್ಷಾ ಸಹಿತ ಖಾಸಗಿ ವಾಹನಗಳ ಸಂಚಾರ ಎಂದಿನಂತೆಯೇ ಇತ್ತು. ಕೆಲವೊಂದು ಅಂಗಡಿ, ಕಚೇರಿಗಳು ಸ್ವಯಂ ಪ್ರೇರಿತರಾಗಿ ಬಂದ್ ಗೊಳಿಸಿ ವೀಕೆಂಡ್ ಕರ್ಪ್ಯೂಗೆ ಬೆಂಬಲ ನೀಡಿದ್ದಾರೆ. ಮೆಡಿಕಲ್,
ಬಂಟ್ವಾಳ: ಬಿಪಿಎಲ್ ಕಾರ್ಡ್ ರದ್ದುಮಾಡುವುದು, ಅದನ್ನು ಪುನರ್ ವಿಮರ್ಶೆ ಮಾಡಿ ಕೊಡಿಸುತ್ತೇವೆ ಎನ್ನುವುದು ಆಡಳಿತ ಪಕ್ಷದ ಪ್ರಚಾರದ ತಂತ್ರ ಎಂದು ಮಾಜಿ ಸಚಿವ ಬಿ. ರಮನಾಥ ರೈ ಆರೋಪಿಸಿದ್ದಾರೆ. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ ರಾಜಧರ್ಮದ ಕುರಿತು ಕೇವಲ ಭಾಷಣ ಮಾಡಿದರೆ ಸಾಲದು ಅದನ್ನು ಅನುಷ್ಟಾನಕ್ಕೆ ತರಬೇಕು ಎಂದು ಸಲಹೆ ನೀಡಿದ್ದಾರೆ. ಆಡಳಿತ ಪಕ್ಷಕ್ಕೆ ಸಂಬಂಧಪಟ್ಟವರೇ ಬಿಪಿಎಲ್ ಕಾರ್ಡ್ ರದ್ದು
ಬಂಟ್ವಾಳ: ಮಣ್ಣಡಿ ಹಾದು ಹೋಗಿರುವ ಪೈಪ್ ಲೈನ್ ಗೆ ಕನ್ನ ಕೊರೆದು ಡಿಸೇಲ್ ಕಳವು ನಡೆಸುತ್ತಿದ್ದ ಪ್ರಕರಣವೊಂದು ತಾಲೂಕಿನ ಅರಳ ಗ್ರಾಮದ ಸೊರ್ನಾಡು ಬಳಿ ಶುಕ್ರವಾರ ರಾತ್ರಿ ಬೆಳಕಿಗೆ ಬಂದಿದೆ. ಇಲ್ಲಿನ ಅರ್ಬಿ ಎಂಬಲ್ಲಿ ಐವನ್ ಪಿಂಟೊ ಎಂಬರಿಗೆ ಸೇರಿದ ಖಾಸಗಿ ಜಮೀನಿನಲ್ಲಿ ಮಂಗಳೂರು- ಬೆಂಗಳೂರಿಗೆ ಹಾದು ಹೋಗಿರುವ ಎಚ್ ಪಿ.ಎಸ್ ಎಲ್ ಪೆಟ್ರೊನೆಟ್ ಸಂಸ್ಥೆಗೆ ಸೇರಿದ ಪೈಪ್ ಲೈನ್ ಗೆ ಕನ್ನ ಕೊರೆದು ಡಿಸೆಲ್ ಕಳವು ನಡೆಸಲಾಗಿರುವುದಾಗಿ ತಿಳಿದು ಬಂದಿದೆ. ಪ್ರಕರಣ ಬೆಳಕಿಗೆ
ನಶಿಸುತ್ತಿರುವ ಭತ್ತದ ಕೃಷಿಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭತ್ತದ ಕೃಷಿಕರೊಂದಿಗೆ ಪತ್ರಕರ್ತರ ಸಾಮೂಹಿಕ ಭತ್ತದ ನಾಟಿ ಕಾರ್ಯಕ್ರಮ ಮಿತ್ತಳಿಕೆಗುತ್ತು ಕುಟುಂಬಸ್ಥರ ಸಹಕಾರದೊಂದಿಗೆ ಅಳಿಕೆ ಗ್ರಾಮದ ಮಿತ್ತಳಿಕೆಯ ಗದ್ದೆಯಲ್ಲಿ ನಡೆಯಿತು .ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು. ಜಿಲ್ಲಾ
ಬಂಟ್ವಾಳದ ತಾಲೂಕಿನ ಜನತೆಗೆ ಉತ್ಕೃಷ್ಟ ವಾದ ಉಚಿತ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಸಂಚಾರಿ ಆರೋಗ್ಯ ಬಸ್ ಆರಂಭಿಸಲಾಗಿದೆ. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಅವರ ಮುತುವರ್ಜಿಯಿಂದ ಸಂಚಾರಿ ಆರೋಗ್ಯ ಬಸ್ ವ್ಯವಸ್ಥೆ ಮಾಡಲಾಗಿದೆ. ಜನರ ಆರೋಗ್ಯದ ಸುರಕ್ಷತೆಯ ಜಾಗೃತಿಯ ಸಲುವಾಗಿ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನ ಮಾಡಲಾಗಿದೆ. ಇನ್ನು ಕಾವಳಮೂಡುರು ಗ್ರಾಮ ಪಂಚಾಯತ್ ನ ಕೆದ್ದಳಿಕೆ ಶಾಲಾ ವಠಾರಕ್ಕೆ ಸಂಚಾರಿ ಆರೋಗ್ಯ ಬಸ್ ಆಗಮಿಸಿತು. ಇದರ ಸದುಪಯೋಗವನ್ನು


















