ಬಂಟ್ವಾಳ: ರೋಟರಿಕ್ಲಬ್ ಬಂಟ್ವಾಳ ಬಿ.ಸಿ.ರೋಡಿಗೆ ಸಮೀಪದ ಗೂಡಿನಬಳಿಯಲ್ಲಿರುವ ಕ್ಲಬ್‌ನ ಕಟ್ಟಡದಲ್ಲಿ ಸುಮಾರು ೮೫ ಲಕ್ಷ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ತಂದಿರುವ ರಕ್ತನಿಧಿ ಸೆಂಟರ್ ಲೋಕಾರ್ಪಣೆ ಗೊಂಡಿತು.ಬಂಟ್ವಾಳ ತಾಲೂಕಿನ ಬಹು ಕಾಲದ ಬೇಡಿಕೆಯೊಂದು ಈಡೇರಿದೆ. ರೋಟರಿ ಜಿಲ್ಲಾ ೩೧೮೧ ರ ಗವರ್ನರ್ ಎಚ್. ಆರ್.ಕೇಶವ ಅವರು ಉದ್ಘಾಟಿಸಿ, ಬಂಟ್ವಾಳ ರೋಟರಿ ಕ್ಲಬ್‌ನ
ಬಂಟ್ವಾಳ: ಕರ್ನಾಟಕದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಹಾಗೂ ರಾಷ್ಡ್ರೀಯ ಹೆದ್ದಾರಿ ತಡೆ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಬಿ.ಸಿ.ರೋಡಿನಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಪ್ರತಿಭಟಮಕಾರರನ್ನು ಉದ್ದೇಶಿಸಿ ಮಾತನಾಡಿ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಹಿಂದಿನ ಸರಕಾರದ ಅವಧಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು. ಈಗ ನಾಲ್ಕನೇ ಸ್ಥಾನಕ್ಕೆ ಹಿಂದೆ ಸರಿದಿದೆ. ಕಾಂಗ್ರೆಸ್ ಸರಕಾರ ಗ್ಯಾರಂಟಿ ನೆಪದಲ್ಲಿ
ಬಂಟ್ವಾಳ: ಸ್ಮಾರ್ಟ್ ಗೈಸ್ ಕೈಕಂಬ, ಅಂಬೇಡ್ಕರ್ ಯುವವೇದಿಕೆ ಬಂಟ್ವಾಳ ಆಶ್ರಯದಲ್ಲಿ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಸಮಾಜಮುಖಿ, ಮಾನವತಾವಾದಿ ದಿ.ರಾಜ ಪಲ್ಲಮಜಲು ಅವರು ನಿಧನ ಹೊಂದಿ 3ನೇ ವರ್ಷದ ಸ್ಮರಣಾರ್ಥ, ನುಡಿನಮನ, ಪ್ರತಿಭಾ ಪುರಸ್ಕಾರ ಮತ್ತು ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಎಸ್.ಜಿ.ಕೆ. ಟ್ರೋಫಿ 2024 ಕಾರ್ಯಕ್ರಮಗಳು ಜೂನ್ 15ರಂದು ಸಂಜೆ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ಈ ವಿಷಯವನ್ನು ಸಂಘಟಕ,
ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರಥಮ ಮಾಸಿಕ ಸಭೆ ಸಂಘದ ನೂತನ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಆಟೋಲೈನ್ಸ್ ಗ್ಯಾರೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ ಅವರು ಮಾತನಾಡಿ ಸದಸ್ಯರ ಸಹಕಾರವಿದ್ದಾಗ ಸಂಘಟನೆ
ಬಂಟ್ವಾಳ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದ್ದು ಮುಂದೆ ನಡೆಯುವ ವಿಧಾನ ಪರಿಷತ್ ಚುನಾವಣೆ ಸರಕಾರದ ಬಗ್ಗೆ ಜನಾಭಿಪ್ರಾಯ ತಿಳಿಸುವ ಚುನಾವಣೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ವ್ಯಾಖ್ಯಾನಿಸಿದರು. ಅವರು ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾಂಗ್ರೆಸ್‍ನ ಚುನಾವಣೆಯ ಮೌಲ್ಯಮಾಪನವನ್ನು ಮಾಡಲಿದ್ದು
ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ ೨೬ ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ ಹುಟ್ಟಿ ಬೆಳೆದ ಇವರು 2005ನೇ ವರ್ಷದಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್
ಕಳೆದ ನಾಲ್ಕು ವರ್ಷದ ಹಿಂದೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿ ಬಹಳ ಸಂಚಲನ ಹುಟ್ಟಿದ್ದ ವಾಸುದೇವ ಭಟ್ ಎಂಬವರ ಮನೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಸರಿ ಸುಮಾರು 12 ಲಕ್ಷಕ್ಕೂ ಹೆಚ್ಚು ಒಡವೆ ಹಾಗೂ ಆಭರಣ ದೋಚಿದ್ದರು. ಇದನ್ನು ಬೆನ್ನಟ್ಟಿದ ಧರ್ಮಸ್ಥಳ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿಗಳು ಮುಂಡಾಜೆ ಗ್ರಾಮ ನಿವಾಸಿಗಳಾದ ನವಾಝ್ (38) ರಿಯಾಝ್ ಹಾಗೂ ಬೆಂಗಳೂರಿನ ಕೃಷ್ಣ ಎಂದು ತಿಳಿದುಬಂದಿದೆ. ಈ ಬಗ್ಗೆ
ಬಂಟ್ವಾಳ: ಬಿ.ವಿ.ಕಾರಂತ್, ಜಿ.ವಿ. ಅಯ್ಯರ್ ಅವರಂತಹ ಶ್ರೇಷ್ಠ ಸಾಧಕರೊಂದಿಗಿನ ಒಡನಾಟ ನನ್ನ ಬದುಕಿಗೆ ಧನ್ಯತೆ ನೀಡಿದೆ ಎಂದು ಅಂತರಾಷ್ಟೀಯ ಜಾದೂಗಾರ್ ಪ್ರೊ. ಶಂಕರ್ ಹೇಳಿದರು. ಅವರು ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಮಂಚಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರುಇದರ ಸಹಯೋಗದಲ್ಲಿ ಕುಕ್ಕಾಜೆಯ ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಂಚಿ ಬಿ.ವಿ.ಕಾರಂತ ನೆನೆಪಿನ ಮಂಚಿ ನಾಟಕೋತ್ಸವವನ್ನು ಉದ್ಘಾಟಿಸಿ ಬಳಿಕ
ಬಂಟ್ವಾಳ: ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ ಯುವಕನ ಕುರಿತು ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.ಹಂಚಿಕಟ್ಟೆಯ ನೋಣಯ್ಯ ನಾಯ್ಕ ಅವರ ಮನೆಯ ಅಂಗಳದಲ್ಲಿ ಬಾವಿಯೊಂದಿದ್ದು, ಅದಕ್ಕೆ ಕಸ ಬೀಳದಂತೆ ಹಸಿರು ಬಣ್ಣದ ನರ್ಸರಿ ಕಟ್ಟಿದ್ದರು. ಮೇ 14ರಂದು ಸಂಜೆ 6ರ ಸುಮಾರಿಗೆ ಅವರ ಪುತ್ರ ಅಭಿಷೇಕ್ (3) ಮನೆಯ ಅಂಗಳದಲ್ಲಿ ಆಟ ಆಡುತ್ತಿದ್ದನು. ತಾಯಿ
ಪುತ್ತೂರು : ವೈದ್ಯರ ಎಡವಟ್ಟಿಗೆ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ರಾತ್ರೋರಾತ್ರಿ ರೋಗಿಯ ಸಂಬಂಧಿಕರು ಮತ್ತು ಸಾರ್ವಜನಿಕರು ಆಸ್ಪತ್ರೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ ಎಂಬವರು ಜ್ವರದ ಕಾರಣ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಪರೀಕ್ಷಿಸಿದ ವೈದ್ಯರು ನಾಲಿಗೆಯ ಕೆಳ ಭಾಗದಲ್ಲಿ ಗೆಡ್ಡೆಯ ಬಗ್ಗೆ ಸೂಚನೆ ನೀಡಿದ್ದರು. ಬಳಿಕ ಗೆಡ್ಡೆಯನ್ನ