Home Posts tagged #basavaraj bommai

ತಾತ್ಕಾಲಿಕವಾಗಿ 500 ಕೋಟಿ ರೂ. ತಕ್ಷಣ ಬಿಡುಗಡೆ : ಉಡುಪಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಇತ್ತೀಚೆಗೆ ರಾಜ್ಯಾದ್ಯಂತ ಸುರಿದ ಭಾರೀ ಮಳೆಗೆ ಹಾಳಾಗಿರುವ ಮೂಲಭೂತ ಸೌಕರ್ಯಗಳನ್ನು ಮರು ಸ್ಥಾಪಿಸಲು ತಾತ್ಕಾಲಿಕವಾಗಿ 500 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿಯ ಬಗ್ಗೆ ಮಣಿಪಾಲದ ಜಿ.ಪಂ ಸಭಾಂಗಣದಲ್ಲಿ ಇಂದು ನಡೆಸಿದ ಸಮಗ್ರ ಸಮೀಕ್ಷಾ ಸಭೆಯ ಬಳಿಕ

ಬಂಟ್ವಾಳದ ಪಂಜಿಕಲ್ಲು ಮುಕ್ಕುಡಲ್ಲಿ ಗುಡ್ಡ ಕುಸಿತ ಪ್ರಕರಣ : ಪರಿಹಾರದ ಚೆಕ್ ವಿತರಣೆ

ಬಂಟ್ವಾಳ: ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಇತ್ತೀಚೆಗೆ ಗುಡ್ಡ ಜರಿದು ಮಣ್ಣಿನಡಿ ಸಿಲುಕಿ ಮೃತಪಟ್ಟ ಕೇರಳದ ಮೂವರು ರಬ್ಬರ್ ಟ್ಯಾಪಿಂಗ್ ಕಾರ್ಮಿಕರಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷದಂತೆ ಪರಿಹಾರದ ಚೆಕ್‍ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಂಟ್ವಾಳದ ನಿರೀಕ್ಷಣಾ ಮಂದಿರದಲ್ಲಿ ವಿತರಿಸಿದರು. ಭೂ ಕುಸಿತದಲ್ಲಿ ಮೃತಪಟ್ಟ ಬಿಜು ಪಾಲಕ್ಕಡ್, ಸಂತೋಷ್ ಆಲಪುರ, ಬಾಬು ಕೊಟ್ಟಾಯಂ ಅವರ ಕುಟುಂಬ ಸದಸ್ಯರು ಕೇರಳದಿಂದ ಆಗಮಿಸಿದ್ದು ಪರಿಹಾರ

ಕಡಲ್ಕೊರೆತ ಶಾಶ್ವತ ತಡೆಗೆ ಸೀವಿಯರ್ ಬ್ರೇಕರ್ ಟೆಕ್ನಾಲಜಿ ಅಳವಡಿಕೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ಉಳ್ಳಾಲ: ಕಡಲ್ಕೊರೆತ ಶಾಶ್ವತ ತಡೆಗಾಗಿ ಸೀವಿಯರ್ ಬ್ರೇಕರ್ ಟೆಕ್ನಾಲಜಿ ಅಳವಡಿಸುವ ಯೋಜನೆ ರೂಪಿಸಲಾಗಿದೆ. ಉಳ್ಳಾಲದ ಬಟ್ಟಪ್ಪಾಡಿಯಲ್ಲಿ ಹೊಸ ವಿಧಾನದ ಶಾಶ್ವತ ತಡೆಯನ್ನು ನಿರ್ಮಿಸಲು ಅನುಮತಿಯನ್ನು ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಅವರು ಕಡಲ್ಕೊರೆತಕ್ಕೀಡಾದ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಉಚ್ಚಿಲ ಬಟ್ಟಪ್ಪಾಡಿ ಪ್ರದೇಶಕ್ಕೆ ಭೇಟಿ ನೀಡಿ ಮಾಧ್ಯಮದ ಜತೆಗೆ ಮಾತನಾಡಿದರು.ಕಳೆದ ಬಾರಿ 800 ಮೀ ದೂರ ಕಡಲ್ಕೊರೆತ ಸಂಭವಿಸಿದ್ದರೆ ಈ

ಕೇರಳ ಗಡಿ ನಿರ್ಬಂಧ ತೆರವಿಗೆ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್ 19 ಹಿನ್ನೆಲೆಯಲ್ಲಿ ಕೇರಳ ಗಡಿ ನಿರ್ಬಂಧ ತೆರವಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ದ.ಕ. ಮತ್ತು ಉಡುಪಿ ಜಿಲ್ಲೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಜಿಲ್ಲೆಯಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಪ್ರತಿಕ್ರಿಯೆ

ಕರಾವಳಿಯ ಯಾವುದೇ ಧಾರ್ಮಿಕ ಕ್ಷೇತ್ರಗಳಿಗೆ ಹಾನಿಯಾಗುವುದಿಲ್ಲ : ಶಾಸಕ ವೇದವ್ಯಾಸ್ ಕಾಮತ್

ಧಾರ್ಮಿಕ ಕೇಂದ್ರಗಳ‌ನ್ನು ತೆರವುಗೊಳಿಸುವ ಕುರಿತು ಉಂಟಾಗಿರುವ ಗೊಂದಲಗಳ‌ ಬಗ್ಗೆ ಮುಖ್ಯಮಂತ್ರಿ ಶ್ರೀ ಬಸವರಾಜು ಬೊಮ್ಮಾಯಿ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ. ಕರಾವಳಿ ಭಾಗದಲ್ಲಿರುವ ದೇವಸ್ಥಾನ, ದೈವಸ್ಥಾನಗಳು ಪೌರಾಣಿಕ ಹಿನ್ನೆಲೆಗಳಿರುವ ಮತ್ತು ಅತ್ಯಂತ ಪುರಾತನವಾಗಿರುವುದೇ ಆಗಿದೆ. ಹಾಗಾಗಿ ಯಾವುದೇ ಧಾರ್ಮಿಕ ಕೇಂದ್ರಗಳಿಗೂ ಇಲ್ಲಿ ಹಾನಿಯಾಗುವುದಿಲ್ಲ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್ ಭರವಸೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿಯು

ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆಗೆ  ಸಿಎಂಗೆ ಆಹ್ವಾನ

ಬೆಂಗಳೂರು: ಮುಂದಿನ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ಉದ್ಘಾಟನೆಗೆ ನೆರವೇರಿಸಲು ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಯಿತು. ವಿಧಾನಸೌಧದಲ್ಲಿಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ನೇತೃತ್ವ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಉಸ್ತುವಾರಿ ಯಲ್ಲಿ ಮುಖ್ಯಮಂತ್ರಿ ಯವರಿಗೆ ಮನವಿ ಸಲ್ಲಿಸಿ ಸಮ್ಮೇಳನ

ಕೇರಳದಲ್ಲಿ ನಿಫಾ ವೈರಸ್ ಹಾವಳಿ – ರಾಜ್ಯದಲ್ಲೂ ಬಿಗಿ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವುದರಿಂದ ರಾಜ್ಯದಲ್ಲೂ ಬಿಗಿ ಕ್ರಮ ಕೈಗೊಳ್ಳಲಾಗವುದು. ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕೇರಳ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ಕೆಲವು ನಿರ್ಬಂಧಗಳನ್ನು ಹೇರಲಾಗಿದ್ದು, ಅದನ್ನು ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಹೇಳಿದರು. ನಿಫಾ

ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭ ವಿಚಾರ : ಸಿಎಂ ಬಸವರಾಜ್ ಬೊಮ್ಮಾಯಿ

ಮಂಗಳೂರು: ಕರಾವಳಿಯಲ್ಲಿ ಉಗ್ರರ ನಂಟಿನ ಬಗ್ಗೆ ಎನ್‍ಐಎ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ ಬಳಿಕ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸಲು ಆಗ್ರಹ ಕೇಳಿ ಬಂದಿತ್ತು. ಇದೀಗ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸುವ ಕುರಿತಂತೆ ಸಭೆಗಳು ನಡೆದಿವೆ ಎಂದು ಎನ್‍ಐಎ ಕಚೇರಿ ಆರಂಭಿಸುವ ಸಾಧ್ಯತೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಈಗಾಗಲೇ ಒಬ್ಬ ದಕ್ಷ ಗೃಹ ಸಚಿವರನ್ನು ಮಾಡಲಾಗಿದೆ. ಎನ್‍ಐಎ ಕುರಿತಂತೆ ಅವರು

ತಲಪಾಡಿ ಗಡಿಯಲ್ಲಿ ಮುಂದುವರಿದ ಪ್ರತಿಭಟನೆ: ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ರದ್ದು

ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಿದ ಕರ್ನಾಟಕ ಸರ್ಕಾರದ ಆದೇಶದ ವಿರುದ್ಧ ತಲಪಾಡಿ ಗಡಿಯಲ್ಲಿ ಪ್ರತಿಭಟನೆಗಳು ಮುಂದುವರಿದಿದ್ದು ಇಂದು ಕೂಡ ಮಂಜೇಶ್ವರ ಪಂಚಾಯತ್ ಯುಡಿವೈಎಫ್ ಈ ಸಮಿತಿಯ ನೇತೃತ್ವದಲ್ಲಿ ಕಪ್ಪು ಮಾಸ್ಕ್ ಧರಿಸಿ ಪ್ರತಿಭಟನೆ ನಡೆಯಿತು. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತಲಪಾಡಿ ಗಡಿ ಪ್ರದೇಶಕ್ಕೆ ಭೇಟಿ ನೀಡುವ ಮಾಹಿತಿಯಂತೆ ಕೇರಳ ಭಾಗದಲ್ಲಿ ಪ್ರತಿಭಟನೆ ಸಜ್ಜುಗೊಂಡಿತ್ತು.

ತರಾತುರಿಯಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಉದ್ಘಾಟನೆ : ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ

ತರಾತುರಿಯಲ್ಲಿ ಜಿಲ್ಲಾ ಅಂಬೇಡ್ಕರ್ ಭವನ ಉದ್ಘಾಟನೆ ಹಾಗೂ ದಲಿತ ಸಂಘಟನಾ ಮುಖಂಡರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ನಡೆಸಿದ್ರು. ಇಂದು ಮಂಗಳೂರಿನ ಉರ್ವಸ್ಟೋರ್‍ನಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಉದ್ಘಾಟನೆಯನ್ನ ಸಿಎಂ ಬೊಮ್ಮಾಯಿ ಅವರು ನೆರವೇರಿಸಿದರು. ಅದ್ರೆ ಹೋರಾಟ ಮಾಡಿದರನ್ನ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿಲ್ಲ, ಜೊತೆಗೆ ಅವರನ್ನ ಗುರುತಿಸುವ ಕೆಲಸವನ್ನ ಕೂಡ ಅಧಿಕಾರಿಗಳು