ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಇಂದು ನಾಮಪತ್ರ ಸಲ್ಲಿಸಿದರು.ಬಿ.ಸಿ.ರೋಡಿನ ವಿಧಾನಸೌಧದ ಚುನಾವಣಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿದ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 9:30ಕ್ಕೆ ಬಂಟ್ವಾಳ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
ಮೂಡುಬಿದಿರೆ-ವೇಣೂರು, ಮೂಡುಬಿದಿರೆ-ಬಿಸಿರೋಡನ್ನು ಸಂಧಿಸುವ ಮೆಸ್ಕಾಂ ಬಳಿ ರಾಜ್ಯ ಹೆದ್ದಾರಿಯಲ್ಲಿ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ವೃತ್ತ ಅವೈಜ್ಞಾನಿಕ ರೀತಿಯಲ್ಲಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿ ಸರ್ಕಲ್ ತೆರವುಗೊಳಿಸುವಂತೆ ಆಗ್ರಹಿಸಿದೆ. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಶಾಸಕರ ನಿಧಿಯಿಂದ ರೂ 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ವೃತ್ತ ಅವೈಜ್ಞಾನಿಕ ರೀತಿಯಲ್ಲಿದೆ.
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಸದಸ್ಯ ಪ್ರವೀಣ್ ನೆಟ್ಟಾರ್‍ಅವರ ಕೊಲೆಗೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಬಿ.ಸಿ.ರೋಡ್ ಸುತ್ತಮುತ್ತ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಿದಂತೆ ಹೆಚ್ಚಿನ ಅಂಗಡಿ ಮುಂಗಟ್ಟುಗಳು ಬುಧವಾರ ಬಂದ್ ಆದವು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪ್ಪಾಡಿ, ನಿರಂತರವಾಗಿ
ಬಂಟ್ವಾಳ: ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಹೋಂ ಐಸೋಲೆಶನ್‌ಗಿಂತ ಕೋವಿಡ್ ಕೇರ್ ಸೆಂಟರ್‌ಗೆ ಹೆಚ್ಚಿನ ಮಹತ್ವ ನೀಡಬೇಕು. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಕಲ್ಪಿಸಿರುವ ವ್ಯವಸ್ಥೆಗಳ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸಿ, ವಿಶ್ವಾಸ ತುಂಬುವ ಕೆಲಸ ಮಾಡಬೇಕು. ಇದರಿಂದಾಗಿ ವೈರಾಣು ಹರಡುವುದನ್ನು ತಪ್ಪಿಸುವುದರ ಜೊತೆಗೆ ರೋಗ ನಿಯಂತ್ರಣವೂ ಸಾಧ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ತಿಳಿಸಿದರು. ಬಿ.ಸಿ.ರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ
ಬಂಟ್ವಾಳ: ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಾರ್ಮಿಕರಿಗೆ ನೀಡಲಾಗುವ ಆಹಾರದ ಕಿಟ್‌ಪಡೆಯಲು ಬಿ.ಸಿ.ರೋಡಿಗೆ ಆಗಮಿಸಿದ್ದ ಕಾರ್ಮಿಕರು ಕಿಟ್ ಸಿಗದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ನಡೆದಿದೆ. ಸ್ಟಾಕ್ ಲಭ್ಯವಿಲ್ಲದ ಕಾರಣ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಕಾರ್ಮಿಕರು ವಾಪಸ್ಸಾಗಬೇಕಾಯಿತು. ಕಳೆದ ಕೆಲ ದಿನಗಳಿಂದ ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿತ ಕಾರ್ಮಿಕರಿಗೆ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆಹಾರದ