ಬಂಟ್ವಾಳ: ಬಿ.ಸಿ.ರೋಡಿನ ಸಿವಿಲ್ ನ್ಯಾಯಾಲಯದ ಬಳಿ ತಾಲೂಕು ಕಚೇರಿ ಎನ್ನುವ ಕಟ್ಟಡವೊಂದಿದೆ. ಯಾರಾದರೂ ಸಾರ್ವಜನಿಕರು ಇದೇ ತಾಲೂಕು ಕಚೇರಿ ಎಂದು ಈ ಕಟ್ಟಡದ ಸುತ್ತ ಸುತ್ತುತ್ತಿದ್ದರೆ ದಿನವಿಡಿ ಸುತ್ತುತಲೇ ಇರಬೇಕಾಗುತ್ತದೆ. ತಾಲೂಕು ಕಚೇರಿ ಇಲ್ಲಿಂದ ಸ್ಥಳಾಂತರಗೊಂಡರೂ ಹಳೆ ಕಟ್ಟಡ ಇನ್ನೂ ಅದೇ ಹೆಸರಿನಲ್ಲಿ ಉಳಿದಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ
ಬಂಟ್ವಾಳ: ಬಿ.ಸಿ.ರೋಡಿನ ಉಪನೋಂದಾವಣೆ ಕಚೇರಿ ತಾಲೂಕು ಆಡಳಿತ ಸೌಧಕ್ಕೆ ಸ್ಥಳಾಂತರಗೊಂಡ ಬಳಿಕ ನ್ಯಾಯಾಲಯ ರಸ್ತೆಯಲ್ಲಿರುವ ಹಳೆ ಕಟ್ಟಡ ನಿರ್ವಹಣೆಯ ಕೊರತೆಯಿಂದ ಪಾಳು ಬಿದ್ದಂತಿದೆ. ಕಟ್ಟಡದ ಸುತ್ತ ಪೆÇದೆಗಳು ಬೆಳೆದು ವಿಷ ಜಂತುಗಳ ಆವಸ ಸ್ಥಾನವಾಗಿದೆ. ಸಾರ್ವಜನಿಕರಿಗೆ, ಭಿಕ್ಷಕರಿಗೆ ಉಚಿತವಾಗಿ ಮಲಮೂತ್ರ ವಿಸರ್ಜನೆ ಮಾಡುವ ಸ್ಥಳವಾಗಿ ಮಾರ್ಪಟ್ಟಿದ್ದು, ನಗರ ಮಧ್ಯೆ ರೋಗವಾಹಕಗಳು ಸಂತಾನಾಭಿವೃದ್ದಿ ಮಾಡುವ ಸ್ಥಳವಾಗಿ ಪರಿವರ್ತನೆಗೊಂಡಿದೆ.
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋವೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ಬಿ.ಸಿ.ರೋಡಿನ ತಲಪಾಡಿ ಬಳಿ ನಡೆದಿದೆ. ಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಚಾಲಕನಿಗೆ ತರಚಿದ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ಟ್ರಾಫಿಕ್ ಜಾಂ ಸಮಸ್ಯೆ ಉಂಟಾಗಿತ್ತು.
ಕಾರೊಂದು ಆಟೋ ರಿಕ್ಷಾಕ್ಕೆ ಢಿಕ್ಕಿಯಾದ ಘಟನೆ ಬಿ.ಸಿ ರೋಡ್‍ನ ರೈಲು ನಿಲ್ದಾಣದ ಬಳಿ ನಡೆದಿದೆ. ಅಪಘಾತದ ಪರಿಣಾಮ ರಿಕ್ಷಾ ನಜ್ಜುಗುಜ್ಜಾಗಿದ್ದು, ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅವನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ: 26.18 ಕೋಟಿ ರೂ ಅನುದಾನದ ಮೂಲಕ ಸುಸಜ್ಜಿತವಾದ ರೈಲ್ವೆ ನಿಲ್ದಾಣವಾಗಿ ಮಾರ್ಪಾಡು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಅನುದಾನ ಬಿಡುಗಡೆಯಾಗಿದ್ದು,ಶೀಘ್ರವಾಗಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಂಗಳೂರು ಸಂಸದ ,ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ತಿಳಿಸಿದರು. ಅವರು ಬಿಸಿರೋಡಿನ ರೈಲ್ವೆ ನಿಲ್ದಾಣಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ದವರ ಜೊತೆ ಮಾತನಾಡಿ ಈ ವಿಚಾರವನ್ನು ತಿಳಿಸಿದರು. ನಮ್ಮ ಬೇಡಿಕೆಯಂತೆ ಜಿಲ್ಲೆಯ ಮೂರು ರೈಲ್ವೆ
ಬಂಟ್ವಾಳ: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿರುವ ಪುರಸಭೆಯ ವಾಣಿಜ್ಯ ಸಂಕೀರ್ಣದ ಮುಂಭಾಗ ಖಾಸಗಿ ಬಸ್ಸುಗಳು ತಂಗುತ್ತವೆ. ಪ್ರಯಾಣಿಕರು ವಾಣಿಜ್ಯ ಕೇಂದ್ರದ ಅಂಗಡಿಗಳ ಮುಂಭಾಗದ ಪ್ಯಾಸೇಜ್ ನಲ್ಲಿ ನಿಲ್ಲುತ್ತಾರೆ. ಖಾಲಿ ಬಿಟ್ಟ ಕೋಣೆಯಲ್ಲಿ ಸೊಳ್ಳೆಗಳ ಸಾಮ್ರಾಜ್ಯ. ಅದು ಒಂದು ಭಾಗವಾದರೆ, ಇನ್ನೊಂದು ಸಮಸ್ಯೆ ಈ ಸಂಕೀರ್ಣದ ಹಿಂದೆ ಮತ್ತೊಂದು ವಾಣಿಜ್ಯ ಸಂಕೀರ್ಣವಿದೆ. ಇವೆರಡರ ಮಧ್ಯೆ ರಸ್ತೆಯೂ ಇದೆ. ಇಲ್ಲಿನ ಮಳಿಗೆಗಳಿಗೆ ನೂರಾರು ಮಂದಿ ನಿತ್ಯ ಓಡಾಡುತ್ತಾರೆ. ಆದರೆ
ಬಂಟ್ವಾಳ: ಕಳೆದ ಮೂರು ತಿಂಗಳ ಹಿಂದೆ ಬಂಟ್ವಾಳ ತಾಲೂಕಿನ ಜನ ಮನ ಗೆದ್ದ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯಿಂದ ವಸ್ತ್ರಗಳ ಮಾರಾಟ ಮೇಳ ನವೆಂಬರ್ 10, ಗುರುವಾರದಿಂದ ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸಭಾಂಗಣದಲ್ಲಿ ಪುನಾರಂಭಗೊಳ್ಳಲಿದೆ. ಗ್ರಾಹಕರ ಬೇಡಿಕೆಗೆ ಸ್ಪಂದಿಸಿ ಮತ್ತೆ ಒಂದು ತಿಂಗಳ ಕಾಲ ಎಲ್ಲಾ ವಯೋಮಾನದ ಜನರ ಮನಕೊಪ್ಪುವ ಬಟ್ಟೆಗಳ ಮಾರಾಟ ಇಲ್ಲಿ ನಡೆಯಲಿದೆ. ಗ್ರಾಹಕರು ಖರೀದಿಸುವ ಪ್ರತಿಯೊಂದು ಬಟ್ಟೆಯ ಬೆಲೆ ಕೇವಲ 199 ಆಗಿದ್ದು ಅತ್ಯಂತ ಉತ್ತಮ
ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆಯೋಜನೆ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯ ವತಿಯಿಂದ ವೈವಿಧ್ಯಮಯ ಹಾಗೂ ಆಕರ್ಷಕ ಶೈಲಿಯ ವಸ್ತ್ರಗಳ ಮಾರಾಟ ಮೇಳ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆರಂಭಗೊಂಡಿದ್ದು ಮೊದಲ ದಿನವೇ ಅಪಾರ ಸಂಖ್ಯೆಯಲ್ಲಿ ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಬಿ.ಸಿ.ರೋಡು ಪರಿಸರದಲ್ಲಿ ಇದೇ ಪ್ರಥಮ ಬಾರಿಗೆ ಬೃಹತ್ ಬಟ್ಟೆಗಳ ಮಾರಾಟ ಮೇಳ ಆರಂಭಗೊಂಡಿದ್ದು ಗ್ರಾಹಕರು ಖರೀದಿಸುವ ಪ್ರತಿಯೊಂದು ಬಟ್ಟೆಯ ಬೆಲೆ ಕೇವಲ 199
ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ಹಾಗೂ ರೈತ ರೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಸೋಮವಾರ ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಲ್ಲಿ ವಿವಿಧ ಸಂಘಟನೆಗಳ ಬೃಹತ್ ಮೆರವಣಿಗೆ ಹಾಗೂ ರಸ್ತೆ ತಡೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ರೈತ , ದಲಿತ , ಕಾರ್ಮಿಕ , ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಭಾರತ್ ಬಂದ್ ಗೆ ಬೆಂಬಲಿಸಿ ಈ ರ್‍ಯಾಲಿ ಹಾಗೂ ರಸ್ತೆ ತಡೆ ನಡೆಸಲಾಯಿತು. ಪ್ರತಿಭಟನಾ ಸಮಾವೇಶಯಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಕರ್ನಾಟಕ […]
ಬಂಟ್ವಾಳ: ಶುಕ್ರವಾರ ರಾತ್ರಿಯಿಂದಲೇ ಸುರಿದ ಭಾರೀ ಮಳೆಗೆ ಬಿ.ಸಿ.ರೋಡು ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕೆಳಗಿನ ವಗ್ಗ ಬಳಿಯ ಆಲಂಪುರಿ ಎಂಬಲ್ಲಿ ರಸ್ತೆ ಬದಿಯ ಗುಡ್ಡ ಕುಸಿದು ಸ್ಟ್ಯಾನಿ ಲೋಬೋ ಎಂಬವರಿಗೆ ಸೇರಿದ ತೋಟದ ೫೦ಕ್ಕೂ ಅಧಿಕ ಅಡಿಕೆ ಮರಗಳು ಧರಶಾಹಿಯಾಗಿದೆ. ಬಿ.ಸಿ. ರೋಡು ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ವೇಳೆ ಅವೈಜ್ಞಾನಿಕವಾಗಿ ರಸ್ತೆ ಬದಿಯ ಗುಡ್ಡವನ್ನು ಅಗೆದಿರುವ ಪರಿಣಾಮ ಗುಡ್ಡ ಕುಸಿಯಲು ಕಾರಣ ಎಂದು ಆರೋಪಿಸಲಾಗಿದೆ.