ಕೊಕ್ಕಡ: ಕೊಕ್ಕಡ ಮತ್ತು ಗೋಳಿತೊಟ್ಟು ಗ್ರಾಮದ 500ಕ್ಕೂ ಹೆಚ್ಚು ಮನೆಗಳ ನಿವಾಸಿಗಳ 40 ವರ್ಷಗಳ ಬೇಡಿಕೆಯ ರೂಪದಲ್ಲಿ ರೂ.3.35 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೋಡಂಗೇರಿ – ಉಪ್ಪಾರಹಳ್ಳ ಸೇತುವೆ ಹಾಗೂ ಕಿಂಡಿ ಅಣೆಕಟ್ಟನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮಾ.8ರಂದು ಲೋಕಾರ್ಪಣೆ ಮಾಡಿದರು. ಈ ಸೇತುವೆ ಮತ್ತು ಅಣೆಕಟ್ಟಿನ ನಿರ್ಮಾಣದಿಂದ ರೈತರಿಗೆ
ಎಂಡೋಸಲ್ಫಾನ್ ಸಂತ್ರಸ್ತರ ಪುನರ್‌ವಸತಿ ಮತ್ತು ಭವಿಷ್ಯದ ಅನುಕೂಲಕ್ಕಾಗಿ ಎಂಆರ್‌ಪಿಎಲ್ (MRPL) ನಿಂದ 83 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡದ ಭೂಮಿ ಪೂಜೆ ಮಾ.8 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ನೆರವೇರಿಸಿದರು. ಕೊಕ್ಕಡ ಗ್ರಾಮ ಪಂಚಾಯತಿ ಸಮೀಪ ಈ ಪುನರ್‌ವಸತಿ ಕೇಂದ್ರ ನಿರ್ಮಾಣವಾಗಲಿದ್ದು, ಎಂಡೋ ಸಂತ್ರಸ್ತರ ಆರೋಗ್ಯದ ಕಲ್ಯಾಣಕ್ಕಾಗಿ ಈ ಯೋಜನೆ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಅವರು ಮಾತನಾಡಿ,
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.23 ರಂದು ಮಧ್ಯಾಹ್ನ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ , ಪತ್ನಿ ಗೀತಾ ಖಂಡ್ರೆ ,ಮಗ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ SC ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.ಈಶ್ವರ್ ಖಂಡ್ರೆ ಮತ್ತು ಮಗ ಸಾಗರ್ ಖಂಡ್ರೆ
ಬೆಳ್ತಂಗಡಿ ತಾಲೂಕಿನಲ್ಲಿ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.ತಾಲೂಕಿನ ನೆರಿಯ ಗ್ರಾಮದ ಮುನ್ನೂರು ಎಕ್ರೆ ಎಂಬಲ್ಲಿ ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಈಜು ಬಾರದೆಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಬಂದಿದೆ ಇವರು ಮೂಲತಃ ಮೂಡಿಗೆರೆ ನಿವಾಸಿಯಾಗಿದ್ದು ಮದುವೆಯಾಗಿ ನೆರಿಯದಲ್ಲಿ ಹಲವಾರು ವರ್ಷದಿಂದ ವಾಸವಾಗಿದ್ದಾರೆ. ಈ ಬಗ್ಗೆ ಮೃತರ ಮನೆಯವರು ದೂರು ನೀಡಿದ್ದು .ಧರ್ಮಸ್ಥಳದ ಪೊಲೀಸರು
ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಾಲೂಕು ಕಚೇರಿ ಅಧಿಕಾರಿಗಳು ಕಡತ ವಿಲೇವಾರಿ ಮಾಡಲು ಜನರನ್ನು ಸತಾಯಿಸುತ್ತಿದ್ದರು. ಆದ್ದರಿಂದ ಶಾಸಕರು ಕಚೇರಿ ದಿಢೀರ್ ಅಂತಾ ಭೇಟಿ ನೀಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ತಾಲೂಕು ಕಚೇರಿಗೆ ಆಗಮಿಸಿದ ಶಾಸಕ ಹರೀಶ್ ಪೂಂಜಾ, ಜನರ ಸಮಸ್ಯೆ ಆಲಿಸಿದ ಬಳಿಕ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೇರಿದಂತೆ ಇತರೆ ಅಧಿಕಾರಿಗಳನ್ನ ತರಾಟೆಗೆ
ಲೋಕ ಸಭೆಯಲ್ಲಿ ರಾಹುಲ್ ಗಾಂಧಿ ಏನು ಮಾತಾಡಬೇಕು ಅದನ್ನು ಮಾತನಾಡದೆ ಸಮಸ್ತ ಹಿಂದೂ ಸಮಾಜವನ್ನು ಅಪಮಾನ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ಬಗ್ಗೆ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ ಹಾಲಿನ ದರ ಏರಿಕೆಯಾಗಿದ್ದು, ಬಡವರ ಮಕ್ಕಳ ಹೊಟ್ಟೆಗೆ ಹೊಡೆದಿದ್ದಾರೆ, ಇಡೀ ಕಾಂಗ್ರೆಸ್ ಪಕ್ಷದ ಶಾಸಕರು ಕಮಿಷನ್