Home Posts tagged #belthangadi

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ಮನವಿ ಸಲ್ಲಿಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ, ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ರವರು ಮಾಹಿತಿಯನ್ನು ನೀಡಿದರು. ಜಿಲ್ಲೆಯ ಜನತೆ

ಬೈಂದೂರು: ಸರ್ಕಾರದ ಧಮನಕಾರಿ‌ ನೀತಿ ಖಂಡನೀಯ – ಡಾ. ಅತುಲ್ ಕುಮಾರ್ ಶೆಟ್ಟಿ

ಬೈಂದೂರು: ಕಸ್ತೂರಿ ರಂಗನ್ ವರದಿ‌ ಜಾರಿ ವಿರೋಧಿಸಿ ಮಲೆನಾಡು ಜನ ಹಿತರಕ್ಷಣ ವೇದಿಕೆ ದ.ಕ. ವತಿಯಿಂದ ಗುಂಡ್ಯ ಶಿರಾಡಿ ಬಳಿ‌ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿರುದ್ಧ ರಾಜ್ಯ ಸರ್ಕಾರ ಎಫ್ ಐ ಆರ್ ದಾಖಲಿಸಿರುವುದು ಖಂಡನೀಯ. ಪ್ರತಿಭಟಿಸುವ ಹಕ್ಕು ಎಲ್ಲರಿಗೂ ನಮ್ಮ ಸಂವಿಧಾನ ನೀಡಿದೆ. ಸರ್ಕಾರದ ಧೋರಣಿ ಖಂಡಿಸಿ ಪ್ರತಿಭಟಿಸುವವರ ವಿರುದ್ಧ ಸರ್ಕಾರ ಧಮನಕಾರಿ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಮಲೆನಾಡು ಜನ

ಉಳ್ಳಾಲ:ಮನೆಯ ಗಾಡ್ರೆಜ್‌ನೊಳಗಿದ್ದ ಚಿನ್ನಾಭರಣ ಕಳವು ಪ್ರಕರಣ-ಇಬ್ಬರು ಅಪ್ರಾಪ್ತರು ಸೇರಿದಂತೆ ಐವರ ಬಂಧನ

ಮಂಗಳೂರು: ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ಮನೆಯೊಂದರ ಗಾಡ್ರೆಜ್‌ನೊಳಗಿದ್ದ 15 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಬಾಲಕರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿಗಳಾದ ಶ್ರೇಯಸ್, ತೌಸೀಫ್ ಹಾಗೂ ಉರ್ವ ನಿವಾಸಿ ಪೃಥ್ವಿರಾಜ್ ಬಂಧಿತ ಮೂವರು ಆರೋಪಿಗಳು. ಧರ್ಮನಗರ ನಿವಾಸಿ ಶ್ರೀಧರ್ ಎಂಬವರ ಮನೆಯಲ್ಲಿ ಜೂನ್ 8ರ ಬೆಳಗ್ಗೆ 8ರಿಂದ ಜೂ.16ರ ಮಧ್ಯಾಹ್ನ 12ರ ನಡುವೆ ನಡುವೆ 15

ಶಿಬಾಜೆ, ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್‌ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ÷್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬAಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿ÷್ಸಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು

ಬೆಳ್ತಂಗಡಿ: ಕೆ. ವಸಂತ ಬಂಗೇರರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಂತಾಪ

ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ.ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ, ಶಿಕ್ಷಣ ಪ್ರೇಮಿ, ದೂರದೃಷ್ಟಿಯ ರಾಜಕಾರಣಿಯಾಗಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು

ಬೆಳ್ತಂಗಡಿ: ಕೆ. ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ಸಂತಾಪ

ಬೆಳ್ತಂಗಡಿ: ಹಿರಿಯ ರಾಜಕಾರಣಿ ಮಾಜಿ ಶಾಸಕ ಶ್ರೀ ಕೆ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಪ್ರಮುಖ ಮೂರು ರಾಜಕೀಯ ಪಕ್ಷಗಳಡಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ ವಸಂತ ಬಂಗೇರರಾಗಿದ್ದು, ಪಕ್ಷಾತೀತವಾಗಿ ಜನತೆ ಅವರನ್ನು ಬೆಂಬಲಿಸಿದುದರ ನಿದರ್ಶನವಾಗಿದೆ. ಪ್ರಜಾಪ್ರಭುತ್ವಕ್ಕೆ ಕರಾಳವಾಗಿ ಜಾರಿಯಾಗಿದ್ದ ತುರ್ತುಪರಿಸ್ಥಿತಿ ವಿರುದ್ಧ ವಸಂತ ಬಂಗೇರರ ಹೋರಾಟ,

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ

ನೆಲ್ಯಾಡಿ: 7.30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟೀಕರಣ ರಸ್ತೆ ಉದ್ಘಾಟನೆ

ನೆಲ್ಯಾಡಿ: 7.30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟೀಕರಣ ರಸ್ತೆ ಉದ್ಘಾಟನೆ. ನೆಲ್ಯಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2ನೇ ವಾರ್ಡಿನ ಕೊಟೇಲು, ದರ್ಖಾಸು ಎಂಬಲ್ಲಿ 7.30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟೀಕರಣ ರಸ್ತೆ ಉದ್ಘಾಟನೆ ಮಾ.04 ರಂದು ನೆರವೇರಿತು.ನೆಲ್ಯಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಸಲಾಂ ಬಿಲಾಲ್, ಉಪಾಧ್ಯಕ್ಷೆ ಶ್ರೀಮತಿ ರೇಶ್ಮಾ ಶಶಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.15ನೇ ಹಣಕಾಸು ಯೋಜನೆಯಡಿ ಪಂಚಾಯತ್ ಅನುದಾನ

ಗೋಳಿತಟ್ಟು ಜನಜಾಗೃತಿ ವೇದಿಕೆ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕಡಬ ಇವರಿಂದ ಗೋಳಿತಟ್ಟು ವಲಯ ಜನಜಾಗೃತಿ ವಲಯ ಅಧ್ಯಕ್ಷರಾದ ನೋಣಯ್ಯ ಪೂಜಾರಿ ಅಂಭರ್ಜೆ ರಸ್ತೆ ಅಪಘಾತದಲ್ಲಿ ಕಾಲು ಮುರಿತಕ್ಕೆ ಒಳಗಾಗಿದ್ದು ಇವರಿಗೆ ಜನಜಾಗೃತಿ ವೇದಿಕೆಯಿಂದ ಮಂಜೂರಾದ ಹತ್ತು ಸಾವಿರ ರೂಪಾಯಿಯ ಮಂಜೂರಾತಿ ಪತ್ರವನ್ನು ಕಡಬ ತಾಲ್ಲೂಕು ಜನಜಾಗೃತಿ ಅಧ್ಯಕ್ಷ ಮಹೇಶ್ ಸವಣೂರು ಹತ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ, ಗೋಳಿತಟ್ಟು ವಲಯ

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ-ಮೂವರಿಗೆ ಗಾಯ

ಕೊಕ್ಕಡ:ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ-ಕೊಕ್ಕಡ ರಸ್ತೆಯ ನೆಲ್ಯಾಡಿ ಪುತ್ಯೆ ಸಮೀಪ ಫೆ.9ರಂದು ರಾತ್ರಿ ನಡೆದಿದೆ.ನೆಲ್ಯಾಡಿ ಪಡ್ಡಡ್ಕ ನಿವಾಸಿ ಬೆನ್ನಿ, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪದ ಮುಂಡ್ರೇಲು ನಿವಾಸಿಗಳಾದ ಮಹೇಂದ್ರ ಹಾಗೂ ಮಂಜುನಾಥ ಎಂಬವರು ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ರಿಂಗ್ ವರ್ಕ್ಸ್ ಕೆಲಸ ನಿರ್ವಹಿಸುತ್ತಿರುವ ಪಡ್ಡಡ್ಕ ನಿವಾಸಿ