ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಭಟ್ರಭೈಲು ದೇವರ ಗುಡ್ಡೆಯಲ್ಲಿ ಬಾವಿ ನಿರ್ಮಾಣದ ವೇಳೆ 12ನೇ ಶತಮಾನದ್ದೆನ್ನಲಾದ ಶ್ರೀ ಗೋಪಾಲಕೃಷ್ಣ ದೇವರ ವಿಗ್ರಹ ಹಾಗೂ ಇನ್ನಿತರ ಪರಿಕರಗಳು ಪತ್ತೆಯಾಗಿವೆ. ದೇವಾಲಯವಿತ್ತೆನ್ನಲಾದ ದೇವರಗುಡ್ಡೆ ಪ್ರದೇಶದಲ್ಲಿ ಬೆಳ್ತಂಗಡಿ ಶಾಸಕರ ಮುತುವರ್ಜಿಯಿಂದ ದೇವಾಲಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಈ ಸಂಬಂಧ 5 ದಿನಗಳ
ನೆಲ್ಯಾಡಿ: ಹೃದಯಾಘಾತಕ್ಕೆ ಒಳಗಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ನ.6ರಂದು ಸಂಜೆ ನಡೆದಿದೆ. ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಯೂಸುಫ್ ಎಂಬವರ ಪುತ್ರ ಮಹಮ್ಮದ್ ಇರ್ಪಾನ್(18ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಪುತ್ತೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಎ.ಸಿ.ಮೆಕ್ಯಾನಿಕ್ ವ್ಯಾಸಂಗ ಮಾಡುತ್ತಿದ್ದ ಇರ್ಪಾನ್ ಎಂದಿನಂತೆ ಶಾಲೆಗೆ ಹೋಗಿ ಸಂಜೆ ಮನೆಗೆ ಬಂದಿದ್ದರು. 6 ಗಂಟೆಯ ವೇಳೆಗೆ ಇರ್ಪಾನ್ ದಿಢೀರ್
ಬೆಳ್ತಂಗಡಿಯಲ್ಲಿ ಮಹಿಳೆಯ ಶವ ಬಾವಿಯಲ್ಲಿ ಪತ್ತೆಯಾಗಿದ್ದು ಇದು ಕೊಲೆ ಎಂಬ ಅನುಮಾನ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ಬೆಲಾಲು ಗ್ರಾಮದ ಮಾಚಾರು ಬಳಿಯ ಕೆಂಪನೊಟ್ಟು ಎಂಬಲ್ಲಿ ಈ ಘಟನೆ ನಡೆದಿದ್ದು ಕೊಲೆ ಮಾಡಿ ಬಾವಿಗೆ ಎಸೆದಿದ್ದಾರೆ ಎಂಬ ಅನುಮಾನ ಇದೆ. ಮೃತಪಟ್ಟ ಮಹಿಳೆ ಸುಧಾಕರ ಎಂಬವರ ಪತ್ನಿ 27 ವರ್ಷದ ಶಶಿಕಲಾ ಎಂದು ಗುರುತಿಸಲಾಗಿದೆ. ಮೃತರ ಗಂಡ ಸುಧಾಕರ ರಬ್ಬರ್ ಟಾಪಿಂಗ್ ಮಾಡುತ್ತಿದ್ದು ಗಂಡ ಹೆಂಡತಿ ನಡುವೆ ಗಲಾಟೆ ನಡೆದು ನಂತರ ಕೊಲೆ ಮಾಡಿ ಶಶಿಕಲರನ್ನ
ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜ್ಯೋತಿ ಬೆಳಗಿಸಿ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸಚಿನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷೀಯ ನುಡಿಗಳಲ್ಲಿ ಕನ್ನಡ ಭಾಷೆಯ ಐತಿಹಾಸಿಕ ಹಿನ್ನೆಲೆಯ ಕುರಿತು ಇಂದಿನ ಯುವ ಸಮುದಾಯ ವಿಸ್ಮೃತಿಗೆ ಒಳಗಾಗಬಾರದು ಎಂದರು. ಕನ್ನಡದ ಅಕ್ಷರಗಳ ಪ್ರತಿಯೊಂದು ಧ್ವನಿಯ ವೈಜ್ಞಾನಿಕ
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ಅರಣ್ಯ ವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಹಿಂದೆ 2016ರಲ್ಲಿ ಸಿದ್ದರಾಮಯ್ಯನವರ ಸರ್ಕಾರ ಇರುವಾಗ ಪ್ರಸ್ತಾಪ ಸಲ್ಲಿಸಿದ್ದರು. ನಂತರ ಬಿಜೆಪಿ ಸರ್ಕಾರ ಬಂದ ನಂತರ ಕಾರ್ಯರೂಪಕ್ಕೆ ತಂದಿದ್ದೇವೆ. ಈಗ ಸಿದ್ದರಾಮಯ್ಯರ ಸರಕಾರ ಅದನ್ನು ಮುಂದುವರೆಸಿಕೊಡು ಹೋಗಬೇಕು ಎಂದು ಹೇಳಿದರು.
ನೆಲ್ಯಾಡಿ: ಕೊಣಾಲು ಗ್ರಾಮದ ಕೊಲ್ಪೆ ಎಂಬಲ್ಲಿ ಕಾರು ಅಪಘಾತಗೊಂಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಅ.30ರಂದು ಬೆಳಿಗ್ಗೆ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ರಸ್ತೆ ಬದಿಯ ಚರಂಡಿಯ ತಡೆಗೋಡೆಗೆ ಡಿಕ್ಕಿಯಾಗಿ, ಡಿಕ್ಕಿ ರಬಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ನೆಲ್ಯಾಡಿ ಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ಪಡೆದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ
ಬೆಳ್ತಂಗಡಿ: ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ನಡೆದ ತಂದೆ-ಮಗನ ಜಗಳ ವಿಕೋಪಕ್ಕೆ ತೆರಳಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ(ಅ.29) ರಾತ್ರಿ ಉಜಿರೆಯಲ್ಲಿ ಸಂಭವಿಸಿದೆ. ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75ವ) ಅವರ ಪುತ್ರ ಜಗದೀಶ್(30ವ) ಎಂಬವರು ಈ ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಇವರ ತಂದೆ ಕೃಷ್ಣಯ್ಯ ಆಚಾರ್ ಚೂರಿಯಿಂದ ಇರಿದು ಮಗನನ್ನು ಕೊಲೆಗೈದ ಆರೋಪಿಯಾಗಿದ್ದಾರೆ. ರಾತ್ರಿಯ ವೇಳೆ ವೈದ್ಯಕೀಯ
ನೆಲ್ಯಾಡಿ: ಶಿರಾಡಿ ಘಾಟ್‍ನ ಡಬಲ್ ಟರ್ನ್‍ನಲ್ಲಿ ಹಾಸನ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಅಕ್ಕಿ ಸಾಗಾಟದ ಲಾರಿಯೊಂದು ಬೆಂಕಿಗಾಹುತಿ ಆಗಿರುವ ಘಟನೆ ನಡೆದಿದೆ. ಶಿರಾಡಿ ಘಾಟ್‍ನ ಡಬಲ್ ಟರ್ನ್‍ನಲ್ಲಿ ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲಾರಿ ಚಾಲಕ ಹಾಗೂ ಕ್ಲೀನರ್‍ಗೆ ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಲಾರಿಯನ್ನು ನಿಲ್ಲಿಸಿ ಕೆಳಗಿಳಿದು, ಅಪಾಯದಿಂದ
ನೆಲ್ಯಾಡಿ: ವಲಯ ಅರಣ್ಯಾಧಿಕಾರಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದು, ಬೆದರಿಕೆಯನ್ನು ಕೂಡ ಹಾಕಿದ್ದಾರಲ್ಲದೆ, ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ. ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಧರ್ಮಸ್ಥಳ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ
ನೆಲ್ಯಾಡಿ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಡುವಳಿಕೆ ನೇಮಣ್ಣ ಗೌಡ ಅವರ ಮನೆಗೆ ಸಿಡಿಲು ಬಡಿದುಸಿಡಿಲು ಬಡಿದು ಹಾನಿಗೊಂಡಿರುತ್ತದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಅವರ ಮನೆಗೆ ಭೇಟಿ ನೀಡಿ ಸಿಡಿಲು ಬಡಿದ ಸ್ಥಳವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಜೊತೆ ಮಾತನಾಡಿ ಸಿಡಿಲಿನಿಂದ ಹಾನಿಯಾದ ಮನೆಗೆ ಸರ್ಕಾರದಿಂದ ಪರಿಹಾರವನ್ನು ಶೀಘ್ರವಾಗಿ ನೀಡಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ರಾಕೇಶ್ ರೈ ಕೆಡೆಂಜಿ, ಭಾಸ್ಕರ ಗೌಡ ಇಚಿಲಂಪಾಡಿ,