Home Posts tagged #belthangadi (Page 4)

ನೆಲ್ಯಾಡಿ :ಸುರಿದ ಭಾರಿ ಗಾಳಿ ಮಳೆಗೆ ಸೌತಡ್ಕ ಸಮೀಪದ ಕೆಲವು ಮನೆಗಳಿಗೆ ಹಾನಿ

ನೆಲ್ಯಾಡಿ : ಸೋಮವಾರ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಸೌತಡ್ಕ ಸಮೀಪದ ಕೆಲವು ಮನೆಗಳಿಗೆ ಹಾನಿಯಾಗಿದ್ದು, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಇಲ್ಲಿ ನಿವಾಸಿಗಳಾದ ಜಮೀಲಾ, ಮರಿಯಮ್ಮ, ಪಾರ್ವತಿ, ಸುರೇಶ್ ಪೂಜಾರಿ, ಮೂಸೆ ಕುಂಞಿ, ಜೋಹರ, ಹಮೀದ್ ಎಂಬುವರ ಮನೆಗೆ ಭಾಗಶಃ ಹಾನಿಯಾಗಿದ್ದು, ಮನೆಯ ಹೆಂಚು ಮತ್ತು ಶೀಟುಗಳು ಹಾರಿಹೋಗಿವೆ. ಈ ಸಂದರ್ಭ ಕೆಲವು

ಆದರ್ಶ್ ಶೆಟ್ಟಿ ನೆಲ್ಯಾಡಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ನೆಲ್ಯಾಡಿ: ತೆಲಂಗಾಣ ರಾಜ್ಯದ ವಾರಂಗಲ್ ನಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಂತರ್ ರಾಜ್ಯ ಮಟ್ಟದ ಜೂನಿಯರ್ ಅಥ್ಲೆಟಿಕ್ಸ್ 18ರ ವಯೋಮಾನದ ಬಾಲಕರ ಕ್ರೀಡಾಕೂಟದಲ್ಲಿ ಆದರ್ಶ್ ಶೆಟ್ಟಿ ಇವರು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕದೊಂದಿಗೆ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ದೈಹಿಕ ಶಿಕ್ಷಕರಾದ ಏಲಿಯಸ್ ಪಿಂಟೋ, ರಾಜೇಶ್ ಮೂಲ್ಯ ಹಾಗೂ ಪುಷ್ಪರಾಜ್ ಇವರಿಗೆ ತರಬೇತಿಯನ್ನು ನೀಡಿದ್ದಾರೆ. ಪ್ರಸ್ತುತ ಇವರು ಪುತ್ತೂರು ಸಂತ

ನೆಲ್ಯಾಡಿ: ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನ್ಯ ದರ್ಶನ, ಅಧ್ಯಯನ ಪ್ರವಾಸ

ನೆಲ್ಯಾಡಿ: ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನ್ಯ ದರ್ಶನಕ್ಕೆ ಕಳೆಂಜ ಗ್ರಾಮದ ಮರಕ್ಕಡ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳು ಕುದುರೆಮುಖ, ಶೃಂಗೇರಿ, ಹೊರನಾಡು, ಇತರ ಪರಿಸರಗಳಿಗೆ ಅಧ್ಯಯನ ಪ್ರವಾಸ ಕೈಗೊಂಡರು. ಪ್ರಯಾಣಕ್ಕೆ ಕಳೆಂಜ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ ಹಸಿರು ನಿಶಾನೆ ತೋರಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ, ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ, ಅರಣ್ಯ ಪಾಲಕರಾದ ಪ್ರಶಾಂತ್,

ನೆಲ್ಯಾಡಿ: ಕೊಣಾಲು ಸಂತ ತೋಮಸರ ದೇವಾಲಯದಲ್ಲಿ ಸಂಭ್ರಮದ ಕೊಯಿನೋನಿಯ 2023 ಆಚರಣೆ

ನೆಲ್ಯಾಡಿ: ಕೊಣಾಲು ದಿಯುವಾಂಜಲಿಸ್ಟಿಕ್ ಅಸೋಸಿಯೇಷನ್ ಆಫ್ ದ ಈಸ್ಟ್ ಇದರ ಅದೀನದಲ್ಲಿರುವ ಸಂತ ತೋಮಸ್ ಯಾಕೋಬಾಯ ಸುರಿಯಾನಿ ಚರ್ಚಿನಲ್ಲಿ ತಾಯಂದಿರಿಗೋಸ್ಕರ ಕೊಯಿನೋನಿಯಾ ಮದರ್ಸ್ ಡಿವೋಷನಲ್ ಫೆಲೋಶಿಪ್ ಕಾರ್ಯಕ್ರಮ ಮರ್ತ ಮರಿಯಾಮ್ ಮಹಿಳಾ ಸಮಾಜದ ನಿರ್ದೇಶಕರಾಗಿರುವ ವೆರಿ.ರೇ. ಪಿ.ಕೆ ಅಬ್ರಹಾಂ ಕೋರ್ ಎಪಿಸ್ಕೋಪೋ ಅವರ ನಿರ್ದೇಶನದಲ್ಲಿ ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ತೋಮೊಸರ ದೇವಾಲಯದ ವಿಕಾರ್ ಆಗಿರುವ ರೇ.ಫಾ.ಅನೀಶ್ ಪಾರಾಶೆರಿಲ್

ಬೆಳ್ತಂಗಡಿ: ಅರಣ್ಯ ಭೂಮಿ ಅತಿಕ್ರಮಣಕ್ಕೆ ಸಂಬಂಧಿಸಿದ ಕಳೆಂಜದ ವಿವಾದಿತ ಜಾಗದಲ್ಲಿ ಸರ್ವೆ ಕಾರ್ಯ ಆರಂಭ

ಅರಣ್ಯ ಭೂಮಿ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಕಾರಣವಾಗಿದ್ದ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೇ ನಂಬರ್ 309ರ ಅಂದರೆ ನಿಡ್ಲೆ ವಿಸ್ತೃತ ಬ್ಲಾಕ್ 2ರ ಮತ್ತು ಕಳೆಂಜ ವಿಸ್ತೃತ ಬ್ಲಾಕ್ ನ ಜಂಟಿ ಸರ್ವೆ ಕಾರ್ಯವು ಆರಂಭಗೊಳ್ಳಲಿದೆ. ತಾಲೂಕು ತಹಶೀಲ್ದಾರ್, ಉಪ್ಪಿನಂಗಡಿ ವಲಯ ಅಧಿಕಾರಿ, ಕಂದಾಯ ಅಧಿಕಾರಿಗಳು, ಸರ್ವೆ ಅಧಿಕಾರಿಗಳ ಸಹಭಾಗಿತ್ವದಲ್ಲಿ ಎಡಿಎಲ್ಆರ್ ಸರ್ವೆ ಮೂಲಕ ಸುಮಾರು 8,446 ಎಕರೆಯಷ್ಟು ಪ್ರದೇಶವನ್ನು ಸರ್ವೆ ಮಾಡಲಾಗುವುದು ಎಂದು

ಬೆಳ್ತಂಗಡಿ: ಕಳೆಂಜ ಅಕ್ರಮ ಮನೆ ನಿರ್ಮಾಣ ಪ್ರಕರಣ ತಾತ್ಕಾಲಿಕ ಸುಖಾಂತ್ಯ: ಕಂದಾಯ ಅರಣ್ಯ ಜಂಟಿ ಸರ್ವೇ ಬಳಿಕ ಅಂತಿಮ ನಿರ್ಧಾರ

ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಫೌಂಡೇಶನ್ ಅರಣ್ಯ ಇಲಾಖೆ ಕಿತ್ತೆಸೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ದೌಡಾಯಿಸುತ್ತಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ ಪ್ರಕರಣ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ವೆಲಂಟನಿ ಮರಿಯಪ್ಪ ಅವರು ಭೇಟಿ ನೀಡಿ ಮನೆ ತೆರವುಗೊಳಿಸುವುದಾಗಿ ತಿಳಿಸಿದಾಗ, ಶಾಸಕರುಗಳು ತೆರವುಗೊಳಿಸುವುದಾದರೆ 309 ಸರ್ವೇ ನಂಬರ್‍ಗೆ ಒಳಪಟ್ಟ ಎಲ್ಲ ಮನೆ

ಬೆಳ್ತಂಗಡಿ: ನಿರ್ಮಾಣ ಹಂತದ ಮನೆ ತೆರವಿಗೆ ಮುಂದಾದ ಅರಣ್ಯ ಇಲಾಖೆ: ಜಿಲ್ಲೆಯ ಶಾಸಕರ ನೇತೃತ್ವದಲ್ಲಿ ತಡೆ

ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವುಗೊಳಿಸದಂತೆ ಸಚಿವರು ಸೂಚಿಸಿದ್ದರೂ ಅರಣ್ಯಾಧಿಕರಿಗಳು ಬೆಳ್ಳಂಬೆಳಗ್ಗೆ ತೆರವಿಗೆ ಮುಂದಾದ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ದೌಡಾಯಿಸಿದ್ದು, ಅವರೊಂದಿಗೆ ಜಿಲ್ಲೆಯ ಶಾಸಕರಾದ ರಾಜೇಶ್ ನಾಯಕ್, ಭರತ್ ಶೆಟ್ಟಿ, ಭಾಗೀರಥಿ ಮುಳ್ಯ, ಉಮಾನಾಥ್ ಕೋಟ್ಯಾನ್, ಎಂಎಲ್ ಸಿ ಪ್ರತಾಪಸಿಂಹ ನಾಯಕ್ ಸಾತ್ ನೀಡಿದರು. ಸ್ಥಳದಲ್ಲಿ ನೂರಾರು ಪೊಲೀಸರು, ಸ್ಥಳೀಯರು,

ನೆಲ್ಯಾಡಿ: ಬೈಕಿಗೆ ಕಾರು ಡಿಕ್ಕಿ, ಬೈಕ್ ಸವಾರ ಗಂಭೀರ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಸಮೀಪ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಗಾಯಾಳುವನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಿಬ್ಬಂದಿ ಎಂದು ಹೇಳಲಾಗುತ್ತಿದ್ದು ಬಿಹಾರ್ ಮೂಲದವರ ಕಾರು ಇದಾಗಿದ್ದು, ಕಾರು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು ಎನ್ನಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಟಾಣೆ ಹೆಡ್ ಕಾನ್ಸ್ಟೇಬಲ್ ಕುಶಾಲಪ್ಪ ಭೇಟಿ ನೀಡಿ

ಬೆಳ್ತಂಗಡಿ : ಒಕ್ಕಣ್ಣನ ವರ್ಣ ಉಳ್ಳಿಂಜದಲ್ಲಿ ಒಂದೇ ಅಡಿಕೆಯಲ್ಲಿ ಚತುರ್ಥ (ನಾಲ್ಕು) ಅಡಿಕೆ ಗಿಡ (ಪೂಗಸಿರಿ)

ಕರಾವಳಿಯ ಮುಖ್ಯ ಬೆಳೆ ಅಡಿಕೆ ಅದರಲ್ಲೂ ಒಕ್ಕಣ್ಣ ಇದನ್ನು ನಂಬಬಾರದು ಎಂದು ನಮ್ಮ ಹಿರಿಯರ ಮಾತು ಅಕ್ಷರಶಃ ಸತ್ಯ. ಇದರಲ್ಲಿ ಏರಿಳಿತಗಳು ಸಾಮಾನ್ಯ ಹಾಗೆ ಪ್ರಕೃತಿ ವೈಪರೀತ್ಯಗಳು ಇನ್ನೊಂದೆಡೆ ಮಹಾಮಾರಿ ಕೊಳೆರೋಗ ಹಳದಿ ರೋಗ ಎಲೆ ಚುಕ್ಕೆ ರೋಗಗಳು ಅಲ್ಲದೆ ಅಡಿಕೆಯಲ್ಲಿರುವ ಔಷಧೀಯ ಗುಣಗಳು ಹಾಗೆ ಕೃಷಿಗೆ ಕಾಡುಪ್ರಾಣಿಗಳ ಹಾವಳಿ ಆನೆ ,ಕಾಡೆಮ್ಮೆ ,ಹಂದಿ, ಮಂಗ ಮುಂತಾದವುಗಳು ಕೃಷಿಕರನ್ನು ಬೆಚ್ಚಿ ಬೀಳಿಸುತ್ತದೆ ಪ್ರಯೋಗಗಳು ಬಹಳಷ್ಟು ನಡೆದರು ಪ್ರಕೃತಿಯ ಮುಂದೆ ನಾವು

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆ ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ,ಬಾಲಕಿಯರ ತ್ರೋಬಾಲ್ ಪಂದ್ಯಾಟ

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ,ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು. ಸುಳ್ಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ ಕ್ರೀಡಾಕೂಟವನ್ನು ದೀಪ ಬೆಳಗಿಸಿವುದರ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳು ಕ್ರೀಡಾಮನೋಭಾವ ಬೆಳೆಸುವುದರಿಂದ ಸ್ವಾವಲಂಬಿ ಜೀವನ ನಡೆಸುವ ಶಕ್ತಿ ಮತ್ತು ಧೈರ್ಯ ಬರುವುದು‌. ಪ್ರತಿಯೊಬ್ಬರು ಕ್ರೀಡಾ ಸ್ಪೂರ್ಥಿ ಬೆಳೆಸಿಕೊಳ್ಳಬೇಕು ಎಂದು ಕ್ರೀಡಾಪಟುಗಳಿಗೆ