ಚಾರ್ಮಾಡಿ ಘಾಟಿ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಹಗಲಲ್ಲೂ ದಟ್ಟ ಮಂಜಿನ ವಾತಾವರಣ ಕಂಡುಬರುತ್ತಿದ್ದು, ವಾಹನ ಸವಾರರು ಪರದಾಟ ನಡೆಸುತ್ತಾ ಚಾಲನೆ ಮಾಡಬೇಕಾದ ಪರಿಸ್ಥಿತಿ ಇದೆ. ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿದಿದ್ದು, ಪ್ರಸ್ತುತ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಈ ಸಮಯ ಘಾಟಿಯಲ್ಲಿ ದಟ್ಟವಾದ ಮಂಜಿನ ವಾತಾವರಣ ಏರ್ಪಟ್ಟು ವಾಹನಗಳ ಹೆಡ್ಲೈಟ್
ನಿರಂತರ ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮಸ್ಥರು, ಏರ್ಟೆಲ್ ಸಂಸ್ಥೆ ವಿರುದ್ಧ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಏರ್ಟೆಲ್ ನೆಟ್ವರ್ಕ್ ವಿರುದ್ಧ ಘೋಷಣೆಯನ್ನು ಕೂಗಲಾಯಿತು ಮತ್ತು ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಗಡುವು ನೀಡಲಾಯಿತು. ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಬೃಹತ್ ಪ್ರತಿಭಟನೆಯನ್ನು ನಡೆಸುವುದಾಗಿ ಎಚ್ಚರಿಸಲಾಯಿತು. ಪ್ರತಿಭಟನೆಯಲ್ಲಿ ಬಳಂಜ ಗ್ರಾಮ ಪಂಚಾಯತ್
ದ.ಕ ಜಿಲ್ಲಾ ಪ್ರವಾಸ ಕೈಗೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಆಶೀರ್ವಾದ ಪಡೆದುಕೊಂಡರು.ಸಚಿವರ ಜೊತೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕೂಡಾ ಇದ್ದರು.
ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಅರಣ್ಯ ಜೈವಿಕ ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಸಲ್ಲಿಸಿದರು. ಕುದುರೆಮುಖ ರಾಷ್ಟ್ರೀಯ
ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಕಪಿಲಾ ನದಿ ಹರಿಯುತ್ತಿದ್ದು, ಈ ನದಿಗೆ ದಿನ ನಿತ್ಯ ಕೋಳಿ ತ್ಯಾಜ್ಯವನ್ನು ಸುರಿಯುತ್ತಿರುವುದು ಪರಿಸರ ಪ್ರಿಯರಿಗೆ ಆತಂಕವಾಗಿದೆ. ಕಪಿಲಾ ನದಿ ನಿತ್ಯ ಹರಿದ್ವರ್ಣ ಪ್ರದೇಶದಿಂದ ಹರಿಯುತ್ತಿದ್ದು, ಮತ್ಸ್ಯ ದೇವರ ಮೀನುಗಳಿಗೆ ಆಶ್ರಯ ನೀಡುತ್ತಿದೆ. ನದಿಯ ತಟದಲ್ಲಿ ಪ್ರಖ್ಯಾತ ಶಿಶಿಲೇಶ್ವರ ದೇವಾಲಯವೂ ಇದೆ. ಇಲ್ಲಿಯ ಜಲದಿಂದಲೇ ದೇವರಿಗೆ ನಿತ್ಯ ಅಭಿಷೇಕ ನಡೆಯುತ್ತಿದೆ. ಸಾವಿರಾರು ಭಕ್ತರು ಈ ನೀರನ್ನು ತೀರ್ಥವೆಂದು
ಉಜಿರೆ : ಸರ್ವತೋಮುಖ ಬೆಳವಣ ಗೆಗೆ ಪೂರಕವಾಗುವ ಮಕ್ಕಳ ಹಕ್ಕುಗಳ ಕುರಿತ ಅರಿವು ವ್ಯಾಪಕವಾಗಬೇಕು ಎಂದು ಟೋಕಿಯೊದ ಪ್ರೆಸ್ ಆಲ್ಟರ್ನೇಟಿವ್ ಪತ್ರಿಕೆಯ ಸಲಹೆಗಾರ್ತಿ ಮನೋರಮ ಭಟ್ ಜಿ.ವಿ ಅಭಿಪ್ರಾಯಪಟ್ಟರು. ಎಸ್ .ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ ಎರಡು ದಿನಗಳ ಮಕ್ಕಳ ಹಕ್ಕುಗಳ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಮಕ್ಕಳು ಸಬಲರಾಗಬೇಕಾದರೆ ಅವರ ಕುಟುಂಬ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಎಲ್ಲ
ಉಜಿರೆ : ಸಾಹಿತ್ಯದಲ್ಲಿ ಬಳಕೆಯಾಗುವ ಭಾಷೆ ಸಂವಹಿಸುವ ವಿವಿಧ ಬಗೆಯ ಅರ್ಥವಿನ್ಯಾಸಗಳೊಂದಿಗೆ ಅನುಸಂಧಾನ ನಡೆಸುವ ಸಾಮಥ್ರ್ಯ ರೂಢಿಸಿಕೊಳ್ಳಬೇಕು ಎಂದು ವಿಮರ್ಶಕ ಪ್ರೋ. ಟಿ.ಪಿ.ಅಶೋಕ ಅಭಿಪ್ರಾಯಪಟ್ಟರು. ಉಜಿರೆ ಎಸ್. ಡಿ. ಎಂ ಸ್ವಾಯಕ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಂಘ ಹಾಗೂ ಹೆಗ್ಗೋಡು ನೀನಾಸಂ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿತ 25ನೆ ಸಾಹಿತ್ಯ ಶಿಬಿರ ರಜತ ಸಂಭ್ರಮದ ಕಲಾನುಸಂದಾನ ಶಿಬಿರದ ಮೊದಲನೇ ಗೋಷ್ಟಿ ಕಾವ್ಯಾನುಸಂದಾನದಲ್ಲಿ ಅವರು ಮಾತನಾಡಿದರು.
ಹರೀಶ್ ಪೂಂಜ ಅವರು ವೇದಿಕೆಯಲ್ಲಿ ತನಗೆ ಮುಸ್ಲಿಮರ ಮತ ಬೇಡ ಎಂದು ಹೇಳಿ ಹಿಂದುಗಳನ್ನು ದಾರಿತಪ್ಪಿಸಿ ಮುಸ್ಲಿಮರಿಗೆ ಕ್ರೈಸ್ತ ರಿಗೆ ನೆರವಾಗಿದ್ದಾರೆ. ಅವರಿಗೆ ಕೊಡುವ ಬಗ್ಗೆ ನಮ್ಮ ತಕರಾರಿಲ್ಲ. ಆದರೆ ಹಿಂದೂಗಳ ಮುಂದೆ ಬಂದು ಸುಳ್ಳು ಹೇಳುವುದು ಯಾಕೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಮಹೇಶ್ ಶೆಟ್ಟಿ ತಿಮರೋಡಿ ಪ್ರಶ್ನಿಸಿದ್ದಾರೆ. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಇಂತಹ ಇಬ್ಬಗೆಯ ನೀತಿಯನ್ನು ಅಂದಿನಿಂದಲೂ
ಉಜಿರೆ: ದೂರ ಸಂಪರ್ಕ ಸಾಧನಗಳ ಬಳಕೆ ಮಿತವಾಗಿರಲಿ ಎಂದು ಎಸ್.ಡಿ.ಎಂ ಕಾಲೇಜಿನ ಗಣಕಯಂತ್ರ ವಿಜ್ಞಾನ ವಿಭಾಗದ ಪ್ರೊ. ಶೈಲಜಾ ಅಭಿಪ್ರಾಯಪಟ್ಟರು.ಎಸ್.ಡಿ.ಎಂ. ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗವು ಗುರುವಾರ ‘ವಿಶ್ವ ದೂರ ಸಂಪರ್ಕ ದಿನ ಆಯೋಜಿಸಿದ್ದ ಗುರುತ್ವ-2023 ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ದೂರ ಸಂಪರ್ಕ ಸೌಲಭ್ಯದಿಂದಾಗಿ ವಿಶ್ವದ ಗಾತ್ರ ಸಣ್ಣದಾಗಿದೆ. ಪ್ರಪಂಚದ ಯಾವುದೇ ಮೂಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ತಕ್ಷಣ ವಿಶ್ವದಾದ್ಯಂತ ಪಸರಿಸುವ
ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ರಾಜೇಶ್ ಪುದುಶೇರಿ ಆಯ್ಕೆಯಾಗಿದ್ದಾರೆ. ಸಾಮಾಜಿಕ ಹಾಗೂ ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರ ಸೇವೆಯನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ ಭಾರತ ಸರ್ಕಾರವು ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ರಾಜೇಶ್ ಪುದುಶೇರಿ ಅವರು ಬೆಂಗಳೂರು ರೈಲ್ವೆಯ ಕಚೇರಿಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.