Home Posts tagged #belthangady (Page 3)

ಪ್ರಾದೇಶಿಕ ಅಸ್ಮಿತೆ ಬಿಂಬಿಸಿದ ರಂಗ ವೈಖರಿ ಗೋಷ್ಠಿ

ಉಜಿರೆ, ಫೆ.5: ಯಕ್ಷಗಾನ ಭಕ್ತಿ ಪರಂಪರೆಯಿಂದ ಬೆಳೆದು ಬಂದ ಕಲೆ. ಇದು ನಾಟ್ಯಧರ್ಮೀಯ ಹಾಗೂ ಲೋಕಧರ್ಮೀಯ ನೆಲೆಗಳನ್ನು ಹೊಂದಿದೆ ಎಂದು  ಹವ್ಯಾಸಿ ಯಕ್ಷಗಾನ ಕಲಾವಿದ ಮತ್ತು ಉಪನ್ಯಾಸಕ ಸುನಿಲ್ ಪಲ್ಲಮಜಲು ಹೇಳಿದರು. ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದ ‘ಸಾರಾ ಅಬೂಬಕ್ಕರ್ ವೇದಿಕೆ’ಯಲ್ಲಿ ನಡೆಯುತ್ತಿರುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ

ಬೆಳ್ತಂಗಡಿ : ಜ.21ರಿಂದ 29 ವರೆಗೆ ಬಿಜೆಪಿಯಿಂದ ವಿಜಯ ಸಂಕಲ್ಪ ಅಭಿಯಾನ

ಭಾರತೀಯ ಜನತಾ ಪಾರ್ಟಿ ಇದೇ ಬರುವ 21ರಿಂದ 29ರವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಹೇಳಿದರು. ಅವರು ಮಾಧ್ಯಮದ ಜೊತೆ ಮಾತನಾಡಿ ಸರಣಿ ಕಾರ್ಯಕ್ರಮಗಳ ಮೂಲಕ ಜನ ಸಾಮಾನ್ಯರನ್ನು ತಳುಪಲಿದ್ದೇವೆ ಈ ಕಾರ್ಯಕ್ರಮಕ್ಕೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ದರವರು ವಿಜಯಪುರದ ಸಿಂದಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ. ಬೆಳ್ತಂಗಡಿ ಮಂಡಲದಲ್ಲಿ 8 ಮಹಾಶಕ್ತಿ

ಬೆಳ್ತಂಗಡಿ : ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯ

ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ವಾಣಿಜ್ಯ ಸಂಕೀರ್ಣದಲ್ಲಿರುವ ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯವಾದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಬೆಳ್ತಂಗಡಿ KSRTC ಬಸ್ ನಿಲ್ದಾಣದ ಬಳಿ ಇರುವ ವಾರ್ತಾ ಭವನ ಕಟ್ಟಡದ ಕೆಳ ಭಾಗ ಕಳೆದ ಒಂದು ವಾರದಿಂದ ಕುಸಿಯುತ್ತಿರುವ ಬಗ್ಗೆ ಪಟ್ಟಣ ಪಂಚಾಯತ್ ಗೆ ಮೌಖಿಕ ಮಾಹಿತಿ ನೀಡಲಾಗಿತ್ತು. ಆದರೆ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿದ್ದಾರೆ. ನಿರಂತರ ಒತ್ತಡದಿಂದ ಇಂದು

ಎಸ್ಸಿ,ಎಸ್ಟಿ ಕುಟುಂಬಗಳ ಕೃಷಿ ನೀರಿಗೆ ಸಮಸ್ಯೆಯಾಗಬಾರದು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ

ಬೆಳ್ತಂಗಡಿ ತಾಲೂಕಿನ ಎಲ್ಲಾ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಕುಟುಂಬಗಳು ಕೃಷಿ ನೀರಿಗೆ ಸಮಸ್ಯೆಯಾಗ ಬಾರದು ಎಂದು ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನಾದ್ಯಂತ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಪಂಗಡ 25 ಮತ್ತು ಪರಿಶಿಷ್ಟ ಜಾತಿ 25 ಕುಟುಂಬಗಳಿಗೆ ಸುಮಾರು ಒಂದು ಕೋಟಿ 25 ಲಕ್ಷ ರೂಪಾಯಿ ಮೊತ್ತವನ್ನು ಕಾವೇರಿ ಜಲ ಅಭಿವೃದ್ದಿ ನಿಗಮ ಯೋಜನೆಯಡಿ ಕೊಳವೆ ಬಾವಿಗೆ ಪಂಪ್ ಅಳವಡಿಕೆ ಮತ್ತು ಪೈಪ್ ಲೈನಿಗೆ ಚಾಲನೆ

ಬೆಳ್ತಂಗಡಿ : ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ

ತಾಲೂಕಿನ ಅಣಿಯೂರು ಪೇಟೆಯಲ್ಲಿ ಸೋಮವಾರ ಬೆಳಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಈ ಪ್ರದೆಶದಲ್ಲಿ ಕಳೆದ ಕೆಲವು ಸಮಯದಿಂದ ಒಂಟಿ ಸಲಗವೊಂದು ರಾತ್ರಿ ವೇಳೆ ಕೃಷಿ ನಾಶ ಮಾಡುತ್ತಿತ್ತು. ಇದೀಗ ಹಗಲು ಹೊತ್ತಿನಲ್ಲಿಯೇ ಪೇಟೆ ಬದಿಯಲ್ಲಿ ಕಾಡಾನೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯ ಮೂಡಿಸಲು ಕಾರಣವಾಗಿದೆ. ನದಿಯಲ್ಲಿ ಕಾಡಾನೆ ತಿರುಗಾಡುತ್ತಿದ್ದು, ನದಿ ಬದಿಯ ತೋಟಗಳಿಗೆ ಹಾನಿಯುಂಟು ಮಾಡುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. 

2022ನೇ ಸಾಲಿನ ಕ್ರೀಡಾ ರತ್ನ ಪ್ರಶಸ್ತಿ : ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಶ್ರೀಧರ್ ಕುಲಾಲ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರಕಾರ ಪ್ರಸ್ತುತ ಪಡಿಸುವ 2022ನೇ ಸಾಲಿನ ಕ್ರೀಡಾ ರತ್ನ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಶ್ರೀಧರ್ ಕುಲಾಲ್ ಆಯ್ಕೆಯಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಆಗಣ್ಯ ಸಾಧನೆಯನ್ನು ಮಾಡಿ ಯಶಸ್ವಿ ಕ್ರೀಡಾಪಟುವಾಗಿ ಹೊರ ಹೊಮ್ಮಿದ ಇವರನ್ನು ಸರ್ಕಾರ ಗುರುತಿಸಿ ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಉಜಿರೆ ಎಸ್.ಡಿ.ಎಂ ಕಾಲೇಜಿನ ವಾಣಿಜ್ಯ ವಿಭಾಗದಿಂದ ʻಉದಯೋತ್ಸವʼ

ʻತನ್ನ ಪ್ರತೀ ತರಗತಿಯಲ್ಲೂ ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುವ ಪ್ರೇರಕ ಶಕ್ತಿಯಾಗಿ, ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡುವ ಮೂಲಕ ಸಾಕಷ್ಟು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಅತ್ಯುತ್ತಮ ಶಿಕ್ಷಕ ಡಾ. ಉದಯಚಂದ್ರ ಪಿ.ಎನ್ ಎಂದು ಎಸ್.ಡಿ.ಎಂ ಕಾಲೇಜಿನ ನೂತನ ಪ್ರಾಂಶುಪಾಲ ಡಾ.ಜಯಕುಮಾರ್‌ ಶೆಟ್ಟಿ ಹೇಳಿದರು.ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾಗಿದ್ದ ಡಾ.ಪಿ.ಎನ್ ಉದಯಚಂದ್ರ ಅವರ ಸೇವಾನಿವೃತ್ತಿ ಹಿನ್ನೆಲೆಯಲ್ಲಿ ವಾಣಿಜ್ಯ ವಿಭಾಗ ಪದವಿ

ಬೆಳ್ತಂಗಡಿ : ನೇತ್ರಾವತಿ ಬಚಾವೋ ಆಂದೋಲನ ಸಮಿತಿ ಸಮಾವೇಶ

ನೇತ್ರಾವತಿ ಬಚಾವೋ ಆಂದೋಲನ ಸಮಿತಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಮಾವೇಶವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಶನಿವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಪ್ರಧಾನ ಸಂಚಾಲಕ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಿತ್ ಶಿವರಾಂ ರವರು ” ನಮ್ಮ ಜಿಲ್ಲೆಯ ಜೀವನದಿ ನೇತ್ರಾವತಿ ನದಿಯ ಮೇಲೆ ವ್ಯವಸ್ಥಿತವಾಗಿ ಅತ್ಯಾಚಾರ ನಡೆಯುತ್ತಿದ್ದಾಗ ಸುಮ್ಮನಿರುವುದು ಸರಿಯಲ್ಲ , ಇದರ

ವಿಷ ಪೂರಿತ ಅಣಬೆಯ ಸೇವನೆಯೇ : ಮೃತದೇಹ ಮನೆ ಅಂಗಳದಲ್ಲಿ

ಬೆಳ್ತಂಗಡಿ: ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ಒಂದೇ ಕುಟುಂಬದ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾಗಿದ್ದು ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು ಸಂಶಯಿಸಲಾಗಿದೆ. ಮೃತರನ್ನು ಪಲ್ಲದಪಲ್ಕೆ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ಬಡ ಕುಟುಂಬದ ಮನೆಯಲ್ಲಿ ಮನೆ ಯಾಜಮಾನ ಗುರುವ ಸಹಿತ ಇಬ್ಬರು ಪುತ್ರರು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ‌ ಮನೆ ಮುಂಭಾಗ

ರಿಕ್ಷಾ ನಿಲ್ದಾಣದಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಗುಂಡಿ

ಬೆಳ್ತಂಗಡಿ ಪಟ್ಟಣದಲ್ಲಿರುವ ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿರುವ ಖಾಸಗಿ ರಿಕ್ಷಾ ನಿಲ್ದಾಣದಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಗುಂಡಿಯೊಂದು ನಿರ್ಮಾಣವಾಗಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೊಯ್ಯೂರು ಖಾಸಗಿ ರಿಕ್ಷಾ ನಿಲ್ದಾಣದಲ್ಲಿ ಈ ಅಪಾಯಕಾರಿ ಗುಂಡಿ ನಿರ್ಮಾಣವಾಗಿದೆ. ಈಗಾಗಲೇ ಗುಂಡಿ ಬಿದ್ದು ವಾರವಾಗಿದ್ದರೂ ಕೂಡ ಪಟ್ಟಣ ಪಂಚಾಯತ್ ಆಡಳಿತ ಮೌನವಾಗಿದೆ. ಇಲ್ಲಿ ದಿನನಿತ್ಯ ನೂರಾರು ವಾಹನಗಳು ಚಲಿಸುತ್ತದೆ. ಸಮೀಪದ