ಬೆಂಗಳೂರು:ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಬನ್ನೇರುಘಟ್ಟ ಲಯನ್ಸ್ ಕ್ಲಬ್ ವತಿಯಿಂದ ಕಿರು ನಾಟಕ ಪ್ರದರ್ಶನ ಬೆಂಗಳೂರಿನ ಟಿ.ಜಾನ್ ನರ್ಸಿಂಗ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಯಿತು. ವೃತ್ತಿಪರ ರಂಗಭೂಮಿ ಕಲಾವಿದರು ಪ್ರದರ್ಶಿಸಿದ ಈ ನಾಟಕವು ಒತ್ತಡ, ಗಲಾಟೆ ಹಾಗೂ ಮನೋವೈಕಲ್ಯಗಳಂತಹ ವಿಷಯಗಳು ಮಾನಸಿಕ ಆರೋಗ್ಯದ ಮೇಲೆ ಬೀರುವ ಪ್ರಭಾವವನ್ನು
ನಮ್ಮ ಮೆಟ್ರೊ’ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನದ ಹಬ್ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಈ ಮಾರ್ಗವು ಬೊಮ್ಮಸಂದ್ರದಿಂದ ಆರ್.ವಿ. ರಸ್ತೆಗೆ ಸಂಪರ್ಕ ಕಲ್ಪಿಸಲಿದೆ. ರಾಗಿಗುಡ್ಡ ನಿಲ್ದಾಣದಲ್ಲಿ ಈ ಮಾರ್ಗಕ್ಕೆ ಹಸಿರು ನಿಶಾನೆ ತೋರಿದ ಮೋದಿ. ಎಲೆಕ್ಟ್ರಾನಿಕ್ ಸಿಟಿ ವರೆಗೆ ಪ್ರಯಾಣ ನಡೆಸಿದರು. ಅವರೊಂದಿಗೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ,
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿಯ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಇದೇ ಸಮಯದಲ್ಲಿ ಅಮೃತ್‍ಸರ್ ನಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಿದರು. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೆಎಸ್‌ಆರ್ ನಿಲ್ದಾಣದಿಂದ ಪ್ರಧಾನಿ
ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು. ಜಾಗೃತ ಕರ್ನಾಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದ ಪ್ರತಿನಿಧಿಗಳು ಮತ್ತು ತುಮಕೂರಿನ ಅಲೆಮಾರಿ ಸಮುದಾಯದ ಪ್ರತಿನಿಧಿಗಳ ನಿಯೋಗದೊಂದಿಗೆ ಸಚಿವರಾದ ಕೃಷ್ಣಭೈರೇಗೌಡರೊಂದಿಗೆ ಸಭೆ ಏರ್ಪಡಿಸಲಾಗಿತ್ತು. ಕೊರಗ
ಮಂಗಳೂರು: ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಕಮಿಷನರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವರು, ಅಧಿಕಾರಿಗಳು ಸ್ಥಳದಲ್ಲಿದ್ದು, ಮಳೆ ಹಾನಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ
ಬೆಂಗಳೂರು : ಕರಾವಳಿ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯಲ್ಲಿ ಸ್ಥಳೀಯ ಮೀನುಗಾರರಿಗೆ ಆದ್ಯತೆ ನೀಡುವ ಬಗ್ಗೆ ವಿಶೇಷ ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು. ಬೆಂಗಳೂರಿನ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದ ಜೊತೆಗಿನ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಇನ್ನಷ್ಟು ವಿಸ್ತೃತ
ಬೆಂಗಳೂರಿನ ಹಸಿರು ತೋಟದ ಗ್ರೀನ್ ಪಾತ್ ಏರಿನಲ್ಲಿ ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ನಾದ ಬ್ರಹ್ಮ, ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರು ಮಾತನಾಡಿ, ಕಾಲವು ಅಳಿಸಲಾಗದ ಹೆಸರು ಶಕ್ತಿಯುತ ಬಂಡಾಯ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರದು. ಭಾರತದಲ್ಲಿ ನೆಲದ ಮಕ್ಕಳ ಬದುಕಿಗೆ ಮೊದಲು ದನಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಬಾರಿ ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದ ರೈತರಿಗೆ ಸಂಕಷ್ಟ ಉಂಟಾಗಿರುವ ವಿಚಾರ ಹಾಗೂ ಹೆಮ್ಮಾಡಿ ಸೇವಂತಿಗೆ ಬೆಳೆಗಾರರ ಸಂಕಷ್ಟ ನಿವಾರಣೆಗೆ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ರಾಜ್ಯ ತೋಟಗಾರಿಕಾ ಸಚಿವರಾದ ಶ್ರೀ ಎಸ್ ಎಸ್
ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ಸಮಯದಿಂದ ಸರೋಜಾ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸರೋಜಾ ಸಂಜೀವ್ ಅವರು ಕೊನೆಯುಸಿರೆಳೆದಿದ್ದಾರೆ.
ಬರ ಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು 2023ರ ಸೆ. 13ರಂದೇ ಘೋಷಿಸಲಾಗಿದೆ. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ 35,162 ಕೋಟಿ ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ಪರಿಹಾರ