ಬೆಂಗಳೂರು, : ಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಹಾದಿ ತಪ್ಪುವುದನ್ನು ತಡೆಯಲು ಶಾಲೆಗಳು ಮತ್ತು ಪಾಲಕರು ನೈತಿಕ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಹೇಳಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ “ಕರ್ನಾಟಕ ಮಹಿಳಾ ಮತ್ತು ಮಕ್ಕಳ ಮಾನವ ಹಕ್ಕುಗಳ ಸೇವಾ ಟ್ರಸ್ಟ್ “ ಉದ್ಘಾಟನೆ, ಲಾಂಚನ
ಬೆಂಗಳೂರು: ಕುಂಬಾರ ಸಂಘದ ಆಡಳಿತ ಮಂಡಳಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಹೋರಾಟ ಮಾಡುತ್ತಿರುವ ಬಿ.ಎಸ್. ಬದ್ರಿ ಪ್ರಸಾದ್ ಎಂಬುವರ ಮೇಲೆ ಕುಂಬಾರ ಸಂಘದ ಕೆಲವು ಆಡಳಿತ ಮಂಡಳಿಯ ಪಟ್ಟಭದ್ರರು ಎರಡು ಬಾರಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಜರುಗಿಸಬೇಕು. 48 ಗಂಟೆಗಳಲ್ಲಿ ಹಲ್ಲೆಕೋರರನ್ನು ಬಂಧನವಾಗದಿದ್ದರೆ ಕಲಾಸಿ ಪಾಳ್ಯ ಪೊಲೀಸ್ ಠಾಣೆ ಎದುರು ಉಗ್ರ ಪ್ರತಿಭನೆ ನಡೆಸುವುದಾಗಿ ಸಂಘದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ‘ಭರವಸೆ – ಮರುನಿರ್ಮಾಣ – ಘನತೆ’ ಎಂಬ ಧ್ಯೇಯವಾಕ್ಯದಡಿಯಲ್ಲಿ ರಾಜ್ಯಮಟ್ಟದ ಪ್ರಥಮ ‘ಯುವ ಸಮಾವೇಶ’ವನ್ನು ಡಿ.18ರ ಭಾನುವಾರದಂದು ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿದೆ” ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಲಬೀದ್ ಶಾಫಿ ತಿಳಿಸಿದರು. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಮಾಜದ ನಿರ್ಮಾಣಾತ್ಮಕ ಕೆಲಸಗಳಲ್ಲಿ ಯುವ ಸಮೂಹವನ್ನು
ಬೆಂಗಳೂರು, ಡಿ, 8; ಕ್ಯಾಬ್ ಸಾಗಾಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರ ಹೆಜ್ಜೆ ಇಟ್ಟಿರುವ “ಡ್ರೈಫ್ ಡ್ರೈಫ್ ಆಟೋ “ ಸೇವೆ ಚಾಲಕರಿಗೆ ವರದಾನವಾಗಿ ಪರಿಣಮಿಸಿದ್ದು, ಅವರಿಂದ ಯಾವುದೇ ರೀತಿಯ ಕಮಿಷನ್ ಪಡೆಯುವುದಿಲ್ಲ ಎಂದು ಪ್ರಕಟಿಸಿದೆ. ಬೇರೆ ಕ್ಯಾಬ್ ಸೇವೆಗಳಿಂದ ಬಸವಳಿದಿರುವ ಚಾಲಕರು ಈ ತೀರ್ಮಾನದಿಂದ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಬ್ಲಾಕ್ ಚೈನ್ ತಂತ್ರಜ್ಞಾನ ಆಧಾರಿತ ಆಫ್ ಅನ್ನು ಇದು ಒಳಗೊಂಡಿದ್ದು, ಚಾಲಕರಿಂದ ಚಂದಾ ಹಣವನ್ನು ಮಾತ್ರ ಪಡೆಯುತ್ತೇವೆ.
ಬೆಂಗಳೂರು : ಹಿಂದುಳಿದ ವರ್ಗಗಳ ಪತ್ರಕರ್ತರ ಮಾಲೀಕತ್ವದ ಪತ್ರಿಕೆಗಳಿಗೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿರುವ ಮಾಸಿಕ ಎರಡು ಪುಟ ಜಾಹೀರಾತು ಹಾಗೂ ಮೀಡಿಯಾ ಕಿಟ್ ನೀಡುವಲ್ಲಿ ವಿಳಂಬವಾಗಿದ್ದು, ಸರಕಾರದ ಈ ವಿಳಂಬ ನೀತಿಯನ್ನು ವಿರೋಧಿಸಿ ಡಿಸೆಂಬರ್ 15ರಂದು ಬೆಂಗಳೂರಿನಲ್ಲಿ ರಾಜ್ಯ ವಾರ್ತಾ ಇಲಾಖೆಯ ಆಯುಕ್ತರ ಕಛೇರಿಯ ಮುಂಭಾಗದಲ್ಲಿ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ, ವರದಿಗಾರರ ಸಂಘ ಎಚ್ಚರಿಕೆ
ಬೆಂಗಳೂರು, ಡಿ. 5: ರಾಜ್ಯ ವ್ಯಾಪ್ತಿಯ ಡಿಜಿಟಲ್ ಮಾಧ್ಯಮ ಸಂಘಟನೆ ‘ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್’ ಇದರ ಉದ್ಘಾಟನೆ, ಲಾಂಛನ ಅನಾವರಣ ಹಾಗೂ ವಾರ್ಷಿಕ ಮಾಧ್ಯಮ ಸಾಧನಾ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು. ಬೆಂಗಳೂರಿನ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಚಿತ್ರನಟ, ಸಂಗೀತ ನಿರ್ದೇಶಕ ವಿ. ಮನೋಹರ್, ವಿಜಯ ಕರ್ನಾಟಕ ಆನ್ ಲೈನ್ ಎಡಿಟರ್ ಪ್ರಸಾದ್ ನಾಯಕ್, ‘ಡಿ.ಎಕ್ಸ್
ಕನ್ನಡೇತರರಿಗೆ ಕನ್ನಡ ಕಲಿಸಲು ವಾರಕ್ಕೆ ಒಂದು ದಿನ ಮೀಸಲಿರಿಸುವಂತೆ ಹಿರಿಯ ಚಿತ್ರ ರಮೇಶ್ ಭಟ್ ಸಲಹೆ ಮಾಡಿದ್ದಾರೆ. ಕರ್ನಾಟಕ ಯೂಥ್ ವೆಲ್ ಫೇರ್ ಅಸೋಸಿಯೇಷನ್ ನಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಿದ್ದ 67 ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಗಣ್ಯರಿಗೆ ಜೀವಮಾನ ಶ್ರೇಷ್ಠ ಸಾಧನೆ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಕನ್ನಡ ಭಾಷೆಗೆ ಭವ್ಯ ಇತಿಹಾಸವಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡು, ಮಲೆನಾಡು, ಕರಾವಳಿ ಭಾಗಗಳಲ್ಲಿ ನ. 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ,
ದೇಶಿ ಹಾಗೂ ವಿದೇಶಿ ಪ್ರಯಾಣಿಕರಿಗೆ ಐಶಾರಾಮಿ ಸೇವೆಯನ್ನು ಇಲ್ಲಿ ಒದಗಿಸಲಾಗುತ್ತದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವ ವಿನ್ಯಾಸದ ಹೈಟೆಕ್ ನಿಲ್ದಾಣ ಅನಾವರಣಗೊಂಡಿದೆ ಟರ್ಮಿನಲ್ 2 ಅನ್ನು ಉದ್ಯಾನ ನಗರಿ ಬೆಂಗಳೂರಿನ ಗೌರವಾರ್ಥವಾಗಿ ವಿನ್ಯಾಸಗೊಳಿಸಲಾಗಿದೆ. ಉದ್ಯಾನವನದಲ್ಲಿ ನಡೆದಂತ ಅನುಭವವನ್ನು ಇದು ಪ್ರಯಾಣಿಕರಿಗೆ ನೀಡುತ್ತದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುಮಾರು 5000 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಹೊಸ
ಬೆಂಗಳೂರು: ನ, 6: ವಿಜಯನಗರಜ ಅರ್ಹಂ ಭವನದಲ್ಲಿ ಧರ್ಮ ಧರ್ಮಗಳ ನಡುವೆ ಸಾಮರಸ್ಯ ಬೆಸೆಯುವ ಸರ್ವ ಧರ್ಮ ಸಮ್ಮೇಳನ ಹಾಗೂ ಸರ್ವಧರ್ಮ ಆಧ್ಯಾತ್ಮಿಕ ಸ್ನೇಹ ಮಿಲನ-2022 ಕಾರ್ಯಕ್ರಮ ಸಂತಸ, ಸಡಗರದಿಂದ ನೆರವೇರಿತು. ಧರ್ಮ ಧರ್ಮಗಳ ನಡುವೆ, ಧಾರ್ಮಿಕ ಮುಖಂಡರ ಮಧ್ಯೆ ಪರಸ್ಪರ ಗೌರವ ನೀಡುವ, ಆಲಂಗಿಸಿಕೊಂಡು ಬೆನ್ನು ತಟ್ಟುವ, ಸಾಮರಸ್ಯದಲ್ಲಿ ನಿಮಗಿಂತ ನಾವೇ ಒಂದು ಹೆಜ್ಜೆ ಮುಂದೆ ಎನ್ನುವ ಭಾವನೆ ಪ್ರತಿಯೊಬ್ಬರಲ್ಲೂ ಕಂಡು ಬಂತು. ಸಮ್ಮೇಳನದಲ್ಲಿ ವಿಶ್ವ ಮಾನವ ಸಂದೇಶ