ಭ್ರಷ್ಟರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ,ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಕಾರ್ಕಳ ಬಿಜೆಪಿ ನೇತೃತ್ವದಲ್ಲಿ ಫೆ.6ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ನಿರಂತರವಾಗಿ ಎಲ್ಲಾ ವಿಭಾಗಗಳಲ್ಲೂ ಬೆಲೆ ಏರಿಕೆಯನ್ನು ನಡೆಸುತ್ತಲೇ ಇದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ
ಕಾರ್ಕಳ, ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಜನವಿರೋಧಿ ನೀತಿ ಖಂಡಿಸಿ ಫೆಬ್ರವರಿ 6 ರಂದು ತಾಲೂಕು ಕಚೇರಿ ಮುಂಭಾಗ ಬೆಳಿಗ್ಗೆ 10 ಗಂಟೆಯಿಂದ ಪ್ರತಿಭಟನೆ ಸಭೆ ನಡೆಯಲಿದೆ ಎಂದು ಬಿಜೆಪಿ ಕ್ಷೇತ್ರ ಅಧ್ಯಕ್ಷ ನವೀನ್ ನಾಯಕ್ ಮಾಹಿತಿ ನೀಡಿದರು. ಕಳೆದ ಎರಡು ವರ್ಷಗಳಲ್ಲಿ ಆಡಳಿತ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಗ್ರಾಮೀಣ ಭಾಗದ ಜನರ ನಿತ್ಯ ಜೀವನಕ್ಕೆ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಹಿಂದೂ ಕಾರ್ಯಕರ್ತರಿಗೆ
ಬಂಟ್ವಾಳ: ಕರ್ನಾಟಕದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಹಾಗೂ ರಾಷ್ಡ್ರೀಯ ಹೆದ್ದಾರಿ ತಡೆ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಬಿ.ಸಿ.ರೋಡಿನಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಪ್ರತಿಭಟಮಕಾರರನ್ನು ಉದ್ದೇಶಿಸಿ ಮಾತನಾಡಿ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಹಿಂದಿನ ಸರಕಾರದ ಅವಧಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು. ಈಗ ನಾಲ್ಕನೇ ಸ್ಥಾನಕ್ಕೆ ಹಿಂದೆ ಸರಿದಿದೆ. ಕಾಂಗ್ರೆಸ್ ಸರಕಾರ ಗ್ಯಾರಂಟಿ ನೆಪದಲ್ಲಿ
ತೈಲ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯುತ್ತಿದ್ದು, ಮಂಗಳೂರಿನ ಪಿವಿಎಸ್ ವೃತ್ತದ ಬಳಿ ಬಿಜೆಪಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಲೋಕಸಭೆ ಚುನಾವಣೆಯ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೈಲ ಬೆಲೆ ಏರಿಸಿ ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ. ಬಡವರ ಜೇಬಿಗೆ ಕತ್ತರಿ ಹಾಕುವಂತಹ ನಿರ್ಣಯ ಸರಿಯಲ್ಲ.
ಬುಧವಾರ ದಿಲ್ಲಿಯಲ್ಲಿ ಇಂಡಿಯಾ ಮೈತ್ರಿ ಕೂಟ ಮತ್ತು ಎನ್‌ಡಿಎ ಮೈತ್ರಿ ಕೂಟ ಎರಡೂ ಕುಟಗಳು ತಮ್ಮ ರಾಜಕೀಯ ತಂತ್ರಗಾರಿಕೆಯ ಬಗೆಗೆ ಸಭೆ ನಡೆಸಿದವು. ಪಾಟ್ನಾದಿಂದ ಬೆಳಿಗ್ಗೆ ಹತ್ತೂವರೆ ಗಂಟೆಯ ಹೊತ್ತಿಗೆ ಹೊರಟ ವಿಸ್ತಾರ್ ವಿಮಾನದಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್ ಮತ್ತು ಮಾಜೀ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ದಿಲ್ಲಿಗೆ ಹೊರಟದ್ದು ಭಾರೀ ಗಾಳಿ ಸುದ್ದಿಗಳಿಗೆ ಕಾರಣವಾಗಿತ್ತು. ಕೊನೆಗೆ ನಿತೀಶ್ ಕುಮಾರ್ ಅವರು ಎನ್‌ಡಿಎ ಕೂಟದ ಸಭೆಯಲ್ಲಿ ಭಾಗವಹಿಸಿದರೆ,
ಬಂಟ್ವಾಳ: ವಿಧಾನಸೌಧದಲ್ಲಿ ಪಾಕಿಸ್ಥಾನಕ್ಕೆ ಜಿಂದಾಬಾದ್ ಹೇಳಿದ ಭಯೋತ್ಪಾದಕ ಪ್ರೇಮಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯ ವತಿಯಿಂದ ಪ್ರತಿಭಟನೆ ಶನಿವಾರ ಬಿ.ಸಿ.ರೋಡಿನಲ್ಲಿ ನಡೆಯಿತು.ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ, ಎಂಟು ತಿಂಗಳ ಅವಧಿಯಲ್ಲಿ
ರಾಷ್ಟ್ರೀಯ ವಿಚಾರಧಾರೆಗಳಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಹಿಂದುಗಳನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಿರ್ಲಕ್ಷಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಡಾ. ನವೀನ್ ಹೇಳಿದರು. ಪುತ್ತೂರು ಅಮರ ಜವಾನ್ ಸ್ಮಾರಕದ ಬಳಿ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ಶಾಸಕರಿಗೆ ಅಗೌರವ, ಹಕ್ಕುಚ್ಯುತಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಗ್ರಾಪಂ, ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ದಿಢೀರ್ ರದ್ದುಪಡಿಸಿ ಕಾಂಗ್ರೆಸ್ ನಾಯಕರು ದುರಾಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪದಾಧಿಕಾರಿಗಳು ಕ್ಷೇತ್ರದ ಶಾಸಕರನ್ನು ಕಡೆಗಣಿಸಿ ದರ್ಪ ಮೆರೆಯುತ್ತಾರೆ. ಗ್ರಾಪಂ ಮಟ್ಟದ ಅಧಿಕಾರಿಗಳನ್ನು
ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣದ ವಿರುದ್ಧ ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ “ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ” ಸಭೆ ನಡೆಸಿದರು. ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿಯಿಂದ ಹೊರಟ ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಛೇರಿಯ ಬಳಿ ಸಮಾಗಮಗೊಂಡಿತು. ನಂತರ ಪ್ರತಿಭಟನಾ ಸಭೆ
ಕರ್ನಾಟಕ ರಾಜ್ಯ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದರು ಎಂದು ಆರೋಪಹರಿಸಿ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಪಕ್ಷದ ನಡವಳಿಕೆ ಹಾಗೂ ನಿಷ್ಪಕ್ಷಪಾತವಾಗಿ ನ್ಯಾಯ ನೀಡಬೇಕಾಗಿದ್ದ ಸ್ಪೀಕರ್ ವಿರುದ್ಧ ಬಿಜೆಪಿ ಯುವ ಮೋರ್ಚ ಸುರತ್ಕಲ್ ನಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಂಗಳೂರು ಉತ್ತರಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ರಾಜ್ಯ ಯುವ ಮೋರ್ಚಾ