Home Posts tagged #bjp

ಪುದು ಗ್ರಾ.ಪಂ. ಪ.ಜಾತಿ, ಪಂಗಡದ ಅನುದಾನ ದುರ್ಬಳಕೆ ಆರೋಪ
ಮಂಗಳೂರು ಬಿಜೆಪಿ ಎಸ್‍ಸಿ, ಎಸ್‍ಟಿ ಮೋರ್ಚಾ ವತಿಯಿಂದ ಪ್ರತಿಭಟನೆ

ಬಂಟ್ವಾಳ: ಪುದು ಗ್ರಾ.ಪಂ.ಪರಿಶಿಷ್ಟ ಜಾತಿ ಹಾಗೂ ಪಂಗಡದ ಅನುದಾನವನ್ನು ದುರ್ಬಳಕೆ ಮಾಡಿದೆ ಎಂದು ಆರೋಪಿಸಿ ಮಂಗಳೂರು ಬಿಜೆಪಿ ಎಸ್‍ಸಿ, ಎಸ್‍ಟಿ ಮೋರ್ಚಾ ವತಿಯಿಂದ ಮಂಗಳೂರು ಮಂಡಲದ ಉಪಾಧ್ಯಕ್ಷ ವಿಠಲ್ ಸಾಲ್ಯಾನ್ ಅವರ ನೇತೃತ್ವದಲ್ಲಿ ಗ್ರಾ.ಪಂ.ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.ದ.ಕ.ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸತೀಶ್ ಕುಂಪಲ ಅವರು

ಮಂಗಳೂರು : ಪ್ರಧಾನಿ ಮೋದಿ ಆಗಮನ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಅವರು ಇಂದು ನಗರದಲ್ಲಿರೋ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡುತ್ತಾ, ಈ ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಸುಮಾರು ಒಂದುವರೆ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಕೆಲವು ಫಲಾನಭವಿಗಳಿಗೆ ಯೋಜನೆಗಳ ಹಸ್ತಾಂತರ ನಡೆಯಲಿದೆ. ಮಧ್ಯಾಹ್ನ 1ಕ್ಕೆ ಕಾರ್ಯಕ್ರಮ ನಡೆಯಲಿರುವುದರಿಂದ ಸಾರ್ವಜನಿಕರು ಮುಂಚಿತವಾಗಿ ಭಾಗವಹಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ನಡೆಸಲಾಗುತ್ತಿದೆ

ನಳಿನ್‍ಗೆ ತಡೆ ನಿಜವಾದ ಕಾರ್ಯಕರ್ತರಿಂದ ಅಲ್ಲ : ಜಗದೀಶ ಶೇಣವ

ಇತ್ತೀಚೆಗೆ ಬೆಳ್ಳಾರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಕಾರನ್ನು ತಡೆದು ದಿಗ್ಬಂಧನ ಹಾಕುವ ಕೆಲಸ ಆಕಾಂಕ್ಷಿಗಳು, ಅತೃಪ್ತರಿಂದ ಆಗಿದೆಯೇ ಹೊರತು ಬಿಜೆಪಿಯ ನಿಜವಾದ ಕಾರ್ಯಕರ್ತರಿಂದ ಅಲ್ಲ ಎಂದು ದ.ಕ ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ ಶೇಣವ ಹೇಳಿದ್ದಾರೆ.ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹತ್ಯೆಯಾದ ಪ್ರವೀಣ್ ನೆಟ್ಟಾರ್ ಮನೆಗೆ ತೆರಳುವಾಗ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಸೇರಿದಂತೆ ಇತರೆ ಶಾಸಕರಿದ್ದರೂ ಕೇವಲ

ಪ್ರಮೋದ್ ಮುತಾಲಿಕ್ ಪೊಲೀಸರ ವಶಕ್ಕೆ

ದ.ಕ. ಜಿಲ್ಲೆ ಪ್ರವೇಶಿಸಲು ಮುಂದಾದ ಶ್ರೀ ರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಜಿಲ್ಲೆಯ ಗಡಿಭಾಗವಾದ ಹೆಜಮಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ಸುಳ್ಯದಲ್ಲಿ ಹತ್ಯೆಯಾಗಿರುವ ಪ್ರವೀಣ್ ಮನೆಗೆ ಭೇಟಿ ನೀಡುವ ಉದ್ದೇಶದಿಂದ ಮುತಾಲಿಕ್ ದ.ಕ. ಜಿಲ್ಲೆಗೆ ಆಗಮಿಸುವ ಬಗ್ಗೆ ಗುರುವಾರವೇ ಮಾಹಿತಿಯಿತ್ತು. ಅವರು ಆಗಮಿಸಿದ್ದಲ್ಲಿ ನಗರದಲ್ಲಿ ಸಾರ್ವಜನಿಕ

ಪ್ರವೀಣ್ ಹತ್ಯೆ ಆರೋಪಿಗಳ ಅಂಗಡಿಗಳಿಗೆ ಹಾನಿ

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪೋಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯನ್ನು ಆಕ್ರೋಶಿತರು ಧ್ವಂಸಗೊಳಿಸಿದ ಘಟನೆ ನಡೆದಿದೆ. ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬೆಳ್ಳಾರೆ ಮೂಲದ ಶಫೀಕ್ ಬಂಧಿತನಾಗಿದ್ದಾನೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಆಕ್ರೋಶಿತರಾದ ಕೆಲವರು ಆತ ಕೆಲಸ ನಿರ್ವಹಿಸುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ. ಬಿಗು ಪೋಲೀಸ್

ಪ್ರವೀಣ್ ನೆಟ್ಟಾರು ಕೊಲೆ : ಇಬ್ಬರ ಬಂಧನ

ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ.ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೆÇಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆ ಬಂಧಿತ ಆರೋಪಿಗಳಾಗಿದ್ದಾರೆ.

ಪ್ರವೀಣ್ ನೆಟ್ಟಾರ್ ಹತ್ಯೆ ಬಿಜೆಪಿ ಸರಕಾರದ ದುರಾಡಳಿತದ ಫಲಶ್ರುತಿ : ಮಸೂದ್, ಪ್ರವೀಣ್ ಕುಟುಂಬಗಳಿಗೆ ತಾರತಮ್ಯ ವಿಲ್ಲದೆ ಪರಿಹಾರ ಒದಗಿಸಿ : ಡಿವೈಎಫ್ಐ ಆಗ್ರಹ

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಗೆ ಬಿಜೆಪಿ ಸರಕಾರದ ದುರಾಡಳಿತ ಹಾಗೂ ಮತೀಯವಾದಿ ನೀತಿಗಳೇ ನೇರ ಕಾರಣ. ಬಿಜೆಪಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಪೂರ್ತಿ ಕುಸಿದಿದ್ದು, ಕೋಮುವಾದಿ ಸಂಘಟನೆಗಳು ಅಂಕೆ ಮೀರಿ ವರ್ತಿಸುತ್ತಿವೆ. ಬೆಳ್ಳಾರೆಯಲ್ಲಿ ನಡೆದಿರುವ ಮಸೂದ್ ಹಾಗೂ ಪ್ರವೀಣ್ ನೆಟ್ಟಾರ್ ಕೊಲೆಗಳು ಮತೀಯ ಸಂಘರ್ಷ ಭುಗಿಳೇಲುವ ಭೀತಿಗೆ ಕಾರಣವಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ‌ ಈಗಲಾದರು ಎಚ್ಚೆತ್ತುಕೊಂಡು ತಮ್ಮ ಪರಿವಾರವೂ ಸೇರಿದಂತೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು..!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆಯಾಗಿದೆ. ಬೆಳ್ಳಾರೆಯ ನೆಟ್ಟಾರು ನಿವಾಸಿ 32 ವರ್ಷದ ಪ್ರವೀಣ್ ನೆಟ್ಟಾರು ಎಂಬಾತನನ್ನು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಇಟ್ಟುಕೊಂಡಿದ್ದ ಪ್ರವೀಣ್ ತನ್ನ ಅಂಗಡಿಯನ್ನು ಬಂದ್ ಮಾಡುವ ವೇಳೆಗೆ ಒಂದೇ ಬೈಕ್ ನಲ್ಲಿ ಆಗಮಿಸಿದ ಮೂವರು ತಲ್ವಾರ್ ನಿಂದ ಹಲ್ಲೆ ಮಾಡಿ ಹೋಗಿದ್ದಾರೆ. ತಕ್ಷಣ ಸ್ಥಳೀಯರು ಪ್ರವೀಣ್

ಸೋನಿಯಾ ಗಾಂಧಿ ವಿರುದ್ಧ ದ್ವೇಷದ ರಾಜಕಾರಣ : ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‍ನಿಂದ ಪ್ರತಿಭಟನೆ

ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ವಿರುದ್ಧ ಧ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಕ್ಲಾಕ್ ಟವರ್‍ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದ.ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ, ದ.ಬ್ಲಾಕ್ ಕಾಂಗ್ರೆಸ್ ನೇತೃತ್ವ : ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ಪ್ರತಿಭಟನೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ನಗರದ ಮಿನಿ ವಿಧಾನಸೌಧದ ಬಳಿ ನಡೆದ ಪ್ರತಿಭಟನೆಯಲ್ಲಿ ನಡೆಯಿತ್ತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿ, ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಜನರಿಗೆ ಮೋಸ ಮಾಡುತ್ತಿದೆ. ಜನರಿಗೆ ಅಲ್ಪ ಅವಧಿಯ ಸೇವೆಯನ್ನ ನೀಡುವ ಉದ್ದೇಶ ಏನೂ ಎಂದು ಪ್ರಶ್ನೆ ಮಾಡಿದರು. ದೇಶದಲ್ಲಿ ಅಗ್ನಿಪಥ್ ಯೋಜನೆಯನ್ನು