ಉಳ್ಳಾಲ: ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿ , ಉಳ್ಳಾಲ ವಿಧಾಸನಭಾ ಕ್ಷೇತ್ರಕ್ಕೆ ಅವಶ್ಯಕವಿರುವ ಉದ್ದೇಶದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಹೇಳಿದರು. ಅವರು ಪಂಡಿತ್ ಹೌಸ್ ಚುನಾವಣಾ ಕಾರ್ಯಾಲಯದಲ್ಲಿ ಬಿಜೆಪಿ ಮಂಗಳೂರು
ಬಂಟ್ವಾಳ: ಇಲ್ಲಿನ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರ ಪರವಾಗಿ ಚುನಾವಣಾ ಪ್ರಚಾರ ಮಾಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ, ಸ್ಟಾರ್ ಪ್ರಚಾರಕ್ ಆಗಿರುವ ಯೋಗಿ ಆದಿತ್ಯನಾಥ್ ಅವರು ಮೇ.6ರಂದು ಶನಿವಾರ ಬಿ.ಸಿ.ರೋಡಿಗೆ ಆಗಮಿಸಲಿದ್ದು ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದರು. ಅವರು ಗುರುವಾರ ಬಿಜೆಪಿ ಕಚೇರಿಯುಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಸಂಜೆ 4ಗಂಟೆಗೆ ಯೋಗಿಜೀ
ಪಡುಬಿದ್ರೆಯ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ವೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.ಬಳಿಕ ಅವರು ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು. ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಆಗುವ ನಿಟ್ಟಿನಲ್ಲಿ ನನಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ರು. ಈ ವೇಳೆ ಕಾರ್ಯಕರ್ತರು ಸುರೇಶ್ ಶೆಟ್ಟಿ ಜೊತೆಗಿದ್ದರು. ಇದಕ್ಕೂ ಅವರು ಮೊದಲು ಎರ್ಮಾಳ್ ಪರಿಸರ
ರಾಜ್ಯದಲ್ಲಿ ಸಾರ್ವಂತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡಿದೆ, ಆದರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವ ವಿಷಯದಲ್ಲಿ ಎಡವಟ್ಟು ಮಾಡಿಕೊಂಡಂತಿದೆ, ಕಾಂಗ್ರೆಸ್ ಹಿಂದೂ ಕಾರ್ಯಕರ್ತರು ಇಂತಹ ಪ್ರಣಾಳಿಕೆಯಿಂದ ಬೇಸತ್ತು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಕಾಂಗ್ರೆಸ್ ಪಕ್ಷದ ಹಲವಾರು ಕಾರ್ಯಕರ್ತರು ಸ್ಥಳೀಯ ಬಿಜೆಪಿ ಮುಖಂಡರ ನೇತೃತ್ವದಲ್ಲಿ
ಭಾರತೀಯ ಜನತಾ ಪಾರ್ಟಿ, ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಸತೀಶ್ ಕುಂಪಲ ಇವರಿಂದ ಮತಯಾಚನೆ ಕಾರ್ಯಕ್ರಮ. ತೊಕ್ಕೊಟ್ಟು ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟಿನ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿಯೊಂದಿಗೆ ಶ್ರೀ ಸಂತೋಷ್ ಕುಮಾರ್ ರೈ ಬೋಳಿಯರ್, ಶ್ರೀ ಕುಂಟಾರು ರವೀಶ್ ತಂತ್ರಿ, ಶ್ರೀ ರವೀಂದ್ರ ಶೆಟ್ಟಿ ಉಳಿದೊಟ್ಟು ಮತ್ತು ಪಾರ್ಟಿಯ ಇತರ ಜವಾಬ್ದಾರಿಯ ನಾಯಕರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧ ಮಾಡುವ ಪ್ರಸ್ತಾಪದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿದ್ದ ಸಾಮೂಹಿಕ ಹನುಮಾನ್ ಚಾಲಿಸ ಪಠಣ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಪಾಲ್ಗೊಂಡರು. ಬೋಳಾರ ಶ್ರೀ ಹಳೆಕೋಟೆ ಮುಖ್ಯಪ್ರಾಣ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗದಳ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡರು.
ಕಾರ್ಕಳ : ಸಾರ್ವತ್ರಿಕ ಚುನಾವಣೆ ನಡೆಯುವ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ, ಕುಮ್ಮಕ್ಕಿನ ಮೇರೆಗೆ ಅವರ ಅನುಯಾಯಿಗಳು ಪರಸ್ಪರ ದ್ವೇಷ ಭಾವನೆ, ವೈಯಕ್ತಿಕ ನಿಂದನೆ ಮಾಡಿ ಚುನಾವಣಾ ವಾತವರಣವನ್ನು ಕಳುಷಿತಗೊಳಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಕುರಿತು ಕಾರ್ಕಳ ಬಿಜೆಪಿ ಅಧ್ಯಕ್ಷ. ಮಹಾವೀರ ಹೆಗ್ಡೆ ಚುನಾವಣಾಧಿಕಾರಿಗಳಿಗೆ ಮೇ 3ರಂದು ದೂರು ನೀಡಿದ್ದಾರೆ. ಕಾಂಗ್ರೆಸಿನ ಅಭ್ಯರ್ಥಿ ಉದಯ ಶೆಟ್ಟಿಯವರ ಅನುಯಾಯಿಗಳು, ಉದಯ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಬಹಿರಂಗ ಪ್ರಚಾರ ಸಭೆಗೆ ಮುನ್ನುಡಿ ಬರೆದಿದ್ದು, ಈಗಾಗಲೇ ಹಲವಾರು ಯಶಸ್ವಿ ಸಭೆ ನಡೆದಿದೆ. ಪ್ರತಿ ಸಭೆಯಲ್ಲೂ ಸಾವಿರಕ್ಕೂ ಅಧಿಕ ಜನರು ಉಪಸ್ಥಿತರಿರುವ ಮೂಲಕ ಬಿಜೆಪಿ ಪರವಾದ ಸ್ಪಷ್ಟ ವಾತಾವರಣ ಸೃಷ್ಟಿಯಾಗುತ್ತಿದೆ. ಈ ಮಧ್ಯೆ ಬಿಜೆಪಿ ಯಶಸ್ಸು ನೋಡುತ್ತಿರುವ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಜೊತೆಗೆ ಕೈ ಜೋಡಿಸುತ್ತಿದ್ದಾರೆ. ನೆರಿಯದಲ್ಲಿ ನಡೆದ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ
ಮೂಡುಬಿದಿರೆ: ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡಾರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಮತ ಪ್ರಚಾರ ನಡೆಸಿದರು.ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಸಚಿನ್ ಶೆಟ್ಟಿ ಅವರು ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾರ್ಯ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಾರ್ಯ ಶೈಲಿಯನ್ನು ಮೆಚ್ಚಿ ಕೋಟ್ಯಾನ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ವಕೀಲ ಶಾಂತಿಪ್ರಸಾದ್ ಹೆಗ್ಡೆ,ಪಂಚಾಯತ್ ಸದಸ್ಯರುಗಳಾದ
ಇದು ನಮ್ಮ ಕೊನೆಯ ಚುನಾವಣೆ, ರಾಜಕೀಯ ನಿವೃತ್ತಿ ಎಂದು ಜನರ ಬಳಿಕ ಕಾಂಗ್ರೆಸ್ ತೆರಳಿ ಮತಯಾಚನೆ ಮಾಡುತ್ತಿದೆ. ಆಂತಹ ಕಾಂಗ್ರೆಸ್ ನಾಯಕರನ್ನು ತಿರಸ್ಕರಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿನಲ್ಲಿ ಗುಡುಗಿದ್ದಾರೆ. ಅವರು ಮೂಲ್ಕಿಯ ಕೊಳ್ನಾಡುವಿನಲ್ಲಿ ನಡೆದ ಬಿಜೆಪಿಯ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಮ್ಮ ನಾಯಕ ನಿವೃತ್ತಿಯಾಗುತ್ತಿದ್ದಾನೆ. ಅದಕ್ಕಾಗಿ ವೋಟ್ ಕೊಡಿ ಎಂದು ಕಾಂಗ್ರೆಸ್ ಕೇಳುತ್ತಿದೆ.




























