ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಗಂಗೊಳ್ಳಿ ಮತ್ತು ಹೊಸೂರು ಭಾಗದಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಗುರುರಾಜ್ ಗಂಟಿಹೊಳೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬೈಂದೂರಿನ
ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಸ್ಟಾರ್ ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಮೂಲ್ಕಿಗೆ ಆಗಮಿಸುವ ಹಿನ್ನಲೆಯಲ್ಲಿ ಕೋಲ್ನಾಡು ರಾಷ್ಟ್ರೀಯ ಹೆದ್ದಾರಿ ಬಳಿಯ ಜಾಗದಲ್ಲಿ ಇಂದು ಚಪ್ಪರ ಮುಹೂರ್ತ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಧಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕ ಉಮಾನಾಥ
ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿದರು. ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುದೀಂದ್ರ ಸಭಾಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು.
ಬಂಟ್ವಾಳ: ಸಿದ್ದಕಟ್ಟೆ ಚರ್ಚ್ ಬಳಿಯಿಂದ ಪೇಟೆಯವರೆಗೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಬೃಹತ್ ರೋಡ್ ಶೋ ನಡೆಸಿ ಮತಯಾಚನೆಗೈದರು. ಸಹಸ್ರಾರು ಕಾರ್ಯಕರ್ತರೊಂದಿಗೆ ಸಿದ್ದಕಟ್ಟೆಯ ಹೆದ್ದಾರಿಯಲ್ಲಿನ ಪ್ರತಿ ಮಳಿಗೆಗಳು, ರಿಕ್ಷಾಚಾಲಕರು, ಸಾರ್ವಜನಿಕರನ್ನು ಭೇಟಿಯಾಗಿ ಮತಯಾಚಿಸಿದರು. ಬಳಿಕ ಸಿದ್ದಕಟ್ಟೆ ಜಂಕ್ಷನ್ ನಲ್ಲಿ ಸಾರ್ವಜನಿಕ ನಡೆದ ಸಭೆಯನ್ನು ದ್ದೇಶಿಸಿ ಕೇರಳ ರಾಜ್ಯ ಬಿಜೆಪಿ ಖಜಾಂಚಿ ಕೃಷ್ಣದಾಸ್ ಅವರು ಮಾತನಾಡಿ,
ಚುನಾವಣೆ ದಿನಾಂಕ ಸಮೀಪಿಸುತ್ತಿದ್ದಂತೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಕಾವು ಏರತೊಡಗಿದೆ. ಒಂದು ಕಡೆಯಿಂದ ಬಿಸಿಲಿನ ತಾಪ. ಇನ್ನೊಂದು ಕಡೆಯಿಂದ ಚುನಾವಣಾ ಪ್ರಚಾರದ ಕಾವು ಈ ಮಧ್ಯದಲ್ಲಿ ಬಿಜೆಪಿ ಅಭ್ಯರ್ಥಿಯಾದ ವಿ. ಸುನಿಲ್ ಕುಮಾರ್ ಅವರು ಮುಡಾರು ಗ್ರಾಮದ ಬಜೆಗೂಳಿಯಲ್ಲಿ ಪಾದಯಾತ್ರೆ ಮೂಲಕ ಮನೆಗಳಿಗೆ ಹಾಗೂ ಅಂಗಡಿ ಹೋಟೆಲ್ ಗಳಿಗೆ ಮತ್ತು ಗೇರು ಬೀಜದ ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ಬಳಿ ತಮ್ಮ ಅವಧಿಯಲ್ಲಿ ಆದ ಯೋಜನೆಗಳನ್ನು ಮನದಟ್ಟು ಮಾಡಿ ಇನ್ನು
ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಕಂಡ್ಲೂರಿನ ಸುತ್ತಮುತ್ತಲಿನಲ್ಲಿ ಪ್ರದೇಶಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗುರುರಾಜ್ ಗಂಟಿಹೊಳೆಯವರು ಈ ಬಾರಿ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳನ್ನಾಗಿ ಪಕ್ಷದವರು ಟಿಕೆಟ್ ನೀಡಿದ್ದಾರೆ. ಈ ಬಾರಿ ಬಿಜೆಪಿ ಪಕ್ಷವನ್ನು ಬೆಂಬಲಿಸಿಬೇಕೆಂದು ಹೇಳಿದರು.
ಮೂಲ್ಕಿ: “ಕಳೆದ 5 ವರ್ಷಗಳ ಹಿಂದೆ ನಾನು ಮೊದಲ ಬಾರಿಗೆ ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದೆ. ಇದಕ್ಕೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಶ್ರಮವೇ ಕಾರಣ. ವಿವಿಧ ಇಲಾಖೆಗಳಿಂದ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶ್ರಮಿಸಿದ್ದೇನೆ. ಹೀಗಾಗಿ ಮತ ಯಾಚನೆಗೆ ಮನೆ ಮನೆಗೆ ಹೋದಾಗ ಬಹಳ ಒಳ್ಳೆಯ ಸ್ಪಂದನೆ ಜನರಿಂದ ಸಿಗುತ್ತಿದೆ. ಮೇ 3ರಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮೂಲ್ಕಿಗೆ ಬರಲಿದ್ದಾರೆ. ಇಲ್ಲಿಯವರೆಗೆ
ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಜೊತೆಗಿದ್ದರು.
ಪುತ್ತೂರು; ದೇಶದಲ್ಲಿರುವ ಲೋಕತಂತ್ರ ವ್ಯವಸ್ಥೆಯಲ್ಲಿ ಯಾರು ಯಾವ ಪಕ್ಷವನ್ನೂ ಸೇರಬಹುದು. ಆದರೆ ಬಿಜೆಪಿಗೆ ಎದುರಾಳಿಗಳು ಯಾರೆಂಬುವುದು ಲೆಕ್ಕವಲ್ಲ. ಜನರ ವಿಶ್ವಾಸವೇ ನಮ್ಮ ಶಕ್ತಿಯಾಗಿದೆ. ಪಕ್ಷ ಸಿದ್ಧಾಂತಕ್ಕೆ ಬದ್ಧರಾದವರು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಡಾ.ಭಾರತಿ ಪವಾರ್ ಹೇಳಿದರು. ಅವರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ, ಜನಾರೋಗ್ಯ ಕಾಪಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು.
ಬಂಟ್ವಾಳ: ರಾಜೇಶ್ ನಾಯ್ಕ ಅವರು ಬಂಟ್ವಾಳ ಶಾಸಕರಾದ ಮೇಲೆ ಗಲಭೆಗಳಾಗಿಲ್ಲ. ಅದಕ್ಕೆ ಸಂಬಂಧಿಸಿ ಸೆಕ್ಷನ್, ಕರ್ಪೂ, ನಿಷೇಧಾಜ್ಞೆಗಳನ್ನು ವಿಧಿಸಲಾಗಿಲ್ಲ. ಎಲ್ಲೂ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಅವರು ಶಾಸಕರಾದ ಮೇಲೆ ಶಾಂತಿ, ಸುವ್ಯವಸ್ಥೆ ನೆಲೆಸಿದ್ದು, ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳೂ ಆಗಿವೆ. ಹೀಗಾಗಿ ಮುಂಬರುವ ಚುನಾವಣೆಯಲ್ಲೂ ಅವರೇ ಶಾಸಕರಾಗಿ ಆಯ್ಕೆಯಾಗಬೇಕು ಎಂದು ಕೇರಳ ರಾಜ್ಯ ಬಿಜೆಪಿ ಖಜಾಂಚಿ ಕೃಷ್ಣದಾಸ್ ಹೇಳಿದರು. ಬಂಟ್ವಾಳದ ಬಿಜೆಪಿ




























