ಮಂಗಳೂರು: ಈ ಬಾರಿ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಶತಸ್ಸಿದ್ಧ. ಮಂಗಳೂರು ಕ್ಷೇತ್ರವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಎಂಟೂ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲುವುದು ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಂಗಳೂರು ಕ್ಷೇತ್ರದ ಪ್ರಭಾರಿ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಬಿಜೆಪಿಯ ಮಂಗಳೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ಇಂದು
ಉಳ್ಳಾಲ: ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಪಕ್ಷದ ಆದೇಶದಂತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದರೂ ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ, ಪಕ್ಷಕ್ಕಾಗಿ ದುಡಿಯುವ ಕಾರ್ಯವನ್ನು ಹಿಂದಿನಿಂದ ಮಾಡುತ್ತಾ ಬಂದಿದ್ದೇವೆ, ಅಭ್ಯರ್ಥಿಯಾಗಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ. ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಜಿ.ಪಂ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಅವರಿಗೆ ಪಕ್ಷ ಅವಕಾಶ ನೀಡಿದ ಹಿನ್ನಲೆಯಲ್ಲಿ ಎ.12 ರಂದು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ದಂಪತಿ ಮಹಾಲಿಂಗೇಶ್ವರ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಬಳಿಕ ಅವರು ಡಾ.ಎಂ.ಕೆ ಪ್ರಸಾದ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ಬೈಂದೂರು: ಬಿಜೆಪಿಯ ಬೈಂದೂರು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿಯವರಿಗೆ ಮುಂದಿನ ಚುನಾವಣೆಯಲ್ಲಿ ಸೀಟು ತಪ್ಪಿರುವ ವಿಚಾರ ತಿಳಿದ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ ಮಂಗಳವಾರ ರಾತ್ರಿ ಬಿ.ಎಂ. ಸುಕುಮಾರ ಶೆಟ್ಟಿಯವರಿಗೆ ಸೀಟು ಸಿಕ್ಕಿಲ್ಲ ಎನ್ನುವ ಮಾಹಿತಿ ಖಚಿತಗೊಳ್ಳುತ್ತಿದ್ದಂತೆ ಶಾಸಕರ ಮನೆ ಮುಂದೆ ತಂಡೋಪತಂಡವಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಶಾಸಕರ ಅಭಿಮಾನಿಗಳು ಜಮಾಯಿಸಿದರು. ಸುಮಾರು ಐನೂರಕ್ಕೂ ಹೆಚ್ಚು
ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರರು, ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ
ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ನಿವೃತ್ತರಾಗಿದ್ದಾರೆ.ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ ಎಂದಿದ್ದಾರೆ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ
ಸುಬ್ರಹ್ಮಣ್ಯ: ಚುನಾವಣೆಗೆ ಸಂಬಂಧಿಸಿದಂತೆ ದಿನಾಂಕ ನಿಗಧಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಕೆಲಸ ಕಾರ್ಯಗಳನ್ನು ಆರಂಭಿಸಲಾಗಿದೆ. ಅಭ್ಯರ್ಥಿ ಆಯ್ಕೆ ಮಾಡಿ ಇನ್ನು ನಿರ್ಧಾರ ಹೈಕಮಾಂಡ್ ಗೆ ಕಳುಹಿಸಬೇಕಿದೆ. ಆದರೆ ಅಭ್ಯರ್ಥಿ ಆಯ್ಕೆಯಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.ಅವರು ರವಿವಾರ ಕುಕ್ಕೆ ಶ್ರೀ
ಈ ಬಾರಿಯ ವಿಧಾನಸಭೆ ಚುನಾವಣೆಗೆ ನಾನು ಯಾವುದೇ ಕ್ಷೇತ್ರದಿಂದಲೂ ಟಿಕೇಟ್ ಆಕಾಂಕ್ಷಿಯಾಗಿರುವುದಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್.ಗಣೇಶ್ ಕಾರ್ಣಿಕ್ ಅವರು ತಿಳಿಸಿದ್ದಾರೆ. ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಗಣೇಶ್ ಕಾರ್ಣಿಕ್ ಅವರ ಹೆಸರು ಇದೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಸುದ್ಧಿಗೆ ಅವರು ಪತ್ರಿಕ್ರಿಯಿಸಿ ನಾನು ಯಾವುದೇ ಕ್ಷೇತ್ರದಿಂದಲೂ ಟಿಕೆಟ್ ಆಕಾಂಕ್ಷಿಯಾಗಿರುವುದಿಲ್ಲ ಎಂದು ಸ್ವಷ್ಟಪಡಿಸಿದರು
ಶಾಸಕ ಹರೀಶ್ ಪೂಂಜ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಚುರಪಡಿಸುವ ” ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಂ ಸಾಂಗ್ ನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿದರು. ಎಪಿಕೆ ಕ್ರಿಯೆಶನ್ಸ್ ಬ್ಯಾನರ್ ಅಡಿಯಲ್ಲಿ ಅಜಿತ್ ಪೂಜಾರಿ ಕನ್ಯಾಡಿ ರಾಗಸಂಯೋಜನೆ ಮಾಡಿ ಈ ಹಾಡನ್ನು ಹಾಡಿದ್ದಾರೆ. ನಿಧೀಶ್ ಶೆಟ್ಟಿ ಕನ್ಯಾಡಿ, ನವೀನ್ ಸುವರ್ಣ ಕನ್ಯಾಡಿ, ಅವಿನಾಶ ಶೆಟ್ಟಿ ಕನ್ಯಾಡಿ,ಸಹನ್ ಉಜಿರೆ, ರಾಘವೇಂದ್ರ ಗೌಡ ಕೊಂಕ್ರೋಟ್ಟು, ಅಶೋಕ್ ಬಂಗೇರ
ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿಯಾಗಿದ್ದು, ಕಾಂಗ್ರೆಸ್‍ನ 29 ಶಾಸಕರು ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿದ್ದಾರೆ. ಅವರಲ್ಲಿ 13 ಜನರು ಈಗಾಗಲೇ ಕೆಪಿಸಿಸಿ ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಪಡೆದಿದ್ದಾರೆ. ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು ಈ ಬಗ್ಗೆ ಸ್ಪಷ್ಟನೆ ನೀಡಲಿ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ವಕ್ತಾರ ಎಂ.ಜಿ. ಮಹೇಶ್ ಸವಾಲೆಸೆದರು. ನಗರದಲ್ಲಿ




























