KARKALA : ಜನಪ್ರತಿನಿಧಿಯಾಗಿ ಕ್ಷೇತ್ರದ ಅಭಿವೃದ್ದಿಯ ರಿಪೋರ್ಟ್ ಕಾರ್ಡ್ ನೀಡುವುದು ನನ್ನ ಜವಾಬ್ದಾರಿ ಯಾಗಿದೆ. ಅಭಿವೃದ್ಧಿಗೆ ಹೊಸ ಸ್ಪರ್ಷ ನೀಡಿ ಸ್ವರ್ಣ ಕಾರ್ಕಳ ಪರಿಕಲ್ಪಯು ಈಡೇರುತ್ತಿದೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳ ಕುಕ್ಕುಂದೂರು ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆದ ಕ್ಷೇತ್ರದ ಸಾಧನೆಯ
ಮೂಡುಬಿದಿರೆ: ಸಂಸ್ಕೃತಿ, ಪರಂಪರೆ, ಇತಿಹಾಸ ಇವೆಲ್ಲದಕ್ಕೂ ಮಾದರಿಯಾಗಿ ಭಾರತ ಮೆರೆಯುತ್ತಿದೆ. ಕಾಂಗ್ರೆಸ್‍ನದ್ದು ವಿದೇಶಿ ಸಿದ್ದಾಂತ. ರಾಷ್ಟ್ರೀಯತೆಯನ್ನು ಮರೆತು ವಿದೇಶಿ ಸಂಸ್ಕೃತಿಯೊಂದಿಗೆ ಕಾಂಗ್ರೆಸ್ ಸಾಗಿ ಬಂದಿರುವುದರಿಂದ ಇಂದು ನೆಲಕಚ್ಚಿದೆ. ಅಭಿವೃದ್ಧಿಯ ಜೊತೆಗೆ ರಾಷ್ಟ್ರೀಯತೆ ಮೌಲ್ಯಗಳ ಸಿದ್ಧಾಂತಕ್ಕೆ ಅನುಗುಣವಾಗಿ ಮುನ್ನಡೆಯುತ್ತಿರುವ ಬಿಜೆಪಿ ಇಂದು ವಿಶ್ವದಲ್ಲೇ ನಂ.1 ಪಕ್ಷಗಾಗಿ ಗುರುತಿಸಿಕೊಂಡಿದೆ ಎಂದು ಬಿಜೆಪಿ ದ.ಕ ಜಿಲ್ಲಾಧ್ಯಕ್ಷ
ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಎಸ್.ಸಿ ಮತ್ತು ಎಸ್.ಟಿ ಸಮಾವೇಶ ಬೈಂದೂರು ಮಂಡಲದ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಿದರು ಈ ಸಂದರ್ಭದಲ್ಲಿ ವೇದಿಕೆಯಲ್ಲಿ sc ಮೋರ್ಚಾ ರಾಜ್ಯ ಕಾರ್ಯದರ್ಶಿ ಮಹೇಂದ್ರ ಕೌತಲ, ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್,ರಾಜ್ಯ sc ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಜಿಲ್ಲಾ ಪ್ರಧಾನ
`ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲಡಿ ಹಾಕಿ ತುಳಿಯುತ್ತಾರೆ’ ಎಂದು ಶಾಸಕ ಡಾ| ಭರತ್ ಶೆಟ್ಟಿ ಅವರು ಹೇಳಿದ್ದಾರೆ. ಇದು ಸತ್ಯವೇ ಆಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಅಥವಾ ದರ್ಗಾದಲ್ಲಿ ಆಣೆ ಮಾಡಲಿ, ನಾನು ಬರುತ್ತೇನೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ಶಾಸಕ ಭರತ್ ಶೆಟ್ಟಿಯವರಿಗೆ ಆಹ್ವಾನ ನೀಡಿದ್ದಾರೆ. ಮಂಗಳವಾರ ನಗರ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಬಾಲ್ಯದಲ್ಲಿ ಹೆತ್ತವರು ಸಂಸ್ಕಾರ
ಪಣಂಬೂರು : ಅಂತರಾಷ್ಟ್ರೀಯ ಮಟ್ಟದ ಸೌಕರ್ಯವನ್ನು ಪಣಂಬೂರು ಬೀಚ್‍ನಲ್ಲಿ ಬರುವ ಪ್ರವಾಸಿಗರಿಗೆ ನೀಡುವ ಸಲುವಾಗಿ ಸರಕಾರಿ ಖಾಸಗೀ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ನುಡಿದರು. ಸೋಮವಾರ ಸಂಜೆ 7.5 ಕೋಟಿ ರೂ.ವೆಚ್ಚದಲ್ಲಿ ಪಣಂಬೂರು ಬೀಚ್ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.ಮಂಗಳೂರು ಉತ್ತರ ಕ್ಷೇತ್ರವು ದೊಡ್ಡದಾದ ಬೀಚ್ ಅನ್ನು ಹೊಂದಿದೆ. ಪಣಂಬೂರು ಬೀಚ್ ಅಂತರಾಷ್ಟ್ರೀಯ
ಮಂಗಳೂರು: ರಾಜ್ಯದಿಂದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯು ನಾಲ್ಕು ತಂಡಗಳ ನೇತೃತ್ವದಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳನ್ನು ಪ್ರವೇಶಿಸಿ ರೋಡ್ ಶೋ, ಸಭೆಗಳನ್ನು ನಡೆಸುತ್ತಿದೆ. ಆರ್.ಅಶೋಕ್ ಹಾಗೂ ಕೆ.ಎಸ್.ಈಶ್ವರಪ್ಪ ನೇತೃತ್ವದ ತಂಡವು ಮುನ್ನಡೆಸುತ್ತಿರುವ ವಿಜಯ ಸಂಕಲ್ಪ ಯಾತ್ರೆಯು ಮಾ.11-13ರವರೆಗೆ ದ.ಕ.ಜಿಲ್ಲೆಯಲ್ಲಿದ್ದು ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ ನಡೆಸಲಿದೆ ಎಂದು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ
ಸುರತ್ಕಲ್: ಇಲ್ಲಿನ ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿ ಬಿಜೆಪಿ ಕಾರ್ಪೋರೇಟರ್ ಒಬ್ಬರ ಮೇಲೆ ಯುವಕನೊಬ್ಬ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ:ಬಿಜೆಪಿ ಕಾರ್ಪೋರೇಟರ್ ಲೋಕೇಶ್ ಬೊಳ್ಳಾಜೆ ಎಂಬವರು ದೂರಿದ್ದು ಅದರಲ್ಲಿ ಸ್ಥಳೀಯ ನಿವಾಸಿ ಗಣೇಶ್ ದೇವಾಡಿಗ ಎಂಬವನನ್ನು ಆರೋಪಿ ಎಂದು ಹೆಸರಿಸಲಾಗಿದೆ. ಕಾಟಿಪಳ್ಳದಲ್ಲಿ ಸೇವಾ ಚಾರಿಟೇಬಲ್ ಟ್ರಸ್ಟ್ ಕಟ್ಟಿಕೊಂಡಿರುವ ಎ.ಪಿ.
ಪುತ್ತೂರು: ಕೇವಲ ಅಧಿಕಾರ ಗದ್ದುಗೆಯ ಉದ್ದೇಶ ಇಟ್ಟುಕೊಂಡು ಬಿಜೆಪಿ ಪಕ್ಷ ಸ್ಥಾಪನೆಯಾಗಿಲ್ಲ. ಇದಕ್ಕೆ ಹೊರತಾಗಿ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿರುವ ಏಕೈಕ ಪಕ್ಷ ಇದ್ದರೆ ಅದು ಬಿಜೆಪಿ ಪಕ್ಷ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು.ಅವರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬಿಜೆಪಿ ಎಸ್‍ಟಿ ಮೋರ್ಚಾದ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.ಸಾಮಾಜಿಕ ನ್ಯಾಯ ನೀಡಲು ಪೂರಕವಾಗಿ
ಉಳ್ಳಾಲ: ಒಂದು ರಸ್ತೆ, ಒಂದೇ ಅನುದಾನ, ಆದರೆ ಉದ್ಘಾ ಟನೆ ಮಾತ್ರ ಎರಡು ದಿನ! ಹೀಗೊಂದು ವಿಲಕ್ಷಣ ಪ್ರಕರಣ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ರಸ್ತೆ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಕೋಟೆಕಾರ್ ಪಟ್ಟಣ ಪಂಚಾ ಯತ್ ವ್ಯಾಪ್ತಿಯಲ್ಲಿರುವ ಕುಂಪಲ ಬೈಪಾಸ್‌ನಿಂದ ಬಗಂಬಿಲ ಮೂಲಕ ಯೇನಪೋಯ ಆಸ್ಪತ್ರೆಯನ್ನು ಸಂಪರ್ಕಿಸುವ ರಸ್ತೆ ಬಹುತೇಕ ಕಾಂಕ್ರೀಟ್‌ನಿಂದ ಕೂಡಿದೆ. ಈ ರಸ್ತೆಗೆ ವಿವಿಧ ಹಂತದಲ್ಲಿ ಸರಕಾರದಿಂದ
ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಪ್ರಯುಕ್ತ ಕಾರ್ಕಳದಲ್ಲಿ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಂಡರು. ಕಾರ್ಕಳದ ಅನಂತಶಯನ ವೃತ್ತದಿಂದ ಅಜೇಕಾರ್ ವರೆಗೆ ಬೃಹತ್ ಬೈಕ್ ರ್‍ಯಾಲಿ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುಮಾಕೇಶವ್ ರ್‍ಯಾಲಿಗೆ ಚಾಲನೆ ನೀಡಿದರು. ಸಚಿವರಾದ ವಿ. ಸುನಿಲ್ ಕುಮಾರ್ ಸೇರಿದಂತೆ ಸುಮಾರು 2000 ಬೈಕುಗಳು ಈ ರ್ಯಾಲಿಯಲ್ಲಿ ಪಾಲ್ಗೊಂಡಿದ್ದವು.




























