Home Posts tagged #bjp (Page 2)

ಸಿಕ್ಕಿಂನಲ್ಲಿ ಎಸ್‌ಕೆಎಂ, ರಾಷ್ಟ್ರೀಯ ಪಕ್ಷಗಳು ಔಟ್:ಅರುಣಾಚಲ ಪ್ರದೇಶ ಮತ್ತೆ ಬಿಜೆಪಿ ಕೈವಶ

ವಿಧಾನ ಸಭಾ ಚುನಾವಣೆಯಲ್ಲಿ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮತ್ತು ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಎರಡನೆಯ ಬಾರಿ ಅಧಿಕಾರದ ಗದ್ದುಗೆಗೆ ಏರಿವೆ. ಎಸ್‌ಕೆಎಂ- ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾವು ಎರಡನೆಯ ಬಾರಿ ಏಕೈಕ ಪಕ್ಷವಾಗಿ ಅಧಿಕಾರಕ್ಕೆ ಏರಿದೆ. ಅದು ವಿಧಾನ ಸಭೆಯ 32ರಲ್ಲಿ 31 ಸ್ಥಾನ ಗೆದ್ದುಕೊಂಡಿತು. ರಾಷ್ಟ್ರೀಯ ಪಕ್ಷಗಳಿಗೆ ಸಿಕ್ಕಿಂ ಮಣೆ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿಲ್ಲ, ಅಲ್ಟ್ರಾ ಎಕ್ಸ್ಟ್ರೀಮ್ ಎಡಪಂಥೀಯರು ಆಡಳಿತ ನಡೆಸುತ್ತಿದ್ದಾರೆ : ಉಡುಪಿಯಲ್ಲಿ ಬಿ.ಎಲ್ ಸಂತೋಷ್ ಆರೋಪ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿಲ್ಲ. ಅಲ್ಟ್ರಾ ಎಕ್ಸ್ಟ್ರೀಮ್ ಎಡಪಂಥೀಯರು ಆಡಳಿತ ನಡೆಸುತ್ತಿದ್ದಾರೆ. ರಾಜ್ಯ ಶಿಕ್ಷಣ ನೀತಿ ಅನುಷ್ಠಾನ ಸಮಿತಿಯಲ್ಲಿ ಹಿಂದು ವಿರೋಧಿಗಳನ್ನೇ ತುಂಬಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ ಹೋಟೆಲ್ ಕಿದಿಯೂರಿನ ಮಾಧವ ಕೃಷ್ಣ ಸಭಾಂಗಣದಲ್ಲಿ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ

ಕಾಂಗ್ರೆಸ್ ದುರಾಡಳಿತದಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ : ವಿಧಾನ ಪರಿಷತ್ ಸದಸ್ಯ ಪ್ರತಾಪ್‍ಸಿಂಹ ನಾಯಕ್ ಹೇಳಿಕೆ

ಬಂಟ್ವಾಳ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದ್ದು ಮುಂದೆ ನಡೆಯುವ ವಿಧಾನ ಪರಿಷತ್ ಚುನಾವಣೆ ಸರಕಾರದ ಬಗ್ಗೆ ಜನಾಭಿಪ್ರಾಯ ತಿಳಿಸುವ ಚುನಾವಣೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ವ್ಯಾಖ್ಯಾನಿಸಿದರು. ಅವರು ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾಂಗ್ರೆಸ್‍ನ ಚುನಾವಣೆಯ ಮೌಲ್ಯಮಾಪನವನ್ನು ಮಾಡಲಿದ್ದು

ಗರಿಷ್ಠ ಪ್ರಮಾಣದ ಮತದಾನದೊಂದಿಗೆ ಅಭ್ಯರ್ಥಿಗಳ ಗೆಲುವು ನಮ್ಮದಾಗಬೇಕು: ದ.ಕ. ಜಿಲ್ಲಾ ಚುನಾವಣಾ ಸಂಚಾಲಕ ಪ್ರತಾಪ್ ಸಿಂಹ ನಾಯಕ್ ಹೇಳಿಕೆ

ಪುತ್ತೂರು: ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲೆಯಲ್ಲಿ ವಿಶೇಷ ಗಮನಕ್ಕೆ ಪಕ್ಷದ ರಾಜ್ಯಾಧ್ಯಕ್ಷರು ಸೂಚಿಸಿದ್ದಾರೆ. ಗರಿಷ್ಠ ಪ್ರಮಾಣದ ಮತದಾನದೊಂದಿಗೆ ಎರಡೂ ಅಭ್ಯರ್ಥಿಗಳ ಗೆಲುವು ನಮ್ಮದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ, ಶಿಕ್ಷಕರ ಕ್ಷೇತ್ರದ ದ.ಕ. ಜಿಲ್ಲಾ ಚುನಾವಣಾ ಸಂಚಾಲಕ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಪುತ್ತೂರಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ನೈರುತ್ಯ ಪದವೀಧರ ಮತ್ತು

ಪುತ್ತೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ – ಪ್ರತಾಪ ಸಿಂಹ ನಾಯಕ್ ವಿಶ್ವಾಸ

ಪುತ್ತೂರು: ರಾಜ್ಯ ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯುವ ಚುನಾವಣೆಯಲ್ಲಿ ಎಲ್ಲ ಆರು ಸ್ಥಾನಗಳಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಲಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಬಂಡಾಯವಿದ್ದರೂ, ಬಿಜೆಪಿಯಂಥ ರಾಷ್ಟ್ರೀಯ ಪಕ್ಷದ ಸಂಘಟನಾ ಸಾಮರ್ಥ್ಯದ ಎದುರು ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡರೂ, ವಿಧಾನ ಪರಿಷತ್ ಸದಸ್ಯರೂ ಆದ ಪ್ರತಾಪ ಸಿಂಹ ನಾಯಕ್ ಹೇಳಿದರು.

ಬಿಜೆಪಿಯವರೇ ಕಾಂಗ್ರೆಸ್ ಸರ್ಕಾರದ ಟಾರ್ಗೆಟ್ ಯಾಕೆ: ಭರತ್ ಶೆಟ್ಟಿ ಪ್ರಶ್ನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತನ ಪರವಾಗಿ ಹೋಗಿದ್ದಾರೆ. ಯಾವುದೇ ಕಾನೂನು ಉಲ್ಲಂಘನೆಯಂತಹ ಕೆಲಸ ಮಾಡದೆ ಇದ್ದರೂ ಕಾಂಗ್ರೆಸ್ ಸರಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಸುಳ್ಳು ಕೇಸು ಹಾಕಿಸಿ ದ್ವೇಷವಸಾಧನೆಯ ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕರನ್ನು ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಪಕ್ಷದ ಶಕ್ತಿ ಕುಂದಿಸುವ ಕೆಲಸ ಮಾಡುವುದನ್ನು ಬಿಡಿ. ನಿಮ್ಮ ಆಡಳಿತ ಶಾಶ್ವತ ಅಲ್ಲ, ನಮ್ಮ ಶಾಸಕರನ್ನು, ಕಾರ್ಯಕರ್ತರನ್ನು ಬಂಧನದ ಸಾಧನೆ

ಬೈಂದೂರಿನಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದ ಬೃಹತ್ ಸಮಾವೇಶ

ಬೈಂದೂರು : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶವು ತೆಗ್ಗರ್ಸೆಯ ಗುಡ್ಡೆಯಂಗಡಿ ಫಾರ್ಮ್ ಹೌಸ್ ನಡೆಯಿತು. ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ಶೃತಿ ಅವರು, ಎಸ್‌ಟಿ ಮೋರ್ಚಾದ ಬೃಹತ್ ಸಮಾವೇಶ ಉದ್ಘಾಟಿಸಿ, ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಸಂಸತ್‌ಗೆ ಕಳುಹಿಸುವ ಕೆಲಸ ನಿಮ್ಮದು ಎಂದರು. ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತದ

ಬೈಂದೂರು : ನಾರಿ ಶಕ್ತಿ ಮಹಿಳಾ ಸಮಾವೇಶ

ಬೈಂದೂರು ವಿಧಾನ ಸಭಾ ಕ್ಷೇತ್ರದ ಕಿರಿ ಮಂಜೇಶ್ವರದಲ್ಲಿ ನಾರಿ ಶಕ್ತಿ ಮಹಿಳಾ ಸಮಾವೇಶ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಮಾತನಾಡಿ, ಮಹಿಳೆಯರ ಕಲ್ಯಾಣಕ್ಕಾಗಿ ಮೋದಿ ಸರಕಾರ ಶೇಕಡಾ 33% ಮೀಸಲಾತಿಯನ್ನು ನೀಡಿದೆ. ಯಡಿಯೂರಪ್ಪ ಸರ್ಕಾರ ಕರ್ನಾಟಕ ರಾಜ್ಯದಲ್ಲಿ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ನಲ್ಲಿ ಶೇಕಡಾ 50% ಮೀಸಲಾತಿ ನೀಡುವುದರ ಮೂಲಕ ಮಹಿಳೆಯರ ಪರ

ಕರಾವಳಿ ಯಾವತ್ತೂ ಭಾಗದಲ್ಲಿ ಜಾತಿ ರಾಜಕಾರಣ ನಡೆಯುದಿಲ್ಲ : ಗುರ್ಮೆ ಸುರೇಶ್ ಶೆಟ್ಟಿ

ನಾವು ಯಾರೂ ಅರ್ಜಿ ಹಾಕಿ ಯಾವುದೇ ಜಾತಿಯಲ್ಲಿ ಹುಟ್ಟಿದವರಲ್ಲ, ನಾವು ಬರ ಬರುತ್ತಾ..ವಿಶಾಲತೆ ಮೈಗೂಡಿಸಿಕೊಳ್ಳ ಬೇಕಾಗಿದ್ದು ಸಂಕುಚಿತ ಭಾವನೆಯಿಂದ ಹೊರ ಬರ ಬೇಕಾಗಿದೆ ಎಂಬುದಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಅವರು ಕಾಪು ಬಿಜೆಪಿ ಕಛೇರಿಯಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಜಾತಿ ಮೇಲಾಟ ಮೇಲೈಸಬಹುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದಾರೆ. ಜನ ಜಾತಿ ನೋಡಿ ಮತ ಚಲಾಯಿಸಿದ್ದರೆ ನಾನು ಶಾಸಕನಾಗಿ

ಮಂಗಳೂರಿಗೆ ಮೋದಿ: ತರಾತುರಿಯಲ್ಲಿ ರಸ್ತೆಗೆ ತೇಪೆ ಕಾರ್ಯ

2024 ಲೋಕಸಭಾ ಚುನಾವಣೆ ನಿಮ್ಮಿತ್ತ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ ೧೪ರಂದು ಮಂಗಳೂರಿಗೆ ಆಗಮಿಸಲ್ಲಿದ್ದು, ಮಂಗಳೂರು ನಗರವನ್ನು ಸ್ವಚ್ಚ ಹಾಗೂ ಸುಂದರಗೊಳಿಸುವ ಕೆಲಸಗಳು ತರಾತುರಿಯಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಏಪ್ರಿಲ್ 14ರಂದು ನಗರಕ್ಕೆ ಆಗಮಿಸಲಿದ್ದು ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ರೋಡ್ ಶೋ