ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪೋಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯನ್ನು ಆಕ್ರೋಶಿತರು ಧ್ವಂಸಗೊಳಿಸಿದ ಘಟನೆ ನಡೆದಿದೆ. ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬೆಳ್ಳಾರೆ ಮೂಲದ ಶಫೀಕ್ ಬಂಧಿತನಾಗಿದ್ದಾನೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಆಕ್ರೋಶಿತರಾದ ಕೆಲವರು ಆತ ಕೆಲಸ
ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ.ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೆÇಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆ ಬಂಧಿತ ಆರೋಪಿಗಳಾಗಿದ್ದಾರೆ.
ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಗೆ ಬಿಜೆಪಿ ಸರಕಾರದ ದುರಾಡಳಿತ ಹಾಗೂ ಮತೀಯವಾದಿ ನೀತಿಗಳೇ ನೇರ ಕಾರಣ. ಬಿಜೆಪಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಪೂರ್ತಿ ಕುಸಿದಿದ್ದು, ಕೋಮುವಾದಿ ಸಂಘಟನೆಗಳು ಅಂಕೆ ಮೀರಿ ವರ್ತಿಸುತ್ತಿವೆ. ಬೆಳ್ಳಾರೆಯಲ್ಲಿ ನಡೆದಿರುವ ಮಸೂದ್ ಹಾಗೂ ಪ್ರವೀಣ್ ನೆಟ್ಟಾರ್ ಕೊಲೆಗಳು ಮತೀಯ ಸಂಘರ್ಷ ಭುಗಿಳೇಲುವ ಭೀತಿಗೆ ಕಾರಣವಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಈಗಲಾದರು ಎಚ್ಚೆತ್ತುಕೊಂಡು ತಮ್ಮ ಪರಿವಾರವೂ ಸೇರಿದಂತೆ
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆಯಾಗಿದೆ. ಬೆಳ್ಳಾರೆಯ ನೆಟ್ಟಾರು ನಿವಾಸಿ 32 ವರ್ಷದ ಪ್ರವೀಣ್ ನೆಟ್ಟಾರು ಎಂಬಾತನನ್ನು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಇಟ್ಟುಕೊಂಡಿದ್ದ ಪ್ರವೀಣ್ ತನ್ನ ಅಂಗಡಿಯನ್ನು ಬಂದ್ ಮಾಡುವ ವೇಳೆಗೆ ಒಂದೇ ಬೈಕ್ ನಲ್ಲಿ ಆಗಮಿಸಿದ ಮೂವರು ತಲ್ವಾರ್ ನಿಂದ ಹಲ್ಲೆ ಮಾಡಿ ಹೋಗಿದ್ದಾರೆ. ತಕ್ಷಣ ಸ್ಥಳೀಯರು ಪ್ರವೀಣ್
ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ವಿರುದ್ಧ ಧ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಕ್ಲಾಕ್ ಟವರ್‍ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ನಗರದ ಮಿನಿ ವಿಧಾನಸೌಧದ ಬಳಿ ನಡೆದ ಪ್ರತಿಭಟನೆಯಲ್ಲಿ ನಡೆಯಿತ್ತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿ, ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಜನರಿಗೆ ಮೋಸ ಮಾಡುತ್ತಿದೆ. ಜನರಿಗೆ ಅಲ್ಪ ಅವಧಿಯ ಸೇವೆಯನ್ನ ನೀಡುವ ಉದ್ದೇಶ ಏನೂ ಎಂದು ಪ್ರಶ್ನೆ ಮಾಡಿದರು. ದೇಶದಲ್ಲಿ ಅಗ್ನಿಪಥ್ ಯೋಜನೆಯನ್ನು
ಮೂಡುಬಿದಿರೆ : ಭಾರತೀಯ ಜನತಾಪಾರ್ಟಿ ಯುವಮೋರ್ಚಾ ಮೂಲ್ಕಿ ಮೂಡುಬಿದಿರೆ ಮಂಡಲದ ವತಿಯಿಂದ ದರೆಗುಡ್ಡೆಯ ಸಿರಿಸಂಪದ ಫಾರ್ಮ್ನಲ್ಲಿ ಜು.3ರಂದು ಕೆಸರ್‍ಡೊಂಜಿ ಕಮಲದಿನ ಎಂಬ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಮಂಡಲಾಧ್ಯಕ್ಷ ಸುನಿಲ್ ಆಳ್ವ ತಿಳಿಸಿದರು. ಬಿಜೆಪಿ ಕಛೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಪಕ್ಷ ಸಂಘಟನೆ, ಬಲವರ್ಧನೆ ಹಾಗೂ ಕಾರ್ಯಕರ್ತರಲ್ಲಿ ಬಾಂಧವ್ಯ ವೃದ್ಧಿಸುವ
ಕಾಪು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳೂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಬಂಡಾಯದ ಬಿಸಿ ಬಿಜೆಪಿಯನ್ನು ಸುಡಲಿದೆಯೇ ಎಂಬ ಆತಂಕ ಬಿಜೆಪಿ ಪಾಳಾಯದಲ್ಲಿ ಮೂಡಿದೆ.ನಾಮಪತ್ರ ಸಲ್ಲಿಕೆಗೆ ಡಿ.15 ಅಂತಿಮ ದಿನವಾಗಿದ್ದು, ಇದೀಗ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆಗೊಳಿಸುತ್ತಿರುವಂತೆ, ಟಿಕೇಟ್ ವಂಚಿತರು ಕೆಂಡಾಮಂಡಲವಾಗಿದ್ದಾರೆ. ಪಕ್ಷಕ್ಕಾಗಿ ದುಡಿದ ನಮಗೆ ನಮ್ಮದೇ ಪಕ್ಷದ ನಾಯಕರಿಂದ ಅನ್ಯಾಯವಾಗಿದೆ ಎಂಬ ಮಾತುಗಳು ಅತೃಪ್ತರ
ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಮೊದಲ ಸ್ಥಾನವನ್ನು ಪಡೆದಿದ್ದಾರೆ. ಈ ಕುರಿತು ಸಂತಸ ವ್ಯಕ್ತಪಡಿಸಿದ ಅವರು, ಮತದಾರರಿಗೆ ಹಾಗೂ ಖರ್ಚಿಗೆ ಒಂದೇ ಒಂದು ರೂಪಾಯಿ ಖರ್ಚು ಮಾಡಿದೇ ಗೆದ್ದಂತಹ ಅಭ್ಯರ್ಥಿ ಅಂದರೆ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಎಂದು ಹೇಳಲು ಸಂತೋಷಪಡುತ್ತೇನೆ. ಇದು ನೈಜ ಮತದಾರರ ಗೆಲುವು ಅಂತ ನನಗೆ ಅನಿಸುತ್ತೆ. ಮತ್ತು ಇದು ಬಿಜೆಪಿ ಪಕ್ಷದ ಪ್ರತಿ
ಮಂಗಳೂರು, ನ.20(ಕ.ವಾ):- ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಮೀನುಗಾರಿಕೆ,



















