ಮಂಗಳೂರು: ಮುಂಬರುವ 25 ಸ್ಥಾನಗಳಿಗೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ ನಲ್ಲಿ ಗರಿಷ್ಠ ಸಂಖ್ಯಾಬಲವನ್ನು ಹೊಂದಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಅಡ್ಯಾರ್ ಗಾರ್ಡನ್ ಸಭಾಂಗಣ ದಲ್ಲಿಂದು ಹಮ್ಮಿಕೊಂ ಡ
ಸುರತ್ಕಲ್ ಪರಿಸರಕ್ಕೆ ವೀರ ಸಾವರ್ಕರ್ ಹೆಸರು ಇಡುವುದರಲ್ಲಿ ತಪ್ಪೇನಿದೆ : ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ
ಸುರತ್ಕಲ್ ಪರಿಸರಕ್ಕೆ ವೀರಾ ಸಾವರ್ಕರ್ ಹೆಸರಿಡುವ ವಿಚಾರ ಬಗ್ಗೆ ಕಾಂಗ್ರೆಸ್ ಇತರ ಪಕ್ಷಗಳಿಂದ ವಿರೋಧ ಪ್ರತಿಭಟನೆ ವ್ಯಕ್ತವಾಗಿದೆ. ವೀರ ಸಾವರ್ಕರ್ ಹೆಸರು ಇಡುವುದರಲ್ಲಿ ತಪ್ಪೇನಿದೆ. ಅವ್ರೇನು ದೇಶ ದ್ರೋಹಿ ಅಲ್ಲ …ದುರಾದೃಷ್ಟ ಅವರನ್ನು ದೇಶ ದ್ರೋಹಿ ಎಂದು ಬಿಂಬಿಸುತ್ತಾರೆ. ದೇಶದಲ್ಲಿ ಅನೇಕ ಕಡೆ ವಿದೇಶಿಯರ ಹೆಸರಿದೆ ಅದಕ್ಕೆ ಯಾರೂ ವಿರೋಧ ವ್ಯಕ್ತ ಪಡಿಸಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು. ಅವರು ಮಂಗಳೂರಿನ ಬಿಜೆಪಿ
ಬಲ್ಲಾಳ್ ಭಾಗ್‍ನಲ್ಲಿ ಹಿಂದೂಗಳ ಮೇಲೆ ಅನ್ಯಧರ್ಮದವರಿಂದ ನಡೆದಿರುವ ದೌರ್ಜನ್ಯದ ಬಗ್ಗೆ ಕೂಲಂಕುಷವಾಗಿ ಮತ್ತು ಪಾರದರ್ಶಕವಾಗಿ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುವಂತೆ ಬಲ್ಲಾಳ್ ಭಾಗ್ ಫ್ರೆಂಡ್ಸ್‍ನ ರಕ್ಷಿತ್ ಕೊಟ್ಟಾರಿ ಅವರು ಆಗ್ರಹಿಸಿದ್ದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಲ್ಲಾಳ್ ಭಾಗ್ ಪರಿಸರದ ಸುತ್ತಮುತ್ತ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳನ್ನು ಯಾವುದೇ ಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸೇವೆ
ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾ.ಪಂ ವ್ಯಾಪ್ತಿಯ ಕಂಚಿಬೈಲು ಅರ್ಬಿ ಫಾಲ್ಸ್ ಬಳಿಯಲ್ಲಿ ಶೆಡ್ಡ್ ಒಂದಕ್ಕೆ ಸಿಡಿಲು ಬಡಿದ ಪರಿಣಾಮವಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದುರ್ಘಟನೆ ನಿನ್ನೆ ನಡೆದಿದ್ದು, ಈ ದುರ್ಘಟನೆಯಲ್ಲಿ ಸಿಡಿಲಿಗೆ ಬಲಿಯಾದಪುತ್ತಿಗೆಯ ನಿವಾಸಿಗಳಾದ ಯಶವಂತ (22) ಮತ್ತು ಮಣಿ ಪ್ರಸಾದ್ (22) ಮನೆಗೆ ಬಿಜೆಪಿ ರಾಜ್ಯಾದ್ಯಕ್ಷರು ಹಾಗೂ ಮಾನ್ಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್
ಪುತ್ತೂರು: ದೇಶದ ಜನರ ಸೇವೆ ಮತ್ತು ದೇಶಾಭಿಮಾನಕ್ಕಾಗಿ ಬಿಜೆಪಿ ಕಾರ್ಯಕರ್ತರು ದುಡಿಯುತ್ತಿದ್ದಾರೆ. ಹಾಗಾಗಿ ಬಿಜೆಪಿಯ ಕಾರ್ಯಕರ್ತರಿಗೆ ರಾಜಕಾರಣ ವೃತ್ತಿಯಲ್ಲ, ಅದೊಂದು ವೃತವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು ಭಾರತೀಯ ಜನತಾ ಪಾರ್ಟಿ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕಲ ಅನಾವರಣ ಕಾರ್ಯಕ್ರಮಗಳು ಈಗಾಗಲೇ ನಡೆಯುತ್ತಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಮಂಡಲದ ಬೂತ್ ಅಧ್ಯಕ್ಷರ ಮನೆಗಳಿಗೆ
ಹಾನಗಲ್ ಉಪಚುನಾವಣೆ ಅಂಗವಾಗಿ ಅರಳೇಶ್ವರದಲ್ಲಿ ಮಾಜಿ ಸಚಿವರಾದ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅರಣ್ಯವಸತಿ ಹಾಗೂ ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷರು ಹಾಗೂ ಶ್ರೀ ವಾಲ್ಮೀಕಿ ಗುರುಪೀಠದ ಧರ್ಮದರ್ಶಿಗಳಾದ ಶ್ರೀ ಎಂ.ಅಪ್ಪಣ್ಣನವರು ಬಿರುಸಿನ ಪ್ರಚಾರ ನಡೆಸಿದರು. ಈ ಹಿಂದೆ ಬಿ.ಎಸ್.ಯಡಿಯೂರಪ್ಪನವರು ಹಿಂದುಳಿದ ಸಮಾಜಡಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರು ಅದೇ ಹಾದಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ವಿಶೇಷ
ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ರಾಷ್ಟ್ರಾಭಿಮಾನ ಮತ್ತು ಹಿಂದುತ್ವವನ್ನು ಎತ್ತಿ ಹಿಡುವ ಪಕ್ಷವಾಗಿದೆ. ಶಾಸಕ ಉಮಾನಾಥ ಕೋಟ್ಯಾನ್ ಅವರು ಕೂಡಾ ಇದರ ಕಾರ್ಯಕರ್ತರಿಂದಲೇ ಆಯ್ಕೆಯಾಗಿ ಬಂದು ಅಭಿವೃದ್ಧಿಯ ಜೊತೆಗೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ಅವರ ಜನಪ್ರಿಯತೆಯನ್ನು ಸಹಿಸದ ರಾಜಕೀಯ ವಿರೋಧಿಗಳು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ-ಸುದ್ದಿ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುತ್ತಿರುವುದನ್ನು ಮೂಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲವು
ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಕೆ.ವಿ.
ಬೆಂಗಳೂರು, ಅ 11; ರೈತ ವಿರೋಧಿ ಕೃಷಿ ಕಾನೂನುಗಳು ಮತ್ತು ಬಿಜೆಪಿ ದುರಾಡಳಿತಕ್ಕೆ ಬಲಿಯಾದ ರೈತರ ಸ್ಮರಣಾರ್ಥ ನಗರದ ರೇಸ್ ಕೋರ್ಸ್ ನ ಕಾಂಗ್ರೆಸ್ ಭವನದ ಮುಂದೆ ರಾಜ್ಯ ಕಾಂಗ್ರೆಸ್ ಮುಖಂಡರು ಸೋಮವಾರ ಮೌನ ಪ್ರತಿಭಟನೆ ನಡೆಸಿದರು. ರೈತರನ್ನು ಹಾಡು ಹಗಲೇ ಕೊಂದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಜೀವಕ್ಕೆ ಕಂಟಕವಾಗಿರುವ ಬಿಜೆಪಿ ಸರ್ಕಾರದ ಕೃಷಿ ಕಾನೂನುಗಳು ಹಾಗೂ
ಮಂಗಳೂರು: ಮಾಜಿ ಮುಖ್ಯ ಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಮೊದಲು ಒಂದು ವಾರ ಶಾಖೆಗೆ ಬಂದು ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇತ್ತೀಚೆಗೆ ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್ ಬಗ್ಗೆ ನೀಡಿದ ಹೇಳಿಕೆಗೆ ನಗರದಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರೀಯೆ ನೀಡಿದರು. ಕಾಮಲೆ ರೋಗಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕುಮಾರಸ್ವಾಮಿ ಆರ್‌ಎಸ್‌ಎಸ್ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ.


















