Home Posts tagged #bjp (Page 24)

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆತ್ಮನಿರ್ಭರತೆಯ ಯಶೋಗಾಥೆ

ಪಕೋಡಾ ಮಾರಿಯೂ ಸ್ವ ಉದ್ಯೋಗದಲ್ಲಿ ತೊಡಗಿಕೊಳ್ಳಬಹುದು ಎಂದ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಮಾತಿಗೆ ದೇಶದೆಲ್ಲೆಡೆ ಭಾರೀ ಪ್ರತಿಭಟನೆ, ವ್ಯಂಗ್ಯ ಪ್ರದರ್ಶನಗಳು ಕಂಡು ಬಂದಿತ್ತು. ಅದೇ ರೀತಿ ಪ್ರಧಾನಿಯ ಮಾತಿನಲ್ಲಿ ಸತ್ಯಾಂಶವಿದೆ ಎನ್ನುವುದನ್ನು ತೋರಿಸಿಕೊಟ್ಟ ಹಲವು ವಿಚಾರಗಳೂ ದೇಶದ ಜನರ ಗಮನಕ್ಕೂ ಬಂದಿತ್ತು. ಈ ನಡುವೆ ಸ್ವ ಉದ್ಯೋಗದಲ್ಲಿ ತೊಡಗಿಕೊಂಡು

ಕರಾವಳಿಯ ಯಾವುದೇ ಧಾರ್ಮಿಕ ಕ್ಷೇತ್ರಗಳಿಗೆ ಹಾನಿಯಾಗುವುದಿಲ್ಲ : ಶಾಸಕ ವೇದವ್ಯಾಸ್ ಕಾಮತ್

ಧಾರ್ಮಿಕ ಕೇಂದ್ರಗಳ‌ನ್ನು ತೆರವುಗೊಳಿಸುವ ಕುರಿತು ಉಂಟಾಗಿರುವ ಗೊಂದಲಗಳ‌ ಬಗ್ಗೆ ಮುಖ್ಯಮಂತ್ರಿ ಶ್ರೀ ಬಸವರಾಜು ಬೊಮ್ಮಾಯಿ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ. ಕರಾವಳಿ ಭಾಗದಲ್ಲಿರುವ ದೇವಸ್ಥಾನ, ದೈವಸ್ಥಾನಗಳು ಪೌರಾಣಿಕ ಹಿನ್ನೆಲೆಗಳಿರುವ ಮತ್ತು ಅತ್ಯಂತ ಪುರಾತನವಾಗಿರುವುದೇ ಆಗಿದೆ. ಹಾಗಾಗಿ ಯಾವುದೇ ಧಾರ್ಮಿಕ ಕೇಂದ್ರಗಳಿಗೂ ಇಲ್ಲಿ ಹಾನಿಯಾಗುವುದಿಲ್ಲ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್ ಭರವಸೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿಯು

ಹಾಸನ ಬಳಿಯಲ್ಲಿ ರಸ್ತೆ ಅಪಘಾತ : ಆಸ್ಪತ್ರೆಗೆ ಸಾಗಿಸಲು ನೆರವಾದ ನಳಿನ್ ಕುಮಾರ್

ರಾಜ್ಯ ಪ್ರವಾಸದಿಂದ ಮರಳಿ ಮಂಗಳೂರಿಗೆ ಬರುವಾಗ ಹಾಸನ ಬಳಿಯಲ್ಲಿ ರಸ್ತೆ ಅಪಘಾತದಲ್ಲಿ ಸಿಲುಕಿದ್ದ ಸಾರ್ವಜನಿಕರನ್ನು ಸುರಕ್ಷಿತವಾಗಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೆರವಾಗಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ತಕ್ಷಣವೇ ನಳಿನ್ ಕುಮಾರ್ ಕಟೀಲ್ ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

ಮಂಗಳೂರಿನಲ್ಲಿ ಎನ್.ಐ.ಎ ಕಚೇರಿ ಸ್ಥಾಪಿಸುವ ಬಗ್ಗೆ ಕೇಂದ್ರದ ಜತೆ ಚರ್ಚೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಎನ್‍ಐಎ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು. ಅಪ್ಘಾನಿಸ್ತಾನದಲ್ಲಿ

ತಾಲಿಬಾನ್ ತರ ಯೋಚಿಸಿದರೆ ಮಟ್ಟ ಹಾಕುವುದಕ್ಕೂ ಗೊತ್ತಿದೆ : ಡಾ. ವೈ ಭರತ್ ಶೆಟ್ಟಿ ಹೇಳಿಕೆ

ತಾಲಿಬಾನ್ ಮತಾಂಧ ಸಂಘಟನೆಯಿಂದ ಪ್ರೇರಿತರಾಗಿ ಆಂತರಿಕವಾಗಿ ನಮ್ಮ ದೇಶದಲ್ಲಿಯೂ ಕಾನೂನು ಮುರಿಯುವ ದುಸ್ಸಾಹಕ್ಕೆ ಕೈ ಹಾಕಿದರೆ ನಿಮ್ಮ ಮತಾಂಧ ತೆಯನ್ನು ಮಟ್ಟ ಹಾಕಲು ಸರಕಾರ ಬದ್ದವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ. ಕಬಕದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ವೀರ ಸಾವರ್ಕರ್ ಫೋಟೋ ತೆಗೆದು ಮತಾಂಧ ಟಿಪ್ಪು ಫೋಟೋ ಹಾಕಬೇಕೆಂಬ ಎಸ್ ಡಿ ಪಿ ಐ ಕಾರ್ಯಕರ್ತರ ಕಾನೂನು ಭಂಜಕ ಕೃತ್ಯವನ್ನು ಸಹಿಸುವುದಿಲ್ಲ.ದೇಶದಲ್ಲಿ ಕಾನೂನು,ಪಾಲಿಸಿ ಅದನ್ನು

ಕನ್ನಡ ದಿನಪತ್ರಿಕೆ – ಕನ್ನಡ ಪುಸ್ತಕ ಓದಿ : ಸುನಿಲ್ ಕುಮಾರ್

ಬೆಂಗಳೂರು ಆಗಸ್ಟ್ 11-ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ, ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ಜನರೂ ಸಹ ಪಾಲುಗೊಳ್ಳಲು ಸಾಧ್ಯವಾಗುತ್ತದೆ ಎಂದು ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ

ನನಗೆ ಹಾರ – ತುರಾಯಿ ಬೇಡ, ಪುಸ್ತಕ ಕೊಡಿ : ಸಚಿವ ವಿ.ಸುನೀಲ್ ಕುಮಾರ್ ಹೇಳಿಕೆ

ಅಭಿನಂದಿಸಲು ಹಾರ- ತುರಾಯಿ ಬೇಡ , ಪುಸಕ್ತ ಕೊಡಿ ಎಂಬ ಮನವಿಗೆ ಜನರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ನಗರದ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ , ದೇವರ ದರ್ಶನ ಪಡೆದ ಬಳಿಕ ಬಳಿಕ ಸುದ್ಧಿಗಾರದೊಂದಿಗೆ ಮಾತನಾಡಿದ್ರು. ಈಗಾಗಲೇ ಸಾವಿರಾರು ಪುಸ್ತಕಗಳು ನನ್ನ ಬಳಿ ಬಂದಿದೆ. ಕಾರ್ಕಳದ ಗ್ರಂಥಾಲಯಕ್ಕೆ ಪುಸ್ತಕಗಳನ್ನ ಕೊಡುತ್ತೇನೆ . ಜೊತೆಗೆ ಗ್ರಾಮ ಪಂಚಾಯತ್ ಗಳಿಗೆ

ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ : ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ

ಮಂಗಳೂರು: ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದು ನೂತನವಾಗಿ ಸಚಿವರಾಗಿ ಆಯ್ಕೆಯಾದ ಸುನೀಲ್ ಕುಮಾರ್ ಹೇಳಿದರು.ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಬಂದ ಅವರಿಗೆ ಕಾವೂರು ಜಂಕ್ಷನ್ ನಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಕೊರೊನಾ ಮೂರನೇ ಹಂತದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಇಂದು ಸಂಜೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅಲ್ಲಿನ ಸ್ಥಳೀಯ

ರೈಲ್ವೆ ಬೇಡಿಕೆಗಳ ಈಡೇರಿಕೆಗಾಗಿ ರೈಲ್ವೆ ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ

ರೈಲ್ವೆ ಬೇಡಿಕೆಗಳ ಈಡೇರಿಕೆಗಾಗಿ ರೈಲ್ವೆ ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಶ್ಣವ್ ರವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ಈ ಕೆಳಕಂಡ ವಿಷಯಗಳ ಕುರಿತು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು. ಆಡಳಿತಾತ್ಮಕ ಬದಲಾವಣೆ. 1. ಮಂಗಳೂರು ತೋಕುರು ರೈಲ್ವೆ ಲೈನ್ ನ್ನು ಸೌತ್ ವೆಸ್ಟರ್ನ್

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತ ನಿಷ್ಕ್ರಿಯವಾಗಿದೆ: ಯು.ಟಿ. ಖಾದರ್ ಆರೋಪ

ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೋ ಎಂದು ಜನ ಕೇಳುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ಅಷ್ಟು ನಿಷ್ಕ್ರೀಯವಾಗಿದೆ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿಂದು ಟೀಕಿಸಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸಿದ ಯಡಿಯೂರಪ್ಪ ನೇತೃತ್ವದ ಸರಕಾರ ಎಲ್ಲಾ ಕ್ಷೇತ್ರದಲ್ಲೂ ವಿಫಲವಾಗಿದೆ. ಅವರ ಪಕ್ಷದವರೆ ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ