ಮಂಗಳೂರು: ವಿಶ್ವ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದೀಯವರು ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಇದೇ ಏಪ್ರಿಲ್ 14 ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಇಡೀ ದೇಶವೇ ಈಗ
ಕೆದಂಬಾಡಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೆದಂಬಾಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಮುಖಂಡರಾದ ಮುರಳೀಧರ್ ರೈ, ಕೆದಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಪುರಂದರ್ ರೈ ಮೊದಲಾದವರು ಇದ್ದರು.
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ, ತಿಲಕವಿಟ್ಟು, ದೇಣಿಗೆ ನೀಡಿ ಗೆದ್ದು ಬರುವಂತೆ ಹರಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು,
ಪುತ್ತೂರು : ಏ.9ರಂದು ಪುತ್ತೂರು ಮಹಿಳಾ ಮೋರ್ಚಾದ ವತಿಯಿಂದ ಮಹಿಳಾ ಸಮಾವೇಶ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಸುಲೋಚನ ಬಿಕೆ ಭಟ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ದ.ಕ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ಗೆಲ್ಲಿಸಿಕೊಡುವ ಜೊತೆಗೆ ಮಹಿಳಾ ಸಮಾವೇಶ ಯಶಸ್ವಿಯಾಗಿ ನಡೆಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಮಹಿಳಾ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಸಿದರು. ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಸಿ.ಟಿ.ರವಿ, ಶಾಸಕರಾದ ಯಶ್ಪಾಲ್ ಸುವರ್ಣ,
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಏ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕೇಂದ್ರ ಮಾಜಿ ಸಚಿವ, ಹಿಂದೂ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಸುನೀಲ್ ಕುಮಾರ್ ಈ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಚಿಕ್ಕಮಗಳೂರಿನ ನಾಲ್ವರು ಮಾಜಿ ಶಾಸಕರು ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಾಮಪತ್ರ
ಬೈಂದೂರು: ಕಳೆದ 40 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದೇನೆ. ಹಿಂದುತ್ವ ದೇಶ ಅಭಿವೃದ್ಧಿ ರಾಜಕಾರಣ ಹಾಗೂ ಕುಟುಂಬ ರಾಜಕಾರಣ ಕುರಿತು ಜನ ಸ್ಪಷ್ಟ ಫಲಿತಾಂಶ ನೀಡಲಿದ್ದಾರೆ.ಯಾವ ಒತ್ತಡಗಳಿಗೂ ಮಣಿಯಲಾರೆ.ಬ್ರಹ್ಮ ಬಂದು ಹೇಳಿದರು ಈ ಚುನಾವಣೆಯಿಂದ ಹಿಂದೆ ಸರಿಯಲಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದರು. ಅವರು ಉಪ್ಪಂದದಲ್ಲಿ ಉಪ್ಪುಂದ ಪರಿಚಯ ಹೋಟೆಲ್ ಸಭಾಭವನದಲ್ಲಿ ನಡೆದ ಈಶ್ವರಪ್ಪ ಬೆಂಬಲಿತ ಕಾರ್ಯಕರ್ತರ
ಈ ಬಾರಿಯ ಚುನಾವಣೆ ದೇಶದ ಭದ್ರತೆ, ಬಯೋತ್ಪಾದನೆ ಹತೋಟಿ, ಆರ್ಥಿಕ ಸುಭದ್ರತೆಯನ್ನು ನೀಡಬಲ್ಲ ರಾಷ್ಟ್ರನಾಯಕ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವ ಮಹತ್ತರವಾದ ಚುನಾವಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬ್ರಹ್ಮಾವರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು, ಈಗಾಗಲೆ ನಮ್ಮ ಮತಕ್ಷೇತ್ರ ವ್ಯಾಪ್ತಿಯ 1850 ಮತಗಟ್ಟೆ ಮತ್ತು ಮತದಾರರ ಒಂದು ಸುತ್ತಿನ ಬೇಟಿ ಮಾಡಿ ಏಪ್ರಿಲ್ ೩ನೇ
ಬಿಜೆಪಿ ಪಕ್ಷ ಕಾರ್ಯಕರ್ತರಿಂದ ಬೆಳೆದು ನಿಂತ ಪಕ್ಷವಾಗಿದೆ. ಪ್ರತಿ ಕಾರ್ಯಕರ್ತನು ಪಕ್ಷದ ಬೆನ್ನಲುಬಾಗಿದ್ದಾರೆ. ಸಂಘರ್ಷದ ರಾಜಕಾರಣಕ್ಕೆ ಅವಕಾಶ ಕೊಟ್ಟಿಲ್ಲ ಆದರೆ ಬೈಂದೂರು ಕ್ಷೇತ್ರದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಸಣ್ಣ ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಬೈಂದೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಪ್ರಯತ್ನ ಮತ್ತು ಅಧಿಕಾರದ ಅವಕಾಶ ಉಪಯೋಗಿಸಿಕೊಂಡು ಒತ್ತಡ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಶ್ಚಿಮ ಮಹಾಶಕ್ತಿ ಕೇಂದ್ರದ ಬಿಜೆಪಿಯ ಪ್ರಮುಖರ ಪೂರ್ವಭಾವಿ ಸಭೆಯು ಮಂಗಳಾದೇವಿ ದೇವಸ್ಥಾನದ ಬಳಿಯ ಶ್ರೀದೇವಿ ನಿಲಯದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ದೇಶ ಮೊದಲು ಎನ್ನುವ ಸಿದ್ಧಾಂತಕ್ಕೆ ತಕ್ಕಂತೆ ಸೈನ್ಯದಲ್ಲಿ ಸೇವೆ ಸಲ್ಲಿಸಿ, ಇದೀಗ ಜನಸೇವೆಗೆ ಬಂದಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ನಮ್ಮ ಜಿಲ್ಲೆಯಿಂದ ನರೇಂದ್ರ ಮೋದಿಯಂತಹ ವಿಶ್ವ




























