Home Posts tagged #bjp (Page 8)

ಮತ ಚಲಾಯಿಸಿದ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು. ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.

ಉಡುಪಿ ಬಾಲಕಿಯರ ಸರಕಾರಿ ಶಾಲೆಯಲ್ಲಿ ಯಶ್ ಪಾಲ್ ಸುವರ್ಣ ಮತದಾನ

ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಉಡುಪಿ ಬಾಲಕಿಯರ ಸರಕಾರಿ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.  ಬೆಳಗ್ಗೆ 7 ಗಂಟೆಗೆ ಮತದಾನ ಕೇಂದ್ರಕ್ಕೆ ಆಗಮಿಸಿರುವ ಯಶ್ ಪಾಲ್ ಸುವರ್ಣ ಅವರು ಮೊದಲ ಮತಚಲಾವಣೆ ಮಾಡಿದ್ದಾರೆ. ಮತ ಚಲಾಯಿಸಿ ಮಾತನಾಡಿದ ಯಶ್ಪಾಲ್ ಸುವರ್ಣ, ಗೆಲ್ಲುವ ವಿಶ್ವಾಸ ಇದೆ ಮುಂದಿನ 5 ವರ್ಷಗಳಲ್ಲಿ ಜನರ ಸೇವೆ ಮಾಡುವ ಅವಕಾಶ ಲಭಿಸಲಿದೆ ಎಂದು ಹೇಳಿದ್ದಾರೆ.

ಜಿಲ್ಲಾಧ್ಯಕ್ಷ ಸುದರ್ಶನ್ ಎಂ ಮೂಡುಬಿದಿರೆಯಲ್ಲಿ ಮತಯಾಚನೆ

ಮೂಡುಬಿದಿರೆ: ಮುಲ್ಕಿ -ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಪರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ.ಅವರು ಕಾರ್ಯಕರ್ತರೊಂದಿಗೆ ತನ್ನ ವಾಡ್ ೯64ರಲ್ಲಿ ಮತಯಾಚಿಸಿದರು. ಈ ಸಂದರ್ಭ ಪುರಸಭಾ ಸದಸ್ಯ ರಾಜೇಶ್ ನಾಯ್ಕ್ ಮತ್ತಿತರರಿದ್ದರು.

ಮೂಲ್ಕಿ ,ಮೂಡಬಿದಿರೆ ವಿಧಾನ ಸಭಾ ಕ್ಷೇತ್ರ : ಉಮಾನಾಥ ಕೋಟ್ಯಾನ್ ಗೆ ಗ್ರಾಮಸ್ಥರ ಬೆಂಬಲ

ಚುನಾವಣೆ ಪ್ರಚಾರ ಇಂದು ಕೊನೆಯ ದಿನವಾಗಿದ್ದು, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಇರುವೈಲು ಗ್ರಾಮದ ಜನರು ಒಕ್ಕೊರಲಿನಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಗೆಲ್ಲುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 20 ವರ್ಷಗಳಲ್ಲಿ ಆಗದ ಕೆಲಸ ಕಾರ್ಯಗಳು ಕೇವಲ 5 ವರ್ಷದಲ್ಲಿ ಬಹಳಷ್ಟು ಅಭಿವೃದ್ಧಿಯನ್ನು ಕಂಡಿದೆ. ಇರುವೈಲು ಗ್ರಾಮಕ್ಕೆ ಮೊಟ್ಟ ಮೊದಲ ಬಾರಿಗೆ 7 ಕೋಟಿಗೂ ಅಧಿಕ ವೆಚ್ಚದ ಅನುದಾನ ಬಿಡುಗಡೆಗೊಂಡು ಉತ್ತಮ ರೀತಿಯಲ್ಲಿ

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಗುತ್ತಿಗಾರು ಪೇಟೆಯಲ್ಲಿ ಚುನಾವಣಾ ಪ್ರಚಾರ

ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಚಾರ ಪ್ರವಾಸದ ಸಲುವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ತಾಲೂಕಿನ ಗುತ್ತಿಗಾರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗುತ್ತಿಗಾರು ಪೇಟೆಯಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರೊಂದಿಗೆ ತೆರಳಿ ಬಹಿರಂಗ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ಮೂಡಬಿದಿರೆ ವಿಧಾನಸಭಾ ಕ್ಷೇತ್ರ – ಉಮಾನಾಥ ಕೋಟ್ಯಾನ್ ರೋಡ್ ಶೋ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮೂಡುಬಿದಿರೆಯ ವಿವಿಧೆಡೆ ರೋಡ್ ಶೋ ನಡೆಸಿ ಗಮನಸೆಳೆದರು. ಉಮಾನಾಥ ಕೋಟ್ಯಾನ್ ಅವರು ನೀರುಡೆ ಚರ್ಚ್ ಬಳಿಯಿಂದ ಮತಯಾಚನೆ ಆರಂಭಿಸಿದರು. ನೀರುಡೆಯಲ್ಲಿ ಕೃಷಿಕರೇ ಹೆಚ್ಚಿದ್ದು ಈ ಭಾಗದಲ್ಲಿ ತೀವ್ರ ನೀರಿನ ಸಮಸ್ಯೆ ಇತ್ತು. ಇಲ್ಲಿ ಹರಿಯುವ ನೀರಿಗೆ ಕಿಂಡಿ ಅಣೆಕಟ್ಟು ನಿರ್ಮಿಸುವ ಮೂಲಕ ಈ ಭಾಗದ ನೀರಿನ ಸಮಸ್ಯೆಯನ್ನು ಬಗೆಹರಿಸಿದ್ದು, ಈ ಭಾಗದ ಕೃಷಿಕರಿಗೆ ಹೆಚ್ಚಿನ ಅನುಕೂಲವಾಗಿದೆ. ಮುಂದಿನ

ಕುಪ್ಪೆಪದವಿನಲ್ಲಿ ಡಾ. ವೈ ಭರತ್ ಶೆಟ್ಟಿ ಮತಪ್ರಚಾರ

ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಶಕ್ತಿ ಕೇಂದ್ರ ಸಭೆ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರ ನೇತೃತ್ವದಲ್ಲಿ ಕುಪ್ಪೆಪದವಿನಲ್ಲಿ ಮತಪ್ರಚಾರ ನಡೆಸಿದರು ನಡೆಯಿತು. ಮತದಾನ ಪೂರ್ವದ ಮತದಾರರನ್ನು ಸಂಪರ್ಕಿಸುವ ಮಹಾ ಅಭಿಯಾನದ ಅಂಗವಾಗಿ ಕ್ಷೇತ್ರದಾದ್ಯಂತ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಭಾಗವಹಿಸುತ್ತಿದ್ದಾರೆ. ಕಾರ್ಯಕರ್ತರಿಗೆ ಪಕ್ಷದ ಶಾಲು ಹಾಕಿ ಶಾಸಕರು ಶುಭಕೋರಿದರು. ಮುತ್ತೂರು ಗ್ರಾಮದ ಕೊಳವೂರು ಶಕ್ತಿ ಕೇಂದ್ರದ ಕಡೆಗುಂಡ್ಯ ಮಹಾಲಿಂಗೇಶ್ವರ

ಬೈಂದೂರು:  ಬಿಜೆಪಿಯಿಂದ ಮಹಾ ಪ್ರಚಾರ ಅಭಿಯಾನ

ಬೈಂದೂರು: ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಭಾನುವಾರ ಕ್ಷೇತ್ರದಾದ್ಯಂತ ಮಹಾಪ್ರಚಾರ ಅಭಿಯಾನ ಬಹಳ ಅದ್ದೂರಿಯಾಗಿ ನಡೆಯಿತು.  ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು  ಪಕ್ಷದ ಧ್ವಜ, ಕೇಸರಿ ಧ್ವಜ,  ಕೇಸರಿ ಶಲ್ಯಗಳನ್ನು ಧರಿಸಿ ಮನೆ ಮನೆಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರಿಗೆ ಮತ ನೀಡುವಂತೆ ಪ್ರತಿ ಬೂತನಲ್ಲೂ ಮಹಾ ಪ್ರಚಾರ ಅಭಿಯಾನ ನಡೆಸಿದರು. ಮನೆ ಮನೆಗೆ ಭೇಟಿ ನೀಡಿದ ಕಾರ್ಯಕರ್ತರು ಈ ವೇಳೆ ಕಳೆದ ಐದು ವರ್ಷದಲ್ಲಿ

ಕೊಲ್ಲುವ ಮನಸ್ಥಿತಿ ಇರುವ ವ್ಯಕ್ತಿ ಉಡುಪಿಯ ಶಾಸಕನಾಗಬಾರದು : ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮರೋಳಿ

” ಕೊಲ್ಲುವ ಮನಸ್ಥಿತಿ ಇರುವ ವ್ಯಕ್ತಿ ಉಡುಪಿಯ ಶಾಸಕನಾಗಬಾರದು. ಒಂಬತ್ತು ಪುಟಗಳ ಕ್ರಿಮಿನಲ್ ಕೇಸುಗಳ ವರದಿ ಇರುವ ವ್ಯಕ್ತಿ ಉಡುಪಿಯ ಶಾಸಕನಾಗಬಾರದು. ಪುಂಡಾಟಿಕೆಯಲ್ಲಿ ಮುಂಚೂಣಿಯಲ್ಲಿದ್ದ ವ್ಯಕ್ತಿ ಉಡುಪಿಯ ಶಾಸಕನಾಗುತ್ತಾನೆಂದರೆ ಅದು ಉಡುಪಿಯ ಸ್ವಾಭಿಮಾನದ ಪ್ರಶ್ನೆ.” ಎಂದು ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮರೋಳಿ ಹೇಳಿದ್ದಾರೆ. ಅವರು ನಿನ್ನೆ ಪರ್ಕಳದಲ್ಲಿ ಹಮ್ಮಿಕೊಂಡಿದ್ದ ರ್ಯಾಲಿ ಮತ್ತು ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು.

ವೇದವ್ಯಾಸ ಕಾಮತ್ : ಕೊಡಿಯಾಲ್ ಬೈಲ್, ಅಳಪೆ ದಕ್ಷಿಣ, ಪದವು ಸೆಂಟ್ರಲ್‍ನಲ್ಲಿ ಮತಪ್ರಚಾರ vedavyas kamath

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಕೊಡಿಯಾಲ್ ಬೈಲ್, ಪೆÇೀರ್ಟ್ ವಾರ್ಡ್, ಅಳಪೆ ದಕ್ಷಿಣ, ಕಂಕನಾಡಿ, ಪದವು ಸೆಂಟ್ರಲ್ ವಾರ್ಡ್ ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಇದೇ ಮಾತನಾಡಿದ ವೇದವ್ಯಾಸ ಕಾಮತ್ ಅವರು, ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಜನಾಂಗಕ್ಕೆ ದೇಶ ಸಾಗುತ್ತಿರುವ ಹಾದಿಯ ಬಗ್ಗೆ ಹೆಮ್ಮೆ ಇದೆ. ಅವರ ಉನ್ನತ ಕಲ್ಪನೆಯ ದಿಕ್ಕಿನೆಡೆಗೆ ರಾಜ್ಯವನ್ನು ಕೊಂಡೊಯ್ಯುವುದು