ಕೇಂದ್ರ ಸರಕಾರದ ಮಧ್ಯಂತರ ಬಜೆಟ್‌ನಲ್ಲಿ ಬಡವರು, ಮಧ್ಯಮ ವರ್ಗವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಆದಾಯ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. ವಿತ್ತ ಸಚಿವರು 55 ನಿಮಿಷಗಳ ಕಾಲ ಚುನಾವಣಾ ಭಾಷಣ ಮಾಡಿದರೇ ಹೊರತು ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ಯಾವುದೇ ಯೋಜನೆ ಪ್ರಕಟಿಸಿಲ್ಲ. ದೇಶದ ಆದಾಯ ಮೂಲವಾದ ಕೃಷಿ, ಉದ್ಯಮ, ಸೇವಾ ಕ್ಷೇತ್ರವನ್ನು ಕಡೆಗಣಿಸಲಾಗಿದೆ.
ಮಂಗಳೂರು: ದೇಶದ ಬಿಜೆಪಿ ಸರಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ ಬೇರೇನು ಮಂಡಿಸಲು ಸಾಧ್ಯವಿಲ್ಲö ಎಂದು ವಿಧಾನ ಪರಿಷತ್ ಶಾಸಕರುಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕಾರ್ಪೊರೇಟ್ ಸಂಸ್ಥೆಗಳ ಅಡಿಯಾಳಾಗಿರುವ ಕೇಂದ್ರ ಸರಕಾರ ಈ ಬಜೆಟ್‌ನಲ್ಲಿ ಬಡವರು, ಮಧ್ಯಮ
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ. ಪ್ರಗತಿ, ಬೆಳವಣಿಗೆ, ಧ್ಯೇಯ, ಆಧ್ಯತೆ, ಗಮನ, ಸಹಾಯ, ಬೆಂಬಲ, ಸಹಕಾರ, ಕ್ರಮ, ಕಾರ್ಯಕ್ರಮ, ಮಂತ್ರ ಎಂಬ ಪದಗಳನ್ನು ಹೇಳಿದ್ದರೆ ಹೊರತು ನಿರ್ದಿಷ್ಟವಾಗಿ ಅನುದಾನ ಹಂಚಿಕೆ ಮಾಡಿಲ್ಲ. ಈ ಬಜೆಟ್ ಪ್ರಾದೇಶಿಕತೆಯನ್ನು ಮರೆತಿದೆ. ವಲಯಗಳನ್ನು ಕಡೆಗಣಿಸಿದೆ. ವರ್ಗಗಳನ್ನು ನಿರ್ಲಕ್ಷ್ಯ
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದ ಮೂಲಕ ಬಿಜೆಪಿ ಒಕ್ಕೂಟ ಸರಕಾರದ ಜನಪರ ಯೋಜನೆಗಳು ದೇಶದ ಮೂಲೆ ಮೂಲೆಗೆ ತಲುಪಿದೆ ಎಂದು ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಹೇಳುವುದರ ಮೂಲಕ ಚುನಾವಣಾ ಪೂರ್ವ ತಾತ್ಕಾಲಿಕ ಬಜೆಟ್ ಮಂಡಿಸಿದರು. 2047ಕ್ಕೆ ವಿಕಸಿತ ಭಾರತ್ ಅರಳಲು ತಮ್ಮ ಬಜೆಟ್ ಸಹಾಯಕ ಎಂದು ಅವರು ಹೇಳಿದರು.ತಾತ್ಕಾಲಿಕ ಬಜೆಟ್ಟಿನ ಕೆಲವು ಮುಖ್ಯಾಂಶಗಳು ಮುಂದಿನಂತಿವೆ. ದೇಶದ ಜನರು ನಮಗೆ ಬಹುಮತ ನೀಡಿ ಗೆಲ್ಲಿಸಿದ್ದಾರೆ. ಕಳೆದ ಹತ್ತು ವರುಷಗಳಿಂದ ಭಾರತದ
ಮುಖ್ಯಮಂತ್ರಿ ಮಾನ್ಯ ಬಸವರಾಜ ಬೊಮ್ಮಾಯಿಯವರು ತಮ್ಮ ಅಧಿಕಾರವಧಿಯಲ್ಲಿ ಎರಡನೇ ಬಾರಿಗೆ ಇಂದು ಸದನದಲ್ಲಿ ಮಂಡಿಸಿದ ಆಯವ್ಯಯವು ರಾಜ್ಯದ ಯುವಜನರ ಬದುಕಿನ ಕುರಿತು ಯಾವುದೆ ಸ್ಪಷ್ಟ ಕಣ್ಣೋಟ ಹೊಂದಿಲ್ಲ. ಉದ್ಯೋಗಕ್ಕಾಗಿ ಹಂಬಲಿಸುತ್ತಿರುವ ನಿರುದ್ಯೋಗಿ ಯುವಕರಿಗೆ ಈ ಬಜೆಟ್ ನಿರಾಸೆ ಮೂಡಿಸಿದೆ. ಯುವಜನರ ಬದುಕಿಗೆ ಭದ್ರತೆ ನೀಡದ ಈ ಬಜೆಟ್ ಅನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿ ಖಂಡಿಸುತ್ತದೆ. ಮುಖ್ಯಮಂತ್ರಿಗಳು ತಮ್ಮ
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ರಾಜ್ಯ ಬಜೆಟ್ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ಆರೋಗ್ಯದಲ್ಲಿ ಪರಿವರ್ತನೆ ತರೋ ಕೆಲಸ ಸರ್ಕಾರ ಮಾಡಿದೆ. ಕೃಷಿಕರು, ಮಹಿಳೆಯರು, ಮತ್ತು ಯುವಕರ ಪರವಾದ ಬಜೆಟ್ಈಗ ಮೂರು ಲಕ್ಷ ಕೋಟಿಗೂ ಅಧಿಕ ಬಜೆಟ್ ಮಂಡನೆಯಾಗಿದೆ. ಇದು ಕೃಷಿಕನ ಕನಸಿನ ಬಜೆಟ್,
ಮಂಜೇಶ್ವರ: ಅದಾನಿ ಗ್ರೂಪಿನ ಕಾನೂನು ಬಾಹಿರವಾದ ಚಟುವಟಿಕೆಗಳನ್ನು ಸಂಯುಕ್ತ ಪಾರ್ಲಿಮೆಂಟರಿ ಸಮಿತಿ ತನಿಖೆ ನಡೆಸಬೇಕು, ಕೇಂದ್ರ ಸರ್ಕಾರದ ಬಜೆಟಿನ ಜನ ವಿರೋಧಿ ನಿರ್ದೇಶನಗಳನ್ನು ಕೂಡಲೇ ಹಿಂಪಡೆಯಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐ ಮಂಜೇಶ್ವರ ವಲಯ ಸಮಿತಿಯ ವತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನಾ ಧರಣಿ ನಡೆಸಿದರು. ಸಿಪಿಐ ಜಿಲ್ಲಾ ಸಮಿತಿ ಸದಸ್ಯ ಅಜಿತ್ ಎಂಸಿ ಲಾಲ್ ಬಾಗ್ ರವರ ಅಧ್ಯಕ್ಷತೆಯಲ್ಲಿ ನಡೆದ ಧರಣಿಯನ್ನು ಸಿಪಿಐ ಜಿಲ್ಲಾ ಕಾರ್ಯಕಾರಿ ಸದಸ್ಯ
ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆಯ ಮುಂಚಿತವಾಗಿ ಇಂದು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀಮಿತ ಸಂಪನ್ಮೂಲಗಳನ್ನು ವಿವೇಚನಾಯಕ್ತವಾಗಿ ಬಳಸುವ ಜಾಣ್ಮೆ ಮೆರೆದಿದ್ದಾರೆ.ಜಾಗತಿಕ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸವಾಲುಗಳನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಘೋಷಿಸಿದ್ದಾರೆ. ಬಜೆಟ್ ನಲ್ಲಿ ಏಳು ಆದ್ಯತಾ ವಲಯಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ