ಪುತ್ತೂರು: ದಾರಂದಕುಕ್ಕು ಕೊಲ್ಯ ಎಂಬಲ್ಲಿ ಬೈಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದ್ದು, ಅಪಘಾತದಿಂದ ಬೈಕ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ವಿದ್ಯಾರ್ಥಿ ಬೈಕ್ ಸವಾರ ನಿಶಾಂತ್ ಮತ್ತು ಹಿಂಬದಿ ಸವಾರ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ವಿದ್ಯಾರ್ಥಿ
ಮಂಗಳೂರಿನ ಕುಂಟಿಕಾನದ ಎಜೆ ಆಸ್ಪತ್ರೆಯ ಮುಂಭಾಗದಲ್ಲಿ ಖಾಸಗಿ ಬಸ್‌ನ ಹಿಂಬದಿಗೆ ಸ್ಕೂಟರ್ ವಾಹನ ಢಿಕ್ಕಿಯಾಗಿದ್ದು, ಸ್ಕೂಟರ್ ಸವಾರ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಖಾಸಗಿ ಬಸ್‌ನ ಹಿಂಬದಿಗೆ ದ್ವಿಚಕ್ರ ವಾಹನ ಸವಾರ ಹಿಮ್ಮುಖವಾಗಿ ಢಿಕ್ಕಿಯಾಗಿದೆ. ಢಿಕ್ಕಿಯಾದ ರಭಸಕ್ಕೆ ದ್ವಿಚಕ್ರವಾಹನ ಸವಾರ ಬಸ್‌ನ ಅಡಿಗೆ ನುಗ್ಗಿದ್ದು, ಗಂಭೀರ ಗಾಯಗೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.