Home Posts tagged #car accident

ಮಂಜೇಶ್ವರ : ರಸ್ತೆ ದಾಟುತಿದ್ದ ವ್ಯಕ್ತಿಗೆ ಕಾರು ಡಿಕ್ಕಿ : ಪಾದಾಚಾರಿ ಗಂಭೀರ

ಮಂಜೇಶ್ವರ : ಮಂಜೇಶ್ವರ ರಾಗಂ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಗಂಭೀರಾವಸ್ಥೆಯಲ್ಲಿದ್ದ ಪಾದಾಚಾರಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಬಾಯಾರು ಚಿಗುರುಪಾದೆ ಕುಳೂರು ಕುಳ ಬೈಲು ನಿವಾಸಿ

ಹೆಮ್ಮಾಡಿ : ಸ್ಕೂಟಿಗೆ ಕಾರು ಡಿಕ್ಕಿ- ಮಕ್ಕಳಿಬ್ಬರು ಪಾರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆರಾಟೆ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಹೆಮ್ಮಾಡಿ ಹೇಮಾಪುರ ಮಠದ ಸಮಿಪ ಅದೆ ಮಾರ್ಗದಲ್ಲಿಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದು ಕೊಂಡ ಸ್ಕೂಟಿ ಪಲ್ಟಿಯಾಗಿ ಹೆದ್ದಾರಿ ಬದಿಯಲ್ಲಿ ನಿಂತು ಕೊಂಡಿದ್ದ ಲಾರಿ ಅಡಿಗೆ ಸಿಲುಕಿದ ಘಟನೆ ನಡೆದಿದೆ. ಅಪಘಾತದಲ್ಲಿ ಸ್ಕೂಟಿಯಲ್ಲಿ ಚಲಿಸುತ್ತಿದ್ದ ಮಹಿಳೆ ಸಹಿತ ಮಕ್ಕಳಿಬ್ಬರಿಗೆ ಗಾಯವಾಗಿದ್ದು ಪಾರಾಗಿದ್ದಾರೆ.

ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ

ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಭಾಗಶ: ಜಖಂಗೊಂಡ ಘಟನೆ ಸಾಲೆತ್ತೂರು ಜಂಕ್ಷನ್‌ನಲ್ಲಿ ನಡೆದಿದೆ. ಮುಡಿಪು ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಟೊಯೊಟಾ ಅರ್ಬನ್ ಕ್ರೂಸರ್ ಕಾರು ಸಾಲೆತ್ತೂರು ಜಂಕ್ಷನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಭಾರಿ ಗಾತ್ರದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಭಾಗಶ: ಜಖಂಗೊಂಡಿದ್ದು ಅಪಘಾತದ

ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿ ಮೋರಿಯ ದಂಡೆಗೆ ಡಿಕ್ಕಿಯಾದ ಕಾರು: ಚಾಲಕ ಅಪಾಯದಿಂದ ಪಾರು

ಬಡಾ ಎರ್ಮಾಳು ಅಪೂರ್ವ ಲಾಡ್ಜ್ ಮುಂಭಾಗ ಕಾರೊಂದು ಚಾಲಕನ ನಿದ್ದೆಯ ಮಂಪರಿನಿಂದಾಗಿ ನಿಯಂತ್ರಣ ತಪ್ಪಿ ಮೋರಿಯೊಂದರ ದಂಡೆಗೆ ಡಿಕ್ಕಿಯಾಗಿ ಮುಗುಚಿ ಬಿದ್ದಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಬಿಟ್ಟು ಮರಳಿ ಉಡುಪಿಗೆ ಹಿಂದಿರುಗಿ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಬಂದ ಹೆಜಮಾಡಿ ಟೋಲ್ ಸಿಬ್ಬಂದಿಗಳು ಸಹಿತ ಪೊಲೀಸರು ಹೆದ್ದಾರಿಗಡ್ಡವಾಗಿ ಉರುಳಿಬಿದ್ದ

ಕೊಲ್ಪೆ: ಕಾರು ಡಿಕ್ಕಿ ಲಾರಿ ಚಾಲಕರಿಬ್ಬರಿಗೆ ಗಂಭೀರ ಗಾಯ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಎಂಬಲ್ಲಿ ಲಾರಿ ನಿಲ್ಲಿಸಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಸಕಲೇಶಪುರ ಮೂಲದ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.8ರಂದು ಬೆಳಿಗ್ಗೆ ನಡೆದಿದೆ. ಸಕಲೇಶಪುರ ಮೂಲದ ವಿನಯ ಕುಮಾರ್ ಹಾಗೂ ಮಂಜ ಗಾಯಗೊಂಡ ಲಾರಿ ಚಾಲಕರು. ಇವರಿಬ್ಬರು

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ -ಕಂಟೈನರ್,ಇನ್ನೋವಾ ಡಿಕ್ಕಿ- ತಾಯಿ, ಮಗ ದುರ್ಮರಣ

ನೆಲ್ಯಾಡಿ: ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲ್ಕೈದು ಮಂದಿ ಗಂಭೀರವಾದ ಗಾಯಗೊಂಡಿರುವ ಘಟನೆ ಮೇ 21 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ತಾಯಿ ಸಪೀಯಾ, ಮಗ ಸಫೀಕ್ ಎಂದು ಗುರುತಿಸಲಾಗಿದೆ. ಮದುವೆ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಬಂಟ್ವಾಳ ತಾಲೂಕಿನ ಬೊಂಡಾಲದ ಕುಟುಂಬವೊಂದು ಬೆಂಗಳೂರಿನಿಂದ

ಮಂಜೇಶ್ವರ : ರಾ.ಹೆದ್ದಾರಿಯಲ್ಲಿ ಕಾರಿಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್ – ಮೂವರ ದಾರುಣ ಅಂತ್ಯ

ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಕುಂಜತ್ತೂರಿನ ವಿರುದ್ಧ ದಿಕ್ಕಿನಲ್ಲಿ ಅಮಿತ ವೇಗದಲ್ಲಿ ಸಂಚರಿಸಿದ ಆಂಬ್ಯುಲೆನ್ಸ್ ಎದುರಿನಿಂದ ಬರುತಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಕೂಡಾ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕುಂಜತ್ತೂರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರದಂದು ಬೆಳಿಗ್ಗೆ 10-50 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.ಬೆಂಗಳೂರಿನಿಂದ ತ್ರಿಶೂರು ಭಾಗಕ್ಕೆ ಕಾರಿನಲ್ಲಿ ಸಂಚರಿಸುತಿದ್ದ

ವಿಟ್ಲ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು: ಪಂಪ್ವೆಲ್ ಬಳಿ ಭೀಕರ ಅಪಘಾತ

ನಗರದ ಪಂಪ್ವೆಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ತೊಕ್ಕೊಟ್ಟು ನಿವಾಸಿ ಸಮಿತ್ ಶೆಟ್ಟಿ (30) ಮೃತಪಟ್ಟ ಯುವಕ. ಸಮಿತ್ ಶೆಟ್ಟಿ ಕೊಟ್ಟಾರದಲ್ಲಿರುವ ತನ್ನ ರೂಮ್ ನಿಂದ ಇಂದು ಬೆಳಗ್ಗೆ ತೊಕ್ಕೊಟ್ಟಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾ.ಹೆ. 66ರ ಪಂಪ್ವೆಲ್ ಬಳಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ

ಉಳ್ಳಾಲ: ಕಾರ್, ಬೈಕ್ ಗೆ ಢಿಕ್ಕಿ: ಕೊಲ್ಯ ನಿವಾಸಿ ದಾರುಣ ಸಾವು

ಉಳ್ಳಾಲ: ಒಂದೇ ಧಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಸಾವನ್ನಪ್ಪಿದ ಘಟನೆ ರಾ.ಹೆ66 ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಇಂದು ಮಧ್ಯಾಹ್ನ ಸಂಭವಿಸಿದೆ. ಜೀಪಿನಲ್ಲಿದ್ದ ಯುವಕರು ಗಾಂಜಾ ನಶೆಯಲ್ಲಿದ್ದು, ಅವರ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಿ