ದೇಶದಲ್ಲಿ ಉಗ್ರರ ವಿಧ್ವಂಸಕ ಕೃತ್ಯ ಸಾಧ್ಯತೆ ಬೆನ್ನಲ್ಲೇ ಮಂಗಳೂರು ಏರ್ ಪೋರ್ಟ್ ಸುತ್ತಮುತ್ತ ಅಲರ್ಟ್ ಮಾಡಲಾಗಿದೆ. ಏರ್‍ಪೋರ್ಟ್ ಭದ್ರತೆಯ ಸಿಐಎಸ್‍ಎಫ್ ಹಾಗೂ ಬಜ್ಪೆ ಪೊಲೀಸರಿಂದ ಸ್ಥಳೀಯರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇನ್ನು ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ಮಾಹಿತಿ ನೀಡಲು ಅಧಿಕಾರಿಗಳು ಸ್ಥಳೀಯರಿಗೆ
ಮಂಗಳೂರು: ವಿಮಾನ ನಿಲ್ದಾಣ ವ್ಯಾಪ್ತಿಯ ಅದ್ಯಪಾಡಿ ಸುತ್ತಮುತ್ತಲಿನ ಪರಿಸರದಲ್ಲಿ ಸಿಐಎಸ್‌ಎಫ್ ಏರ್ ಪೋರ್ಟ್ ಘಟಕದ ವತಿಯಿಂದ, ಬಜ್ಪೆ ಪೊಲೀಸ್ ಠಾಣಾ ಸಹಯೋಗದೊಂದಿಗೆ ’ಸುರಕ್ಷತಾ ಜಾಗೃತಿ’ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಸ್ಥಳೀಯ ನಾಗರಿಕರಲ್ಲಿ ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಯಿತು. ಈ ಸಂದರ್ಭ ಸಿಐಎಸ್‌ಎಫ್ ಡೆಪ್ಯುಟಿ ಕಮಾಂಡೆಂಟ್ ಕೃಷ್ಣ ಪ್ರಕಾಶ್, ಬಜ್ಪೆ