Home Posts tagged #cm basavaraj bommayi

ಕುದ್ರೋಳಿ ಕ್ಷೇತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಪ್ರಯುಕ್ತ ಇಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ. ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಮಂಗಳೂರು ದಸರಾ ವೈಭವ ನಡೆಯುತ್ತಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವಾಲಯಕ್ಕೆ ಭೇಟಿ ನೀಡಿದರು. ನವದುರ್ಗೆಯರ

ಅದಮಾರು ಪದವಿ ಕಾಲೇಜಿಗೆ ಸಿಎಂ ಅವರಿಂದ ಶಿಲಾನ್ಯಾಸ

ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರಿನಲ್ಲಿ ಮಾತೃ ಸಂಸ್ಥೆಯ ಅಧ್ಯಕ್ಷ ವಿಶ್ವಪ್ರೀಯ ತೀರ್ಥರ ಸಮಕ್ಷಮದಲ್ಲಿ ನೆರವೇರಿಸಿದ್ದಾರೆ. ಆರಂಭದಲ್ಲಿ ಅದ್ಧೂರಿಯಾಗಿ ಮುಖ್ಯಮಂತ್ರಿಗಳನ್ನು ಶಿಲಾನ್ಯಾಸ ಪ್ರದೇಶಕ್ಕೆ ಬರಮಾಡಿಕೊಳ್ಳಲಾಯಿತು. ಶಿಲಾನ್ಯಾಸ ಸಹಿತ ನಾಮಫಲಕ ಅನಾವರಣದ ಬಳಿಕ ವಿದ್ಯಾಸಂಸ್ಥೆಯ ರಾಜ್ ಕಿರಣ್ ರಂಗಮಂಟಪದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ರಾಜ್ಯ ಸಚಿವರುಗಳಾದ ಕೋಟ

ಸಮಗ್ರ ಚಿಕಿತ್ಸೆ ಇಂದಿನ ಅಗತ್ಯ:ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋ ಎಂಟ್ರಾಲಜಿ ವಿಜ್ಞಾನ ಮತ್ತು ಅಂಗಾಂಗ ಕಸಿ ವಿಭಾಗವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟಿಸಿದರು. ಬಳಿಕ ಮನ್ಸುಖ್ ಮಾಂಡವಿಯಾ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಯಕೃತ್ ಸೇರಿದಂತೆ ವಿವಿಧ ಅಂಗಾಂಗಗಳ ಕಸಿಯನ್ನು ಉಚಿತವಾಗಿ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಚಿಕಿತ್ಸೆ ಎಂದರೆ ಕೇವಲ ದೈಹಿಕ ಸಮಸ್ಯೆಗಳಿಗೆ

ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ನಿಯಂತ್ರಣದಲ್ಲಿ ಯಾವುದೇ ರಾಜಿ ಇಲ್ಲ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು,: ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ನಿಯಂತ್ರಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ಅವರು ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ರಾಜ್ಯದ ಪೊಲೀಸ್ ಇಲಾಖೆ ಅತ್ಯಂತ ದಕ್ಷ, ನಿಷ್ಪಕ್ಷಪಾತ ಹಾಗೂ ನಿಷ್ಠುರವಾಗಿದ್ದು, ಈ ಪರಂಪರೆಯನ್ನು ಮುಂದುವರೆಸಬೇಕು. ಆಗ ಮಾತ್ರ ಜನಸಾಮಾನ್ಯರಿಗೆ ಸುರಕ್ಷತೆ ಹಾಗೂ

ಸಭೆ ಸಮಾರಂಭದಲ್ಲಿ ಹಾರ, ತುರಾಯಿ ಬೇಡ, ಕನ್ನಡ ಪುಸ್ತಕಗಳನ್ನು ನೀಡಿ:ರಾಜ್ಯ ಸರ್ಕಾರದ ಮಹತ್ವದ ಆದೇಶ

ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈಗಾಗಲೇ ಇಂಧನ ಸಚಿವ ಸುನಿಲ್ ಕುಮಾರ್ ತನಗೆ ಹೂ,ಹಾರ, ತುರಾಯಿ ತರಬಾರದು ಅದರ ಬದಲಿಗೆ ಪುಸ್ತಕ ತನ್ನಿ ಎಂದು ಮನವಿ ಮಾಡಿದ್ದರು, ಈಗ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡ ಹೂಗುಚ್ಚ,

ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ

ಬೆಂಗಳೂರು: ಸೋಂಕು ಹೆಚ್ಚಾಗಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದ ಬಳಿ ಮೈಸೂರಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.ನಾನು ಇಂದು ಮೈಸೂರಿಗೆ ಭೇಟಿ ನೀಡುತ್ತಿದ್ದೇನೆ. ಮೈಸೂರು ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ. ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ

ಕೋವಿಡ್ 19 ಸೋಂಕು ಹರಡುವಿಕೆ ತಡೆಯುವ ಕಾರಣದಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ,ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಶುಕ್ರವಾರ ರಾತ್ರಿಯಿಂದಲೇ ಕರ್ಫ್ಯೂ ಜಾರಿಗೆ ಬರಲಿದ್ದು, ಶನಿವಾರ ಮತ್ತು ಭಾನುವಾರ ಈ ನಾಲ್ಕು ಜಿಲ್ಲೆಗಳಲ್ಲಿ ಅಗತ್ಯ ವಸ್ತು ಮತ್ತು ಸೇವೆಗಳ ಹೊರತುಪಡಿಸಿ ಇತರ ಎಲ್ಲಾ

ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ: ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ: ಸಿಎಂ ಬಸವರಾಜ್ ಬೊಮ್ಮಾಯಿ

ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದೆ. ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ನಿರ್ವಹಣೆ ಕುರಿತಂತೆ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ