ಮಂಗಳೂರು: ತೆಂಗಿನಿಂದ ಸಿಗುವ ಸೀಯಾಳದಿಂದ ಹಿಡಿದು ಗೆರಟೆ, ಚಿಪ್ಪಿನ ವರೆಗೂ ಅನೇಕ ಬಗೆಯ ಕಚ್ಚಾ ವಸ್ತುಗಳನ್ನು ವಿವಿಧ ಮಾದರಿಯ ಮೌಲ್ಯವರ್ಧಿತ ಉತ್ಪನ್ನಗಳನ್ನಾಗಿಸಿ ಹೊಸ ಮಾರುಕಟ್ಟೆ ಸಾಧ್ಯತೆಗಳನ್ನು ತೆರೆದಿಟ್ಟಿರುವ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ. ಸಂಸ್ಥೆಯ ಬಹುನಿರೀಕ್ಷಿತ ಕಲ್ಪವೃಕ್ಷ ಯೋಜನೆಯ ಉತ್ಪಾದನಾ ಘಟಕಗಳ ನೀಲನಕಾಶೆ ಹಾಗೂ
ನೈಸರ್ಗಿಕವಾಗಿ ದೊರಕುವ, ದೇಹದ ಕಾವನ್ನು ತಣಿಸಿ ಬಾಯಾರಿಕೆಯನ್ನು ಇಂಗಿಸಿ, ಮನಸ್ಸಿಗೆ ಉಲ್ಲಾಸ ನೀಡುವಅತೀ ಉತ್ತಮ ಪೇಯವೆಂದರೆ ಅದು ಎಳನೀರು ಎಂದರೆ ಅತಿಶಯೋಕ್ತಿಯಾಗಲಾರದು. ಬಹಳ ಸುಲಭವಾಗಿ ಹಳ್ಳಿ, ನಗರ, ಪೇಟೆ, ಊರು, ಕೇರಿ ಹೀಗೆ ಎಲ್ಲೆಡೆ ಅತೀ ಕಡಿಮೆ ದರಕ್ಕೆ ದೊರಕುವ ಈ ನೈಸರ್ಗಿಕ ಪೇಯವನ್ನು ಅಮೃತ ಸದೃಶ ಪೇಯ ಎಂದೂ ಕರೆಯಲಾಗುತ್ತದೆ. ಇದರಲ್ಲಿ ದೊರಕುವ ವಿಟಮಿನ್, ಖನಿಜಾಂಶ, ಪೋಷಕಾಂಶ ಮತ್ತು ಇತರ ಸಮೃದ್ಧವಾದ ಸೋಡಿಯಂ, ಪೊಟಾಷಿಯಂ ಮುಂತಾದ ಲವಣಗಳಿಂದಾಗಿ,
ವಿಟ್ಲದಲ್ಲಿ ಕೇಂದ್ರ ಕಚೇರಿ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆ ವಿಜ್ಞಾನಿಗಳ ನೇತೃತ್ವದಲ್ಲಿ ಅಡಿಕೆ ಮತ್ತು ತೆಂಗಿನ ಮರಗಳಿಗೆ ಬಾಧಿಸುತ್ತಿರುವ ಹಳದಿ ರೋಗದ ವಿರುದ್ಧ ಹೋರಾಡಲು ಸಜ್ಜಾಗುವ ಮೂಲಕ ರೈತರ ಕಷ್ಟಗಳಿಗೆ ಸ್ಪಂದಿಸಲು ಮುಂದಾಗಿದೆ ದ.ಕ ಜಿಲ್ಲೆಯಾದ್ಯಂತ ಅಡಿಕೆ ಮರಗಳಿಗೆ ಹಳದಿ ರೋಗ ಬಾಧಿಸಿದ್ದರಿಂದ ಜಿಲ್ಲೆಯ ರೈತರು ಅಡಿಕೆ ಕೃಷಿಯಿಂದ ಹಿಂದೆ ಸರಿಯಲು ಮುಂದಾಗುತ್ತಿದ್ದಾರೆ. ಈಗಾಗಲೇ ಅಡಿಕೆ ಗಿಡಗಳಲ್ಲಿ ಹಳದಿ ರೋಗ ಕಂಡು