ಉಡುಪಿ : ರಾಜ್ಯದ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಆರಂಭಿಸಿರುವ ರಾಜ್ಯ ಸರಕಾರದ ಶಕ್ತಿ ಯೋಜನೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಉಡುಪಿಯ ಕೆ ಎಸ್ ಆರ್ ಟಿ ಸಿ ಡಾ. ವಿ. ಎಸ್. ಆಚಾರ್ಯ ಬಸ್ ನಿಲ್ದಾಣದಲ್ಲಿ ಜೂನ್ 11ರ ರವಿವಾರದಂದು ಚಾಲನೆ ನೀಡಿದರು. ಈ
ಉಡುಪಿ : ಕಾಂಗ್ರೆಸ್ ನ ಉಚಿತ 5 ಗ್ಯಾರಂಟಿಗಳು ಕೇವಲ ಚುನಾವಣೆ ಗೆಲ್ಲಲು ರೂಪಿಸಿರುವ ತಂತ್ರ ಎಂದು ಬಿಜೆಪಿ ಮೊದಲಿನಿಂದಲೂ ಟೀಕಿಸುತ್ತಾ ಬಂದಿತ್ತು. ಇದೀಗ ಬಿಜೆಪಿ ಟೀಕೆಗಳು ಅಕ್ಷರಶಃ ಸತ್ಯವೆಂಬಂತೆ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರ ಹೇಳಿಕೆಯೇ ಸಾಕ್ಷಿ ಎಂಬಾಂತಾಗಿದೆ. ಸಚಿವ ಎನ್ ಚೆಲುವರಾಯಸ್ವಾಮಿ ಮಾಧ್ಯಮದ ಮುಂದೆ ಕಾಂಗ್ರೆಸ್ ನ ಉಚಿತ ಗ್ಯಾರಂಟಿಗಳ ಬಗ್ಗೆ ಮಾತನಾಡುವಾಗ, ಚುನಾವಣೆಯಲ್ಲಿ ಗೆಲ್ಲಬೇಕು ಎಂದಾಗ ಈ ರೀತಿಯ ಚೀಪ್ ಪಾಪ್ಯುಲಾರಿಟಿ ಮಾಡಬೇಕಾಗುತ್ತೆ
ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟೀ ಗೆ ನೂತನ ಸಾರಿಗೆ ಸಚಿವರಾದ ಡಾ. ರಾಮಲಿಂಗಾರೆಡ್ಡಿ ತೆರೆ ಎಳೆದಿದ್ದಾರೆ. ಮೇ 30 ರಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲ ಮಹಿಳೆಯರು ಯಾವುದೇ ಷರತ್ತುಗಳಿಲ್ಲದೆ ಪ್ರಯಾಣಿಸಬಹುದು ಎಂದು ತಿಳಿಸಿದರು. ಆದರೆ ಈ ಗ್ಯಾರಂಟೀ ರಾಜ್ಯಾದ್ಯಂತ ಯಾವಾಗಿನಿಂದ ಜಾರಿಯಾಗಲಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್