ಮೂಡುಬಿದಿರೆ:ಹಿರಿಯ ರಾಜಕೀಯ ಮುತ್ಸದ್ಧಿ ಮಾಜಿ ಸಂಸದ ಸದಸ್ಯ ಎಂ. ವೀರಪ್ಪ ಮೊಯಿಲಿ ಅವರನ್ನು ರಾಜ್ಯ ಸಭೆಗೆ ಆಯ್ಕೆ ಮಾಡಬೇಕೆಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆಗ್ರಹಿಸಿದ್ದಾರೆ. ಅವರು ಮೂಡುಬಿದರೆ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ವೀರಪ್ಪ ಮೊಯಿಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಸಿಇಟಿ ವ್ಯವಸ್ಥೆಯನ್ನು ರಿಗೆ ತಂದು
ಪ್ರಮೋದ್ ಮಧ್ವರಾಜ್ ಅವಕಾಶವಾದಿ ರಾಜಕಾರಣಿ. ಮೊದಲ ಬಾರಿ ಗೆದ್ದವನಿಗೆ ಪಕ್ಷ ಎಲ್ಲಾ ಅವಕಾಶ ಕೊಟ್ಟಿತ್ತು. ಪ್ರಮೋದ್ ಜಿಲ್ಲಾ ಕಾಂಗ್ರೆಸ್ ವಿರುದ್ಧ ಮಾತನಾಡುವುದು ಶೋಭೆ ತರಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ್ ಹೇಳಿದರು. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಪ್ರಮೋದ್ ಹೇಳಿದವರಿಗೆ ಜಿಲ್ಲಾ ಕಾಂಗ್ರೆಸ್ನಲ್ಲಿ ಅವಕಾಶ ಕೊಟ್ಟಿದ್ದೇವೆ. ಪ್ರಮೋದ್ ಕಾಂಗ್ರೆಸ್ ಬಿಟ್ಟು ಹೋಗಿರುವುದು ದುರಾದೃಷ್ಟಕರ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಪರ್ಸಂಟೇಜ್ ಕಮಿಷನ್ ನಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಆತ್ಮಹತ್ಯೆಗೆ ಸಚಿವ ಕೆ.ಎಸ್. ಈಶ್ವರಪ್ಪನವರೇ ಕಾರಣ ಎಂದು ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ. ಪಾಟೀಲ್ ಡೆತ್ ನೋಟ್ ಬರೆದಿಟ್ಟಿರುವ ಕಾರಣ ಇದು ಹತ್ಯೆಗೆ ಸಮಾನವಾಗಿದೆ. ಆದ್ದರಿಂದ ಅವರನ್ನು ಸಂಪುಟದಿಂದ ಕಿತ್ತು ಹಾಕುವುದು ಮಾತ್ರವಲ್ಲದೆ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ
ಮೂಡುಬಿದಿರೆ: ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಪ್ರಾಮಾಣಿಕ ಸಿಎಂ ಆಗಿದ್ರೆ ತಮ್ಮ ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪನನ್ನು ತಮ್ಮ ಸಚಿವ ಸಂಪುಟದಿಂದ ಕೈಬಿಟ್ಟು ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ಕಳುಹಿಸಿ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಮುಖ್ಯಮಂತ್ರಿಗೆ ಸವಾಲು ಹಾಕಿದರು. ಅವರು ಕಮೀಷನ್ ದಂಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಅವರ ಸಾವಿಗೆ ಕಾರಣೀಕರ್ತರಾಗಿರುವ ಸಚಿವ ಈಶ್ವರಪ್ಪನ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಬೇಕು ಮತ್ತು ಅವರನ್ನು ಬಂಧಿಸಿ ಕಾನೂನು ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿ ನಗರದ ಖಾಸಗಿ ಹೊಟೇಲಿನಲ್ಲಿ ಬಿಜೆಪಿ ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ಏಕಾಏಕಿ ನುಗ್ಗಲು ಯತ್ನಿಸಿದಾಗ ಪೊಲೀಸರು ತಬ್ಬಿಬ್ಬರಾದರು.
ಬಿಜೆಪಿ ಸರ್ಕಾರದ ಬಡಜನ ವಿರೋಧಿ ನಿಲುವನ್ನು ವಿರೋಧಿಸಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ನೂರಾರು ಕಾರ್ಯಕರ್ತರು ಕಾಪು ತಾಲೂಕು ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಅಕ್ರಮ ಸಕ್ರಮಕ್ಕಾಗಿ 94 ಸಿ, 94 ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದರೂ ಅವರಿಗೆ ಹಕ್ಕು ಪತ್ರ ನೀಡಲು ಸರ್ಕಾರ ವಿಫಲವಾಗಿದೆ, ಶಿರ್ವದಲ್ಲಿ ಬಡ ದಲಿತ ಮಹಿಳೆಯ ಮನೆಯನ್ನು ಅಧಿಕಾರಿಗಳ ಮೂಲಕ ಕೆಡಹುವ ಮೂಲಕ ದಲಿತ
ಪುತ್ತೂರು : ಇವತ್ತು ಇಡೀ ಕರ್ನಾಟಕದಲ್ಲಿ ಕನ್ನಡಿಗರನ್ನು, ಭಾರತೀಯರನ್ನು ಒಡೆದು ಬೇರೆ ಬೇರೆ ಮಾಡುವ ಕೆಲಸವನ್ನು ಕೋಮುವಾದಿ ಬಿಜೆಪಿ, ಆರೆಸ್ಸೆಸ್ ಮಾಡುತ್ತಿದೆ. ನಾವು ಸಂವಿಧಾನವನ್ನು ಗೌರವಿಸುವವರಾಗಿದ್ದು, ಕ್ರಿಶ್ಚಿಯನರಿಗೆ ಬೈಬಲ್, ಮುಸ್ಲಿಮರಿಗೆ ಕುರಾನ್, ಹಿಂದೂಗಳಿಗೆ ಭಗವದ್ಗೀತೆಯೇ ಸಂವಿಧಾನವಾಗಿದ್ದು, ನಾವೆಲ್ಲರೂ ಒಂದಾಗಿ ಕೋಮುವಾದಿಗಳಿಗೆ ನಮ್ಮ ಶಕ್ತಿಯನ್ನು ತೋರಿಸಬೇಕಾಗಿದೆ ಎಂದು ರಾಜ್ಯ ಯುವಕ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹ್ಯಾರೀಸ್ ನಲಪ್ಪಾಡ್
ನಮ್ಮ ಸರ್ಕಾರ ಹತ್ಯೆಗೀಡಾದ ಹರ್ಷನ ಕುಟುಂಬಕ್ಕೆ ಸಂಪೂರ್ಣ ನೆರವನ್ನು ನೀಡಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕುಂದಾಪುರದಲ್ಲಿ ಸುದ್ದಿಗೋಷ್ಟಿ ನಡೆಸಿ ಪ್ರತಿಕ್ರಿಯೆ ನೀಡಿದರು. ಕೊಲೆಯಾದ ಹರ್ಷನ ಕುಟುಂಬಕ್ಕೆ ಟಿಕೆಟ್ ಕೊಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಟಿಕೆಟ್ ಕೊಟ್ಟರೆ ಅಭ್ಯರ್ಥಿ ನಿಲ್ಲಿಸುವುದಿಲ್ಲ ಎಂಬ ಕೈ ನಾಯಕರ ಹೇಳಿಕೆಗೆ ಸಚಿವ ಕೋಟ ಗರಂ ಆಗಿದ್ದಾರೆ. ಕಾಂಗ್ರೆಸಿಗರು ಯಾರು ಟಿಕೆಟ್ ಕೊಡಲು ಹೇಳಲು ಎಂದು
ಪಂಜಾಬ್ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರದ ಜಟಾಪಟಿ ನಡೆಯುತ್ತಿದೆ. ಇದಕ್ಕೆ ಅಂತ್ಯ ಹಾಡಲು ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್ ಪಂಜಾಬ್ಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲು ನಿರ್ಧಿರಿಸಿದೆ. ಗುರುವಾರ, ಜಲಂಧರ್ನ ಆನ್ಲೈನ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶೀಘ್ರದಲ್ಲೇ ಪಂಜಾಬ್ ಕಾಂಗ್ರೆಸ್ನ ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ
ಗಣರಾಜ್ಯೋತ್ಸವ ಸಂದರ್ಭ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ದೊರೆಯದೇ ಇರುವುದು ಬೇಸರದ ವಿಷಯ. ಕೇಂದ್ರದ ನಡೆ ಖಂಡನೀಯ. ಮುಂದೆಂದೂ ಇಂತಹ ಘಟನೆಗಳು ಮರುಕಳಿಸಬಾರದು ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಹೇಳಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿಯವರ ಹೇಳಿಕೆಯಂತೆ ಜ.26ರಂದು ನಡೆಯುವ ಸ್ವಾಭಿಮಾನದ ನಡಿಗೆಗೆ ಪಕ್ಷಾತೀತವಾಗಿ ಬೆಂಬಲ