ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಕಾರ್ಯಕ್ರಮ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನಲ್ಲಿ ನಡೆಯಿತು. ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ರಾಜೀವ್ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆಪಿಸಿಸಿ ಸಂಯೋಜಕರು ತೇಜಸ್ ರಾಜ್, ಜಿಲ್ಲಾ ಕಾಂಗ್ರೆಸ್
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕಾರ ಮಾಡಿರುವ ದೃಶ್ಯವನ್ನು ಕಾಪು ಕಾಂಗ್ರೆಸ್ ಎಲ್‍ಇಡಿ ಸ್ಕ್ರೀನ್ ಮೂಲಕ ಕಾಪು ಪೇಟೆಯಲ್ಲಿ ಸಾರ್ವಜನಿಕರ ವೀಕ್ಷಣೆಗೆ ಇಟ್ಟು ಸಂಭ್ರಮಾಚರಣೆ ನಡೆಸಿದ್ದಾರೆ.ಸಿದ್ಧರಾಮಯ್ಯ ಹಾಗೂ ಅವರ ತಂಡ ಪ್ರಮಾಣವಚನ ಸ್ವೀಕರಿಸುತ್ತಿದಂತೆ ಕಾಂಗ್ರೆಸ್ ಕಾರ್ಯಕರ್ತರು ಸುಡುಮದ್ದು ಸಿಡಿಸಿ…ಸಾರ್ವಜನಿಕರಿಗೆ ಸಿಹಿ ಹಂಚಿ ಸಿದ್ದರಾಮಯ್ಯ ಹಾಗೂ ವಿನಯ ಕುಮಾರ್ ಸೊರಕೆ ಪರ ಘೋಷಣೆಯನ್ನು ಕೂಗಿ
ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಅವರನ್ನ ಬುಧವಾರ ತಡರಾತ್ರಿ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ವರದಿಯಾಗಿದೆ. ಜೊತೆಗೆ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿದ್ದ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರೇ ಮುಂದುವರಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಸಂಜೆ 7 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ
ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ಎಸಗಿದವರು ಯಾರು ಎಂದು ಗೊತ್ತಿದ್ದರೂ, ಬಿಜೆಪಿ ಪ್ರತಿಭಟನಾ ನಾಟಕ ಮಾಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಆಗಿರುವುದು ಕೈಲಾಗದವರು ಮೈ ಪರಚಿಕೊಂಡಂತೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಇವತ್ತು ಪರಿಸ್ಥಿತಿ ಎನಾಗಿದೆ ಎಂದರೆ ಬಿಜೆಪಿ ವಿಲವಿಲ ಒದ್ದಾಡುತ್ತಿದೆ. ಯಾರಿಗೂ ಚಪ್ಪಲಿ ಹಾಕುವ ದುಸ್ತಿತಿ ನಮ್ಮ ಪಕ್ಷಕ್ಕೆ
ಚುನಾವಣಾ ರಾಜಕೀಯದಿಂದ ನಿವೃತ್ತಗೊಳ್ಳುತ್ತಿದ್ದೇನೆ. ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಬಿ.ರಮಾನಾಥ ರೈ ಘೋಷಿಸಿದ್ದಾರೆ. ಅವರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಶ್ರಮಿಸಿದ ರಾಜ್ಯದ ಜನತೆಗೆ ಹಾಗೂ ನನ್ನ ಕ್ಷೇತ್ರದಲ್ಲಿ ನನಗೆ ಮತ ಚಲಾಯಿಸಿದ ಮತದಾರರಿಗೆ, ಪಕ್ಷದ
ಕಾರ್ಕಳ: ಕರಾವಳಿಯ ಎರಡು ಜಿಲ್ಲೆಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನ ಪಡೆದಿದೆ. ಗೆಲುವಿನ ಹಾಗೂ ಸೋಲಿನ ಅಂತರದ ಕಾರಣದ ಬಗ್ಗೆ ಆತ್ಮಾವಲೋಕನ ನಡೆಸಿ ಉಭಯ ಜಿಲ್ಲೆಯ ನಾಯಕರು ಪಕ್ಷವನ್ನು ಮುಂಬರುವ ಚುನಾವಣೆಗೆ ಸಿದ್ಧಗೊಳಿಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಡಿ.ಆರ್ ರಾಜು ಹೇಳಿದರು. ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕಾಂಗ್ರೆಸ್ ಪರ ಅಲೆಯಿಂದ 135 ಸೀಟು ಗೆದ್ದಿದೆ. ಆದರೆ ಎರಡು
ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರಭಾವ ಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು ಇದು ಯಾರ ಕೃತ್ಯ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಬೇಕು. ಸುತ್ತಮುತ್ತಲಿರುವ ಸಿ ಸಿ ಕೆಮರಾ ಪರಿಶೀಲಿಸಿ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಬೇಕು. ಘಟನೆಯ ಖಂಡಿಸಿ ಬಿಜೆಪಿಯವರು ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಶಾಸಕರು ಪರೋಕ್ಷವಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡಿದ್ದು
ಚುನಾವಣೆಯಲ್ಲಿ ಕಾರ್ಯಕರ್ತರು ಒಂದು ಪಕ್ಷದ ಪರ ಮತ್ತು ವಿರುದ್ದ ಕೆಲಸ ಮಾಡುವುದು ಸಾಮಾನ್ಯ ಚಟುವಟಿಕೆ ಆದರೆ ನನ್ನ ವಿರುದ್ಧ ಕೆಲಸ ಮಾಡಿದವರನ್ನು ನೋಡಿಕೊಳ್ಳುತ್ತೇನೆ ಎಂದು ವಿಜಯೋತ್ಸವದಲ್ಲಿ ಶಾಸಕ ಸುನೀಲ್ ಕುಮಾರ್ ಆಡಿದ ಮಾತನ್ನು ತೀವ್ರವಾಗಿ ಖಂಡಿಸುತ್ತೇನೆ, ಕಾರ್ಯಕರ್ತರಿಗೆ ಬೆದರಿಕೆ ಹಾಕಿದ ಶಾಸಕನ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರರಾದ
ಬೆಳ್ತಂಗಡಿಯ ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿಯವರ ಮೇಲೆ ಹಲ್ಲೆ ನಡೆದಿದ್ದು. ಹಲ್ಲೆಗೆ ಒಳಗಾದ ದಯಾನಂದ ಪೂಜಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕರಾದ ಕೆ ವಸಂತ ಬಂಗೇರ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಭೇಟಿ ಮಾಡಿ ಧೈರ್ಯ ತುಂಬಿದರು. ತಾಲೂಕಿನಲ್ಲಿ ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಹಲವು ಕಡೆಗಳಲ್ಲಿ ಕಾಂಗ್ರೆಸ್
ಮಂಜೇಶ್ವರ : ಕರ್ನಾಟಕದ ವಿಧಾನಸಭಾ ಚುನಾವಣೆ ಫಲಿತಾಂಶ ಬಡವರ ಸಂಕಷ್ಟಗಳ ಮುಂದೆ ಗಿಮಿಕ್ ಮಾಡಿದ ಬಿಜೆಪಿಗೆ ಮರೆಯಲಾಗದ ಹೊಡೆತ ನೀಡಿದೆ ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮುಹಮ್ಮದ್ ಡಿಎಂಕೆ ಹೇಳಿದ್ದಾರೆ. ಜನರ ದೈನಂದಿನ ಸಮಸ್ಯೆಗಳಿಗೆ ಕಿವಿಗೊಡದೆ, ಚುನಾವಣಾ ಸಮಯದಲ್ಲಿ ಕರ್ನಾಟಕದ ಮಣ್ಣಿಗೆ ವಕ್ಕರಿಸಿ ವಿವಿಧ ಗಿಮಿಕ್ ಮಾಡಿ, ಜನರ ಭಾವನೆಗಳೊಂದಿಗೆ ಆಟವಾಡುವ ಮೋದಿ,ಅಮಿತ್ ಶಾ, ಯೋಗಿ ಎಂಬ ದ್ವೇಷದ ಮಾರಾಟಗಾರರಿಗೆ ಜನರು ಸರಿಯಾದ ಉತ್ತರ