ಉಳ್ಳಾಲ: ಸಮಾಜವನ್ನು ಒಗ್ಗಟ್ಟು ಮಾಡುವ ಮೂಲಕ ಬಿಕ್ಕಟ್ಟು ಮಾಡಲು ಬಿಡದೆ ಮುಂದಿನ ಸರಕಾರ ಕಾರ್ಯಾಚರಿಸಲಿದ್ದು, ಸರ್ವ ಧರ್ಮದವರನ್ನು ಪ್ರೀತಿಸಿಕೊಂಡು ಸರ್ವರಿಗೂ ನ್ಯಾಯ ಕೊಟ್ಟು ಗ್ಯಾರಂಟಿ ಕಾರ್ಡ್ ಅತಿಶೀಘ್ರದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ತೊಕ್ಕೊಟ್ಟುವಿನಿಂದ ಉಳ್ಳಾಲಕ್ಕೆ ಬೈಕ್ ರ್‍ಯಾಲಿ ಮತ್ತು ರೋಡ್
ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದರು. ಅಲ್ಲಿಯೂ ಅಶೋಕ್ ಕುಮಾರ್ ರೈ ಅವರ ದೊಡ್ಡ ಸಂಖ್ಯೆಯ ಅಭಿಮಾನಿಗಳು
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಸೈಂಟ್ ಆಗ್ನೇಸ್ ಹಿರಿಯ ಪ್ರಾಥಮಿಕ ಶಾಲೆ, ಬೆಂದೂರಿನಲ್ಲಿ ತಮ್ಮ ಮತ ಚಲಾಯಿಸಿದರು.
ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಇಂದು ಬೆಳಗ್ಗೆ ಅರಂಭಗೊಂಡಿತು.ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಗರದ ಬೆಂದೂರ್‍ನ ಸಂತ ಸಬೆಸ್ಟಿಯನ್ ಹಿ.ಪ್ರಾ.ಶಾಲೆಯಲ್ಲಿ ಮತದಾನಗೈದರು.
ವಿಟ್ಲ: ಕಳೆದ ಐದು ವರುಷದ ಅವಧಿಯ ಆಡಳಿತ ಅನುಭವ ಹೊಂದಿರುವ ಬಂಟ್ವಾಳ ಕ್ಷೇತ್ರದ ಮತದಾರರು ಮತ್ತೊಮ್ಮೆ ರಮಾನಾಥ ರೈಯವರನ್ನು ಕ್ಷೇತ್ರದ ಶಾಸಕರನ್ನಾಗಿ ಆಯ್ಕೆ ಮಾಡುವ ನಿರ್ಧಾರದಲ್ಲಿದ್ದಾರೆ ಎಂದು ಬಂಟ್ವಾಳ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಚುನಾವಣಾ ಉಸ್ತುವಾರಿಯಾಗಿರಯವ ಪಂಚಾಯತ್ ರಾಜ್ ಘಟಕದ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲುರವರು ಹೇಳಿದರು. ಅವರು ಕೊಳ್ನಾಡು ವಲಯ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಚುನಾವಣೆ
ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಬ್ರಹ್ಮಾವರದ ಹಾರಾಡಿ-ಹೊನ್ನಾಳ ವಾರ್ಡ್ ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಮನೆಮನೆಗೆ ತೆರಳಿ ಮತಯಾಚಿಸಿದರು. ಕಾಂಗ್ರೆಸ್ ಮುಂಖಡರಾದ ಅಲ್ತಾಫ್ ಅಹಮದ್ ನೇತೃತ್ವದಲ್ಲಿ ಪ್ರಸಾದ್ ರಾಜ್ ಕಾಂಚನ್ ಪರ ಮನೆಮನೆ ಪ್ರಚಾರ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.
ಬಂಟ್ವಾಳ: ಜಾತ್ಯಾತೀತ ಶಕ್ತಿಗಳು ಒಂದಾಗಿ ಕೋಮುವಾದಿ ಪಕ್ಷಗಳನ್ನು ಸೋಲಿಸಿಬೇಕು, ಕಣ್ಣಿಗೆ ಕಾಣುವ ದೇವತಾ ಮನುಷ್ಯ-ಅಭಿವೃದ್ಧಿಯ ಹರಿಕಾರ ಬಿ.ರಮಾನಾಥ ರೈಯವರನ್ನು ಬೆಂಬಲಿಸಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಚಂದ್ರಶೇಖರ್ ಪೂಜಾರಿ ಕರೆ ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೋಮುವಾದಿ ಪಕ್ಷಗಳಾದ ಬಿಜೆಪಿ ಮತ್ತು ಎಸ್.ಡಿ.ಪಿ.ಗೆ ಮತ ಹಾಕಿದರೆ
ಧಾರ್ಮಿಕ ಕೇಂದ್ರಗಳು ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶುಭದ ರಾವ್ ಹೇಳಿದರು. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಾರ್ಕಳ ಮಾರಿಗುಡಿಯ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವವು ದೇವಿಯ ಇಚ್ಚೆಯಂತೆ ಭಕ್ತಾಭಿಮಾನಿಗಳು ಹಾಗೂ ದಾನಿಗಳ ಸಹಕಾರದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಆದರೆ ತಾವೂ ಮತ್ತು ತಮ್ಮ ಹಿಂಬಾಲಕರು ದೇವಳದ
ಪುತ್ತೂರು: ಚುನಾವಣೆಗೆ ಸ್ಪರ್ದಿಸುತ್ತಿದ್ದೇನೆ ವೋಟು ಸಿಗಬೇಕು ಎಂದು ಜನತೆಗೆ ಸುಳ್ಳು ಭರವಸೆಯನ್ನು ಕೊಡುವುದಿಲ್ಲ ಮತ್ತು ಮಾತು ಕೊಟ್ಟಿದ್ದರೆ ಅದಕ್ಕೆ ತಪ್ಪಿ ನಡೆಯಲಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಹೇಳಿದರು. ಮಾಣಿಲ ಗ್ರಾಮದ ವಿವಿಧ ದಲಿತ ಕಾಲೊನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕಾಲನಿಯ ನಿವಾಸಿಗಳು ತಮ್ಮ ಸಮಸ್ಯೆಗಳನ್ನು ಅಶೋಕ್ ರೈ ಬಳಿ ಹೇಳಿಕೊಂಡರು. ಕಳೆದ ಹಲವು ವರ್ಷಗಳಿಂದ ನಾವು ಮನೆ ಮಾಡಿಕೊಂಡಿದ್ದು
ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಮಿಥುನ್ ರೈ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿ, ನೆಲ್ಲಿಕಾರು ಗ್ರಾಮ ಪಂಚಾಯಿತಿ ವ್ಯಾಪಿ ಹಾಗೂ ವಾಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾರ ಬಾಂಧವರನ್ನು ಭೇಟಿ ಮಾಡಿ ಮತಯಾಚನೆಯನ್ನು ನಡೆಸಿದರು.