Home Posts tagged #congress (Page 12)

ಮಲ್ಪೆ : ಮೀನುಗಾರ ಮಹಿಳೆಯರ ಕಷ್ಟಗಳನ್ನು ಆಲಿಸಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್

ಉಡುಪಿಯ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಮಲ್ಪೆಯಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಇದೇ ವೇಳೆ ಮಲ್ಪೆಯ ಮೀನುಗಾರ ಮಹಿಳೆಯರ ಕಷ್ಟಗಳನ್ನು ಆಲಿಸಿದರು.ಈ ವೇಳೆ ಮಾತನಾಡಿದ ಅವರು ಬಿಜೆಪಿ ಪಕ್ಷವು ಸುಳ್ಳು ಭರವಸೆಯನ್ನು ನೀಡಿ ಮತ ಪಡೆದು ಯಾವ ಕೆಲಸವನ್ನು ಮಾಡದೆ ಮೋಸ ಮಾಡಿದೆ. ಮುಂಬರುವ ಚುನಾವಣೆಯಲ್ಲಿ ಗೆದ್ದು ನಾನು ಶಾಸಕನಾದರೆ ಮೀನುಗಾರರ

ಬಡವರಿಗೆ ಅಚ್ಛೇ ದಿನ್ ಬಂದಿಲ್ಲ : ರಮಾನಾಥ ರೈ

ಅಂಬಾನಿ, ಅದಾನಿಯಂತಹ ಶ್ರೀಮಂತರಿಗೆ ಅಚ್ಛೇದಿನ್ ಬಂದಿದೆಯೇ ಹೊರತು, ಬಡವರಿಗೆ ಅಚ್ಛೇದಿನ್ ಬಂದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಕಕ್ಯಪದವಿನಲ್ಲಿ ನಡೆದ ಪ್ರಚಾರಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಗ್ಯಾರಂಟಿಗಳನ್ನು ಬಿಜೆಪಿಗರು ಲೇವಡಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರಕಾರ ಉಚಿತ ಅಕ್ಕಿ ಕೊಟ್ಟಾಗ ಇಂತಹುದೇ ಮಾತುಗಳನ್ನಾಡುತ್ತಿದ್ದರು. ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಆದರೆ

ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೋ ಅವರಿಂದ ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಮತಯಾಚನೆ

ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೋ ಅವರು ದೇರೆಬೈಲ್ ದಕ್ಷಿಣ ವಾರ್ಡಿನ ವ್ಯಾಪ್ತಿಯ ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಮನೆ ಮನೆಗೆ ಬೇಟಿ ನೀಡಿ ಮತಯಾಚಿಸಿದರು

ಕಡಬ: ಸುಳ್ಯ ಕ್ಷೇತ್ರದಲ್ಲಿ  ಕಾಂಗ್ರೆಸ್‌ಗೆ ಗೆಲುವು ನಿಶ್ಚಿತ: ಎಐಸಿಸಿ ಸದಸ್ಯ ಸುನಿಲ್ ಕೇದಾರ್

ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿನ ಅಭ್ಯರ್ಥಿ ಆಯ್ಕೆಯಲ್ಲಿನ ಗೊಂದಲಗಳು ಶಮನಗೊಂಡಿದ್ದು, ಪಕ್ಷದ ಎಲ್ಲಾ  ನಾಯಕರು ಹಾಗೂ ಕಾರ್ಯಕರ್ತರು ಜೊತೆಯಾಗಿದ್ದು, ಈ ಬಾರಿ ಸುಳ್ಯ ಕ್ಷೇತ್ರದಲ್ಲಿ  ಕಾಂಗ್ರೆಸ್ ಪಕ್ಷವು ಅತ್ಯದಿಕ ಮತಗಳಿಂದ ಗೆಲವು ಸಾದಿಸುವುದು ನಿಶ್ಚಿತ ಎಂದು ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ವೀಕ್ಷಕರಾಗಿ ಆಗಮಿಸಿರುವ ಮಹಾರಾಷ್ಟದ ಮಾಜಿ ಸಚಿವ, ಎಐಸಿಸಿ ಸದಸ್ಯ ಸುನಿಲ್ ಕೇದಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಬುಧವಾರ  ಕಡಬ

ನಾವು ಕುಚ್ಚಲಕ್ಕಿ ಕೊಟ್ಟೇ ಕೊಡ್ತೀವಿ : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ

ಪುತ್ತೂರು: ಪಡಿತರ ವಿತರಣೆಯಲ್ಲಿ ಇದುವರೆಗೆ ಬೆಳ್ತಿಗೆ ಮತ್ತು ಬಿಳಿ ಅಕ್ಕಿಯನ್ನು ನೀಡಲಾಗುತ್ತಿದೆ. ಕರಾವಳಿ ಭಾಗದ ಜನ ಕುಚ್ಚಲಕ್ಕಿ ಅನ್ನ ಊಟ ಮಾಡುವ ಕಾರಣ ಈ ಭಾಗಕ್ಕೆ ರೇಶನ್ ಮೂಲಕ ಕುಚ್ಚಲಕ್ಕಿ ನೀಡಬೇಕು ಎಂಬ ಬೇಡಿಕೆ ಇದ್ದು ಈ ಬೇಡಿಕೆಯನ್ನು ಈಬಾರಿ ಕಾಂಗ್ರೆಸ್ ಈಡೇರಿಸಲಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭರವಸೆ ನೀಡಿದ್ದಾರೆ. ವಿಟ್ಲ ಕಂಬಳಬೆಟ್ಟುವಿನಲ್ಲಿ ರಾತ್ರಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕರಾವಳಿ ಗೆ ಕುಚ್ಚಲಕ್ಕಿ

ಸುರತ್ಕಲ್‍ನಲ್ಲಿ ಕಾಂಗ್ರೆಸ್ ವತಿಯಿಂದ ಭರ್ಜರಿ ರೋಡ್ ಶೋ

ಸುರತ್ಕಲ್: “ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರದ ಚುಕ್ಕಾಣಿ ಪಡೆಯಲಿದೆ. ಇನಾಯತ್ ಅಲಿ ಅವರಂತಹ ಸಮರ್ಥ ಅಭ್ಯರ್ಥಿಯನ್ನು ಪಕ್ಷವು ಕಣಕ್ಕಿಳಿಸಿದೆ. ಮತದಾರ ಬಾಂಧವರು ಜಾತಿ ಮತ ಬೇಧ ಮರೆತು ಎಲ್ಲರನ್ನೂ ಸಮಾನವಾಗಿ ಕಾಣುವ ಇನಾಯತ್ ಅಲಿ ಅವರನ್ನು ಬೆಂಬಲಿಸಿ” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದರು. ಅವರು ಸುರತ್ಕಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿಯವರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತಾಡಿದರು.

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

ಬೆಳ್ತಂಗಡಿಯ ಬಿಜೆಪಿ ಪಕ್ಷದಿಂದ ಬೇಸತ್ತು, ಬಹಿರಂಗವಾಗಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕುಲಾಲ್ ಸಮುದಾಯದ ಮುಖಂಡರಾದ ಚಂದಪ್ಪ ಕುಲಾಲ್ ಅವರು ಮಾಜಿ ಶಾಸಕರಾದ ವಸಂತ ಬಂಗೇರರ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದಾರೆ. ಮಡಂತ್ಯಾರನಲ್ಲಿ ನಡೆದ ಪಕ್ಷ ಸೇರ್ಪಡೆಯಲ್ಲಿ ಕಾಂಗ್ರೆಸ್ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಮಾತ್ನಾಡಿ, ಚಂದಪ್ಪ ಕುಲಾಲ್ ಅವರಂತಹ ಪ್ರಮುಖರು

ಬಂಟ್ವಾಳ : ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಪರ ಪ್ರಚಾರ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪರ್ಲಿಯ ಪ್ರದೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್ ಅವರು ಮನೆ ಮನೆಗಳಿಗೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಿ ಬಿ. ರಮಾನಾಥ ರೈ ಅವರ ಪರವಾಗಿ ಪ್ರಚಾರ ನಡೆಸಿದರು.

ಮೂಡುಬಿದಿರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮತಯಾಚನೆ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ವಾಲ್ಪಾಡಿ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿರುವ ಗೇರು ಬೀಜ ಫ್ಯಾಕ್ಟ್ರಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಟಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್, ಎಪಿಎಂಸಿಯ ಮಾಜಿ ಅಧ್ಯಕ್ಷ ಪ್ರವೀಣ್ ಜೈನ್, ವಾಲ್ಪಾಡಿ ಗ್ರಾ.ಪಂ.

ಆರ್ಯಾಪು ಮಾಜಿ ಗ್ರಾ.ಪಂ. ಸದಸ್ಯ ಜಬ್ಬಾರ್ ಕಾಂಗ್ರೆಸ್‍ಗೆ ಸೇರ್ಪಡೆ

ಆರ್ಯಾಪು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಜಬ್ಬಾರ್ ಸಂಪ್ಯ ರವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಹೇಮನಾಥ ಶೆಟ್ಟಿ ಕಾವು, ಪ್ರಸನ್ನ ಕುಮಾರ್ ಶೆಟ್ಟಿ ಹಾಗೂ ಹಲವು ಕಾಂಗ್ರೆಸ್ ನೇತಾರರ ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.